Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿದ್ದು, ಹಲವು ರಾಜ್ಯಗಳಲ್ಲಿ ಮಳೆ ಅಬ್ಬರ ಜೋರಾಗಿದೆ.
ಓಡಿಶಾದ್ಯಂತ ಭಾರಿ ಮಳೆಯಾಗುತ್ತಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಆಂಧ್ರಪ್ರದೇಶದ ಕರಾವಳಿ ಜಿಲ್ಲೆಗಳು, ತೆಲಂಗಾಣದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು ಕಟ್ಟೆಚ್ಚರ ಘೋಷಿಸಲಾಗಿದೆ. ಮಹಾರಷ್ಟ್ರ ಭಾಗದಲ್ಲಿಯೂ ವರುಣಾರ್ಭಟ ಜೋರಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಗೋವಾ, ಮಧ್ಯ ಮಹಾರಾಷ್ಟ್ರ ಭಾಗದಲ್ಲಿ ಸೆಪ್ಟೆಂಬರ್ 30ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಛತ್ತೀಸ್ ಗಡದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.