Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚೆನ್ನೈ: ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಡೆಸಿದ ರಾಜಕೀಯ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದು, ಸುಮಾರು 100 ಜನರು ಗಾಯಗೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತದಲ್ಲಿ ಮೃತಪಟ್ಟವರಿಗೆ ನಟ ವಿಜಯ್ ಪರಿಹಾರ ಘೋಷಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 20 ಲಕ್ಷ ರೂಪಾಯಿ ಪರಿಹಾರ ಘೋಷಿಸಲಾಗಿದ್ದು, ಗಾಯಗೊಂಡವರಿಗೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಲಾಗಿದೆ.
ತಡರಾತ್ರಿಯೇ ಕರೂರು ಆಸ್ಪತ್ರೆಗೆ ಭೇಟಿ ನೀಡಿದ ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ. ಆಸ್ಪತ್ರೆಗೆ ತೆರಳಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಪರಿಹಾರ ನೀಡುತ್ತೇವೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು. ಘಟನೆ ಬಗ್ಗೆ ನಿವೃತ್ತ ಹೈಕೋರ್ಟ್ ಜಡ್ಜ್ ನೇತೃತ್ವದಲ್ಲಿ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇನೆ ಎಂದು ತಿಳಿಸಿದ್ದಾರೆ.