Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಹುಣಸೆ ಹಣ್ಣನ್ನು ಸಾಮಾನ್ಯವಾಗಿ ಅಡುಗೆಯಲ್ಲಿ ರುಚಿ ಹೆಚ್ಚಿಸಲು ಬಳಸುತ್ತೇವೆ. ಅದೊಂದೇ ಅಲ್ಲದೇ ಹುಣಸೆ ಹಣ್ಣಿನ ಚಟ್ಣಿ, ಸಾಂಬಾರ್ ಮಾಡಿ ಸವಿಯಲೂಬಹುದು. ಜತೆಜತೆಗೆ ಆರೋಗ್ಯ ಪ್ರಯೋಜನಗಳೂ ಕೂಡಾ ಸಾಕಷ್ಟಿವೆ.
ಹುಣಸೆ ಹಣ್ಣಿನಲ್ಲಿ ವಿಟಮಿನ್ ಸಿ, ಇ, ಬಿ, ಕ್ಯಾಲ್ಸಿಯಂ, ಕಬ್ಬಿಣ, ಪೊಟ್ಯಾಶಿಯಂ, ರಂಜಕ, ಫೈಬರ್ ಹೇರಳವಾಗಿ ಕಂಡುಬರುತ್ತದೆ. ಇದು ದೇಹದ ಕೊಬ್ಬನ್ನು ಕರಗಿಸುವುದರ ಜೊತೆಗೆ ಹಸಿವಾಗದಂತೆ ತಡೆಯುತ್ತದೆ.
ತೂಕ ನಷ್ಟಕ್ಕೆ ಸಹಾಯಕ
ಹುಣಸೆ ಹಣ್ಣು ಫೈಬರ್ ಸಂಯುಕ್ತದಿಂದ ಸಮೃದ್ಧವಾಗಿರುತ್ತದೆ. ಇದು ಕಡಿಮೆ ಕೊಬ್ಬಿನಾಂಶವನ್ನು ಹೊಂದಿದೆ. ತೂಕ ಕಡಿಮೆ ಮಾಡಿಕೊಳ್ಳಲು ಸಹಾಯಕವಾಗಿದೆ. ಜತೆಗೆ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದಲ್ಲಿ ಹೆಚ್ಚಿನ ಫೈಬರ್ ಪ್ರಮಾಣವಿದ್ದು ನಿಮ್ಮ ಹಸಿವಿನ ನೋವನ್ನು ನಿವಾರಿಸಲು ಸಹಾಯ ಮಾಡುತ್ತದೆ.
ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ
ಹುಣಸೆ ಹಣ್ಣು ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿರುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಇದು ಯಾವುದೇ ರೀತಿಯ ಬ್ಯಾಕ್ಟೀರಿಯಾಗಳನ್ನು ತಡೆಯಲು ಸಹಾಯಕವಾಗಿದೆ. ಇದು ಆ್ಯಂಟಿ- ಸಫ್ಟಿಕ್ ಗುಣಗಳನ್ನು ಹೊಂದಿರುತ್ತದೆ.
ಹೃದಯಕ್ಕೆ ಒಳ್ಳೆಯದು
ಹುಣಸೆ ಹಣ್ಣು ಹೃದಯಕ್ಕೆ ಒಳ್ಳೆಯದು. ಇದು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಜತೆಗೆ ಉತ್ತಮ ಕೊಲೆಸ್ಟ್ರಾಲ್ಅನ್ನು ಹೆಚ್ಚಿಸುತ್ತದೆ. ರಕ್ತದೊತ್ತಡ ನಿಯಂತ್ರಣದಲ್ಲಿರುತ್ತದೆ. ಹೃದ್ರೋಗ ಅಪಾಯವನ್ನು ತಡೆಗಟ್ಟುವ ಸಾಮರ್ಥ್ಯ ಹುಣಸೆ ಹಣ್ಣಿನಲ್ಲಿದೆ.
ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ
ಆಮ್ಲೀಯವಾಗಿದ್ದರೂ ಹುಣಸೆ ಹಣ್ಣು ಜೀರ್ಣಾಂಗ ವ್ಯವಸ್ಥೆಯನ್ನು ಸುಧಾರಿಸುತ್ತದೆ. ಇದು ಪಾಲಿಫಿನಾಲ್ ಎಂಬ ಆ್ಯಂಟಿ ಆಕ್ಸಿಡೆಂಟ್ಅನ್ನು ಹೊಂದಿರುತ್ತದೆ. ಇದು ದೇಹದಲ್ಲಿನ ಉರಿಯೂತವನ್ನು ಕಡಿಮೆ ಮಾಡುತ್ತದೆ. ಆಹಾರವು ಸರಿಯಾಗಿ ಜೀರ್ಣವಾಗುವಂತೆ ನೋಡಿಕೊಳ್ಳುತ್ತದೆ.