Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ನೂತನ ಅಧ್ಯಕ್ಷರಾಗಿ ದೆಹಲಿಯ ಮಾಜಿ ಕ್ರಿಕೆಟಿಗ ಮಿಥುನ್ ಮನ್ಹಾಸ್ ಆಯ್ಕೆ ಖಚಿತವಾಗಿದೆ. ಶನಿವಾರ ಸಂಜೆ ಬಿಜೆಪಿ ಹಿರಿಯ ನಾಯಕರು ಹಾಗೂ ಬಿಸಿಸಿಐ ಅಧಿಕಾರಿಗಳು ಸಭೆ ಸೇರಿ, ಒಮ್ಮತದ ಅಭ್ಯರ್ಥಿಯನ್ನಾಗಿ ಮನ್ಹಾಸ್ರನ್ನು ಆಯ್ಕೆ ಮಾಡಿದ್ದಾರೆ. ಅಲ್ಲದೆ, ಅಧ್ಯಕ್ಷ ಸ್ಥಾನಕ್ಕೆ ಮನ್ಹಾಸ್ ಮಾತ್ರ ನಾಮಪತ್ರ ಸಲ್ಲಿಸಿದ್ದು, ಇದರೊಂದಿಗೆ ಅವರು ಅವಿರೋಧವಾಗಿ ಆಯ್ಕೆಯಾಗುವುದು ಖಚಿತವಾಗಿದೆ.
ಮಿಥುನ್ ಮನ್ಹಾಸ್ ಅವರನ್ನು ಬಿಸಿಸಿಐನ ಹೊಸ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ದೇವಜಿತ್ ಸೈಕಿಯಾ ಅವರನ್ನು ಬಿಸಿಸಿಐ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ.
ಇದಲ್ಲದೆ, ಎ. ರಘುರಾಮ್ ಭಟ್ ಅವರನ್ನು ಬಿಸಿಸಿಐ ಖಜಾಂಚಿಯಾಗಿ ಮತ್ತು ರಾಜೀವ್ ಶುಕ್ಲಾ ಅವರನ್ನು ಬಿಸಿಸಿಐ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಅರುಣ್ ಧುಮಾಲ್ ಅವರನ್ನು ಐಪಿಎಲ್ ಅಧ್ಯಕ್ಷರನ್ನಾಗಿ ಮತ್ತು ಪ್ರಭತೇಜ್ ಭಾಟಿಯಾ ಅವರನ್ನು ಜಂಟಿ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.