Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ದುಬೈ ಅಂತಾರಾಷ್ಟ್ರೀಯ ಸ್ಟೇಡಿಯಂನಲ್ಲಿ ಏಷ್ಯಾಕಪ್ 2025 ರ ಫೈನಲ್ ಪಂದ್ಯ ಆರಂಭವಾಗಿದೆ. ಈ ಹೈವೋಲ್ಟೇಜ್ ಫೈನಲ್ನಲ್ಲಿ ಭಾರತಮತ್ತು ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಿವೆ.
ಏಷ್ಯಾ ಕಪ್ ಫೈನಲ್ನಲ್ಲಿ ಈ ಎರಡೂ ತಂಡಗಳು ಮುಖಾಮುಖಿಯಾಗುತ್ತಿರುವುದು ಇದೇ ಮೊದಲು. ಭಾರತದ ನಾಯಕ ಸೂರ್ಯಕುಮಾರ್ ಯಾದವ್ ಟಾಸ್ ಗೆದ್ದು ಬೌಲಿಂಗ್ ಆಯ್ಕೆ ಮಾಡಿಕೊಂಡರು.
ಏಷ್ಯಾಕಪ್ 2025 ರ ಫೈನಲ್ ಪಂದ್ಯದಲ್ಲಿ ಭಾರತ ಮೂರು ಬದಲಾವಣೆಗಳನ್ನು ಮಾಡಿದೆ. ಶ್ರೀಲಂಕಾ ವಿರುದ್ಧದ ಸೂಪರ್ 4 ಪಂದ್ಯದ ವೇಳೆ ವಿಶ್ರಾಂತಿ ಪಡೆದಿದ್ದ ಜಸ್ಪ್ರೀತ್ ಬುಮ್ರಾ ಮತ್ತು ಶಿವಂ ದುಬೆ ತಂಡಕ್ಕೆ ಮರಳಿದ್ದಾರೆ. ಹರ್ಷಿತ್ ರಾಣಾ ಮತ್ತು ಅರ್ಷದೀಪ್ ಸಿಂಗ್ ಅವರನ್ನು ಆಡುವ ಹನ್ನೊಂದರಿಂದ ಕೈಬಿಡಲಾಗಿದೆ.