Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ನವದೆಹಲಿ : ಆನ್ಲೈನ್ ಬೆಟ್ಟಿಂಗ್ ಪ್ಲಾಟ್ಫಾರ್ಮ್ ಪ್ರಚಾರ ಪ್ರಕರಣದಲ್ಲಿ ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್, ಶಿಖರ್ ಧವನ್ ಸೇರಿದಂತೆ ಹಲವು ಸೆಲೆಬ್ರಿಟಿಗಳ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಜಾರಿ ನಿರ್ದೇಶನಾಲಯ ಮುಂದಾಗಿದೆ.
ಇಡಿ ತನಿಖೆಯ ಪ್ರಕಾರ, ಟೀಂ ಇಂಡಿಯಾದ ಕೆಲವು ಆಟಗಾರರು ಮತ್ತು ಸೆಲೆಬ್ರೆಟಿಗಳು ಈ ಅಪ್ಲಿಕೇಶನ್ ಅನ್ನು ಪ್ರಚಾರ ಮಾಡುವ ಮೂಲಕ ಕೋಟ್ಯಂತರ ರೂಪಾಯಿಗಳನ್ನು ಗಳಿಸಿದ್ದಾರೆ.
ಈ ಆದಾಯದಿಂದ ಹಲವು ಆಸ್ತಿಗಳನ್ನು ಖರೀದಿಸಲಾಗಿದೆ. ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲಿಯೂ ಆಸ್ತಿಗಳನ್ನು ಖರೀದಿಸಲಾಗಿದೆ ಎಂಬುದು ಇಡಿ ತನಿಖೆಯಿಂದ ಬಹಿರಂಗವಾಗಿದೆ. ಹೀಗಾಗಿ ಈ ಎಲ್ಲಾ ಆಸ್ತಿಗಳನ್ನು ಇಡಿ ಮುಟ್ಟುಗೋಲು ಹಾಕಿಕೊಳ್ಳಲಿದೆ.