Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ನವರಾತ್ರಿಯ ಕೊನೆ ದಿನ ದುರ್ಗದೇವಿ ಮೂರ್ತಿ ವಿಸರ್ಜನಾ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ನಗರದ ಈ ರಸ್ತೆಯಲ್ಲಿ ವಾಹನ ಸಂಚಾರವನ್ನು ನಿರ್ಬಂಧಿಸಿಲಾಗಿದೆ. ಹಾಗಿದ್ದರೆ ಯಾವ ದಿನ ಯಾವ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರುವುದಿಲ್ಲ? ಎಂಬ ಮಾಹಿತಿ ಇಲ್ಲಿದೆ. ನಗರ್ ಪುಲಿಕೇಶಿನಗರ ಸಂಚಾರ ಪೊಲೀಸ್ ಠಾಣಾ ಸರಹದ್ದಿನಲ್ಲಿ ಮಧ್ಯಾಹ್ನ 12 ಗಂಟೆಯಿಂದ ಮರುದಿನ ಬೆಳಗಿನ ಜಾವ 04 ಗಂಟೆವರೆಗೆ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ಬೆಂಗಳೂರು ಟ್ರಾಫಿಕ್ ಪೊಲೀಸರು ತಿಳಿಸಿದ್ದಾರೆ.
ಸಂಚಾರ ನಿರ್ಬಂಧ
ಕೆನ್ಸಿಂಗ್ಟನ್-ಮರ್ಫೀ ರಸ್ತೆ, ಜಂಕ್ಷನ್ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಕೆನ್ಸಿಂಗ್ಟನ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ. ಕೇವಲ ಎಂಇ.ಜಿ ಕಡೆಯಿಂದ ಕೆನ್ಸಿಂಗ್ನ್-ಮರ್ಫೀ ರಸ್ತೆ ಜಂಕ್ಷನ್ ಕಡೆಗೆ ಏಕಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ.
ಪರ್ಯಾಯ ಮಾರ್ಗಗಳು ಹೀಗಿವೆ
ಕೆನ್ಸಿಂಗ್ಟನ್ ರಸ್ತೆ ಕಡೆಯಿಂದ ಎಂ.ಇ.ಜಿ ಮೂಲಕ-ಹಲಸೂರು ಲೇಕ್ ಕಡೆಗೆ ಹೋಗುವ ವಾಹನಗಳ ಮಾರ್ಗ ಬದಲಾವಣೆ ಮಾಡಿ ಕೆನ್ಸಿಂಗ್ಟನ್ನಿಂದ ಗುರದ್ವಾರ ಜಂಕ್ಷನ್ ಬಲ ತಿರುವು- ಗಂಗಾಧರ ಚೆಟ್ಟಿ ರಸ್ತೆ-ಡಿಕನ್ಸನ್ ರಸ್ತೆ, ಬಲ ತಿರುವು ಪಡೆದು ಸೆಂಟ್ ಜಾನ್ಸ್ ರಸ್ತೆ, ಶ್ರೀ ಸರ್ಕಲ್ ಲಾವಣ್ಯ ಥಿಯೇಟರ್ ಜಂಕ್ಷನ್, ನಾಗಾ ಜಂಕ್ಷನ್ ಮುಖಾಂತರ ಪುಲಕೇಶಿನಗರ ಪ್ರಾಮಿನೇಡ್ ರಸ್ತೆ, ವೀಲರ್ಸ್ ರಸ್ತೆ ಅಥವಾ ಹಲಸೂರು ಕೆರೆ ಕಡೆಗೆ ಹೋಗಬಹುದು.
ಪಾರ್ಕಿಂಗ್ ನಿರ್ಬಂಧ
ಹಲಸೂರು ಕರೆಯ ಮುಖ್ಯದ್ವಾರ ಮತ್ತು ಸುತ್ತಲೂ ಇರುವ ಕೆನ್ಸಿಂಗ್ಟನ್ ರಸ್ತೆ-ಅಣ್ಣಸ್ವಾಮಿ ಮೊದಲೀಯಾರ್ ರಸ್ತೆ, ಟ್ಯಾಂಕ್ ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ಪಾರ್ಕಿಂಗ್ ಅನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.