Subscribe NewsicsKannada/ YouTube
newsics.com
ಚೆನ್ನೈ: ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಗುರುವಾರ ಪೊಲೀಸರು 39 ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಚೆನ್ನೈನ ಪೋರೂರ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ.
ಪೊಲೀಸರ ಪ್ರಕಾರ, ಸರ್ಕಾರಿ ಶಾಲೆಯಲ್ಲಿ ಅನುಮತಿಯಿಲ್ಲದೆ ಪೂಜೆ ಮತ್ತು ವಿಶೇಷ ಶಾಖೆ ತರಬೇತಿಯನ್ನು ಆಯೋಜಿಸಿದ್ದಕ್ಕಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದಿದೆ.
ಅಕ್ಟೋಬರ್ 2 ರಂದು ಆರ್‌ಎಸ್‌ಎಸ್ ತನ್ನ 100 ನೇ ವಾರ್ಷಿಕೋತ್ಸವವನ್ನು ಆಚರಣೆ ಮಾಡುತ್ತಿದ್ದ ಸಮಯದಲ್ಲೇ ಈ ಕ್ರಮ ತೆಗೆದುಕೊಳ್ಳಲಾಗಿದ್ದು, ಚೆನ್ನೈ ಪೊಲೀಸರು ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಬಂಧಿಸಿರುವುದನ್ನು ಬಿಜೆಪಿ ನಾಯಕಿ ತಮಿಳಿಸೈ ಸೌಂದರರಾಜನ್ ಖಂಡಿಸಿದ್ದಾರೆ. ಇದು ಶುಭ ದಿನವಾದ್ದರಿಂದ ಕಾರ್ಯಕರ್ತರನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಚೆನ್ನೈನ ಪೋರೂರ್ ಬಳಿ ಅಯ್ಯಪ್ಪಂತಂಗಲ್ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪೂರ್ವಾನುಮತಿ ಇಲ್ಲದೆ ಗುರು ಪೂಜೆ ಮತ್ತು ವಿಶೇಷ ಶಾಖೆ ತರಬೇತಿ ಅಧಿವೇಶನವನ್ನು ಆಯೋಜಿಸಿದ್ದಕ್ಕಾಗಿ 39 ಆರ್‌ಎಸ್‌ಎಸ್ ಕಾರ್ಯಕರ್ತರನ್ನು ಬಂಧಿಸಲಾಗಿದೆ.
ಆರ್‌ಎಸ್‌ಎಸ್ ಶತಮಾನೋತ್ಸವ ಮತ್ತು ಭಾರತೀಯ ಜನ ಸಂಘದ ಸಂಸ್ಥಾಪಕ ದೀನದಯಾಳ್ ಉಪಾಧ್ಯಾಯ ಅವರ ಜನ್ಮ ದಿನಾಚರಣೆಯ ಸ್ಮರಣಾರ್ಥ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ಸರ್ಕಾರಿ ಶಾಲಾ ಆವರಣದಲ್ಲಿ ನಡೆದ ಈ ಕಾರ್ಯಕ್ರಮವು ನಿಯಮಗಳನ್ನು ಉಲ್ಲಂಘಿಸಿದೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.
ಯಾವುದೇ ಅಧಿಕೃತ ಅನುಮತಿ ಪಡೆಯದ ಕಾರಣ, ಭಾಗವಹಿಸುವವರನ್ನು ವಶಕ್ಕೆ ಪಡೆದು ಸರ್ಕಾರಿ ಬಸ್‌ಗಳಲ್ಲಿ ಹತ್ತಿರದ ಸಮುದಾಯ ಭವನಕ್ಕೆ ಕರೆದೊಯ್ಯಲಾಯಿತು. ಕಾರ್ಯಕರ್ತರು ಶಾಲಾ ಆವರಣದೊಳಗೆ ಆರ್‌ಎಸ್‌ಎಸ್ ಸಮವಸ್ತ್ರ ಧರಿಸಿದ್ದರು ಎಂಬುದು ಪೊಲೀಸರ ಆರೋಪವಾಗಿದೆ.
https://twitter.com/i/status/1973696326266454278