Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬಿಗ್ ಬಜೆಟ್ ನಲ್ಲಿ ನಿರ್ಮಾಣ ಆಗಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆಯಾಗಿ ಸಖತ್ ಸದ್ದು ಮಾಡುತ್ತಿದೆ. ಮೊದಲ ದಿನವೇ ಈ ಸಿನಿಮಾ ಭರ್ಜರಿ ಕಲೆಕ್ಷನ್ ಮಾಡಿದೆ. ಬುಧವಾರ ರಾತ್ರಿ ನಡೆದ ಪ್ರೀಮಿಯರ್ ಶೋಗೆ ಜನರಿಗೆ ಉತ್ತಮ ರೆಸ್ಪಾನ್ಸ್ ಸಿಕ್ಕಿತ್ತು.
ಗುರುವಾರ (ಅಕ್ಟೋಬರ್ 2) ಕೂಡ ಎಲ್ಲ ಕಡೆಗಳಲ್ಲಿ ಹೌಸ್ಫುಲ್ ಪ್ರದರ್ಶನ ಕಂಡಿದೆ. ಈಗ ವೀಕೆಂಡ್ನಲ್ಲಿ ಕೂಡ ಸಿನಿಮಾ ಅಬ್ಬರಿಸಲಿದೆ. ಜನಸಾಮಾನ್ಯರು ಮಾತ್ರವಲ್ಲದೇ ರಾಜಕೀಯ ಕ್ಷೇತ್ರದವರು ಕೂಡ ‘ಕಾಂತಾರ: ಚಾಪ್ಟರ್ 1’ ಬಗ್ಗೆ ಆಸಕ್ತಿ ತೋರಿಸುತ್ತಿದ್ದಾರೆ. ಪ್ರತಾಪ್ ಸಿಂಹ ಅವರು ಸಿನಿಮಾ ನೋಡಲು ಇಡೀ ಚಿತ್ರಮಂದಿರದ ಟಿಕೆಟ್ ಬುಕ್ ಮಾಡಿದ್ದಾರೆ.
ಈ ಬಗ್ಗೆ ಪ್ರತಾಪ್ ಸಿಂಹ ಅವರು ಸೋಶಿಯಲ್ ಮೀಡಿಯಾದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ನಾಳೆ 4 ಗಂಟೆಗೆ ಕಾರ್ಯಕರ್ತರೆಲ್ಲ ಒಡಗೂಡಿ ಕಾಂತಾರ 2 ನೋಡೋಣ. DRCಯಲ್ಲಿ ಫುಲ್ ಸ್ಕ್ರೀನ್ ಬುಕ್ ಮಾಡಿದ್ದೇನೆ’ ಎಂದು ಪ್ರತಾಪ್ ಸಿಂಹ ಅವರು ಟ್ವೀಟ್ ಮಾಡಿದ್ದಾರೆ. ಅಂದರೆ, ಶನಿವಾರ (ಅಕ್ಟೋಬರ್ 4) ಸಂಜೆ ಅವರು ಸಿನಿಮಾ ವೀಕ್ಷಿಸಲಿದ್ದಾರೆ.
ಟಿಕೆಟ್ ಬುಕಿಂಗ್ ವಿವರವನ್ನು ಕೂಡ ಪ್ರತಾಪ್ ಸಿಂಹ ಅವರು ಹಂಚಿಕೊಂಡಿದ್ದಾರೆ. DRCಯಲ್ಲಿ 2ನೇ ಸ್ಕ್ರೀನ್ನಲ್ಲಿ ಒಟ್ಟು 197 ಟಿಕೆಟ್ಗಳನ್ನು ಅವರು ಬುಕ್ ಮಾಡಿದ್ದಾರೆ. ಇದಕ್ಕಾಗಿ ಅವರು ಒಟ್ಟು 68,920 ರೂಪಾಯಿ ಖರ್ಚು ಮಾಡಿದ್ದಾರೆ. ಸಿನಿಮಾ ನೋಡಿದ ಬಳಿಕ ಅವರು ಯಾವ ರೀತಿ ಪ್ರತಿಕ್ರಿಯೆ ನೀಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ಮೂಡಿದೆ.