newsics.com
ಮಂಡ್ಯ: ಕಾವೇರಿ ನದಿ ಪಾತ್ರದಲ್ಲಿ ಮತ್ತೆ ಪ್ರವಾಹದ ಭೀತಿ ಎದುರಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ರಂಗನತಿಟ್ಟು ಪಕ್ಷಿಧಾಮ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ನದಿ ತಟದ ಪ್ರವಾಸಿ ತಾಣಗಳಿಗೂ ಮುಳುಗಡೆ ಆತಂಕ ಎದುರಾಗಿದೆ. ಕೆಆರ್‌ಎಸ್ ಡ್ಯಾಂನಿಂದ 40 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ರಂಗನತಿಟ್ಟಿನಲ್ಲಿ ಬೋಟಿಂಗ್ ಪಾಯಿಂಟ್ ಮುಳುಗಡೆಯಾಗಿದೆ.
ಪಕ್ಷಿಗಳ ಆಶ್ರಯತಾಣ ನಡುಗಡ್ಡೆಗಳೂ ಭಾಗಶಃ ಜಲಾವೃತಗೊಂಡಿವೆ. ನೀರು ಮತ್ತಷ್ಟು ಹೆಚ್ಚಾದರೆ ವಾಕಿಂಗ್ ಪಾಥ್‌ಗೂ ನೀರು ನುಗ್ಗುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ರಂಗನತಿಟ್ಟು ಸಿಬ್ಬಂದಿ ಗೇಟ್ ಬಳಿಯೇ ಪ್ರವಾಸಿಗರನ್ನು ತಡೆದು ವಾಪಸ್ ಕಳುಹಿಸಲಾಗುತ್ತಿದೆ.
ಕೆಆರ್‌ಎಸ್ ಜಲಾಶಯದಿಂದ ನೀರು ಬಿಡುಗಡೆ ವೇಳೆ ನಿರ್ಲಕ್ಷ್ಯ ತೋರಿದ್ದರಿಂದ ಡ್ಯಾಂ ಮುಂಭಾಗದ ನಗುವನ ತೋಟದ ತಡೆಗೋಡೆ ಕುಸಿದಿರುವ ಬಗ್ಗೆ ಬುಧವಾರ ವರದಿಯಾಗಿತ್ತು.
ಕಳೆದ ಕೆಲವು ದಿನಗಳಿಂದ ಕೊಡಗು ಜಿಲ್ಲೆಯೂ ಸೇರಿದಂತೆ ಕಾವೇರಿ ಕೊಳ್ಳದ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ರೈತರ ಜೀವನಾಡಿ ಕೆಆರ್‌ಎಸ್ ಜಲಾಶಯ ಎರಡು ವರ್ಷಗಳ ನಂತರ ಸಂಪೂರ್ಣವಾಗಿ ಭರ್ತಿಯಾಗಿದೆ.
ಪಿಜಿ ಕೊಠಡಿಯಲ್ಲೇ ಯುವತಿ ಕೊಲೆ: ಪ್ರಿಯಕರನಿಂದಲೇ ಕೃತ್ಯ ಶಂಕೆ, ತನಿಖೆಗೆ ವಿಶೇಷ ಪೊಲೀಸ್ ತಂಡ ರಚನೆ