Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ತುಮಕೂರು:ಖಾಸಗಿ ಬಸ್ ಹಾಗೂ ಕಾರು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ತಾಲೂಕಿನ ಬೆಳಧರ ಗೇಟ್ ಬಳಿ ನಡೆದಿದೆ.
ತುಮಕೂರಿನಿಂದ ಪಾವಗಡಕ್ಕೆ ತೆರಳುತಿದ್ದ ಖಾಸಗಿ ಬಸ್ ಹಾಗೂ ಧರ್ಮಸ್ಥಳಕ್ಕೆ ತೆರಳುತ್ತಿದ್ದವರ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ರು. ಮತ್ತೋರ್ವ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ತುಮಕೂರು ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರಿನಲ್ಲಿ ಇದ್ದವರೆಲ್ಲರೂ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಬೇರೆ-ಬೇರೆ ಗ್ರಾಮದವರಾಗಿದ್ದಾರೆ.