Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಪಶ್ಚಿಮ ಬಂಗಾಳದ ಉತ್ತರ ಭಾಗದ ಡಾರ್ಜಿಲಿಂಗ್ , ಮಿರಿಕ್ ಮತ್ತು ಸುಖಿಯಾ ಪ್ರದೇಶಗಳಲ್ಲಿ ಭಾರೀ ಮಳೆಯಿಂದಾಗಿ ಹಲವಾರು ಭೂಕುಸಿತಗಳು ಸಂಭವಿಸಿ, ಒಂದು ಮಗು ಸೇರಿದಂತೆ ಕನಿಷ್ಠ ಐದು ಜನರು ಸಾವನ್ನಪ್ಪಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಳು ಮುಂದುವರೆದಂತೆ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ಎಚ್ಚರಿಸಿದ್ದಾರೆ. ನಿರಂತರ ಮಳೆಯಿಂದ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ರಸ್ತೆಗಳು ಕೂಸಿಹೋಗಿ, ಮನೆಗಳು ನಾಶಗೊಂಡಿವೆ.
ಡಾರ್ಜಿಲಿಂಗ್ ಜಿಲ್ಲಾ ಪೊಲೀಸ್ ತಂಡಗಳು ಪ್ರತಿಕೂಲ ಹವಾಮಾನದ ನಡುವೆ ರಕ್ಷಣಾ ಕಾರ್ಯಗಳ ನೇತೃತ್ವ ವಹಿಸಿವೆ. ಮಳೆ ಬಿಡದೇ ಸುರಿಯುತ್ತಿದ್ದು, ಮತ್ತಷ್ಟು ಭೂಕುಸಿತಗಳು ಸಂಭವಿಸುತ್ತಿದೆ. ಇದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ, ಇತ್ತ ರಕ್ಷಣಾ ಕಾರ್ಯಾಚರಣೆಗೂ ಮಳೆ ಅಡ್ಡಿ ಮಾಡುತ್ತಿದೆ.