Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ಪವರ್ ಶೇರಿಂಗ್ ವಿಚಾರ ಕಾಂಗ್ರೆಸ್ ವಲಯದಲ್ಲಿ ಕಿಚ್ಚು ಹಚ್ಚಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲಿ ಎನ್ನುವ ಆಪ್ತರ ಕೂಗು ಹೆಚ್ಚುತ್ತಿದ್ದಂತೆ ಹೈಕಮಾಂಡ್ಗೆ ಮತ್ತೆ ತಲೆ ಬಿಸಿ ಆಗಿದೆ. ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ಹಾರಿದ್ದಾರೆ.
ಅತ್ತ ನಾನೇ ಪೂರ್ಣಾವಧಿ ಸಿಎಂ ಎಂದು ಸಿದ್ದರಾಮಯ್ಯ ಕೂಗಿ ಕೂಗಿ ಹೇಳ್ತಿದ್ರೆ, ಇತ್ತ ಡಿಕೆಶಿ ಕುರ್ಚಿ ಕಸಿದುಕೊಳ್ಳಲು ನಾನಾ ಸರ್ಕಸ್ ಮಾಡ್ತಿದ್ದಾರೆ ಎನ್ನಲಾಗ್ತಿದೆ. ಇದೀಗ ಡಿಸಿಎಂ ಡಿಕೆ ಶಿವಕುಮಾರ್ ದಿಢೀರ್ ದೆಹಲಿ ಪ್ರವಾಸ ಕೈಗೊಂಡಿದ್ದಾರೆ.
ಬೆಳಿಗ್ಗೆ 10.30ಕ್ಕೆ ದೆಹಲಿಗೆ ತೆರಳಿದ್ದು, ಹೈಕಮಾಂಡ್ ಭೇಟಿಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ.ಹೈಕಮಾಂಡ್ ನಾಯಕರ ಭೇಟಿಗೆ ಮುಂದಾದ್ರ ಡಿಸಿಎಂ ಎನ್ನುವ ಮಾತುಗಳು ಕೇಳಿ ಬರ್ತಿದೆ.