Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಚಿಕ್ಕೋಡಿ:2019ರಲ್ಲಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮತ್ತು ಆಕೆಯ ಮೇಲೆ ನಡೆದ ಕ್ರೌರ್ಯತೆ ನೆನೆದು ಗ್ರಾಮಸ್ಥರ ಮುಂದೆ ತನಿಖಾಧಿಕಾರಿಯಾಗಿದ್ದ ಪೊಲೀಸ್ ಇನ್ಸ್ಪೆಕ್ಟರ್ ಗಿರಿಮಲ್ಲಪ್ಪ ಉಪ್ಪಾರ ಅವರು ಕಣ್ಣೀರು ಹಾಕಿದ ಪ್ರಸಂಗ ನಡೆಯಿತು.
ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ ಅಪರಾಧಿಗೆ ಇತ್ತೀಚೆಗೆ ನ್ಯಾಯಾಲಯವು ಗಲ್ಲು ಶಿಕ್ಷೆ ವಿಧಿಸಿ, 10 ಲಕ್ಷ ರೂಪಾಯಿ ದಂಡ ಕಟ್ಟುವಂತೆ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯ ಸಂತ್ರಸ್ತೆಯ ಗ್ರಾಮದಲ್ಲಿ ಶುಕ್ರವಾರ ಸಂಜೆ ‘ಶಿಕ್ಷೆಗೆ ಸಂಭ್ರಮ, ಮಿಡಿದ ಮನಗಳ ಸಂಗಮ’ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಇದೇ ವೇಳೆ ಗ್ರಾಮಸ್ಥರೆಲ್ಲರೂ ರಸ್ತೆಯಲ್ಲಿ ಮೊಂಬತ್ತಿ ಹಿಡಿದು ಸಾಗುವ ಮೂಲಕ ಬಾಲಕಿಗೆ ಶ್ರದ್ಧಾಂಜಲಿ ಸಲ್ಲಿಕೆ ಮಾಡಿದರು.
ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಭಾಷಣ ಮಾಡುವಾಗ ಭಾವುಕರಾದ ಪಿಎಸ್‌ಐ ಗಿರಿಮಲ್ಲಪ್ಪ ಅವರು ಬಿಕ್ಕಿಬಿಕ್ಕಿ ಅತ್ತರು. ಅಂದು ಅಪ್ರಾಪ್ತ ಬಾಲಕಿಯ ಮೇಲೆ ನಡೆದಿದ್ದ ಕ್ರೂರತನ ನೆನದು ಕಣ್ಣೀರಾಕಿದರು. ಈ ಘಟನೆ ಗ್ರಾಮಸ್ಥರಲ್ಲಿ ತೀವ್ರ ಕೋಪ ಮತ್ತು ದುಃಖವನ್ನು ಮೂಡಿಸಿತ್ತು, ಆದರೆ ಇಂದಿನ ತೀರ್ಪು ನ್ಯಾಯದ ಗೆಲುವಿನ ಸಂಕೇತವಾಗಿದೆ