Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ವಿಚ್ಛೇದನದ ಬಗ್ಗೆ ಸುಳ್ಳು ಹೇಳಿದ್ದಾರೆ, ತೇಜೋವಧೆ ಸಹಿಸಲ್ಲ: ಜಾಹ್ನವಿಯ ಮಾಜಿ ಪತಿ ಆಕ್ರೋಶ
ಪ್ರಮುಖಮನರಂಜನೆ

ವಿಚ್ಛೇದನದ ಬಗ್ಗೆ ಸುಳ್ಳು ಹೇಳಿದ್ದಾರೆ, ತೇಜೋವಧೆ ಸಹಿಸಲ್ಲ: ಜಾಹ್ನವಿಯ ಮಾಜಿ ಪತಿ ಆಕ್ರೋಶ

Share
2 Min Read
SHARE

Newsics_Kannada

Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ನಿರೂಪಕಿ ಜಾಹ್ನವಿ ಅವರು ಬಿಗ್ಬಾಸ್ ಮನೆ ಪ್ರವೇಶಿಸಿದ್ದಾರೆ. ಜಾಹ್ನವಿ ಅವರು ಬಿಗ್ಬಾಸ್ಗೆ ಪ್ರವೇಶಿಸುವ ಮೊದಲು ಗ್ರ್ಯಾಂಡ್ ಓಪನಿಂಗ್ನಲ್ಲಿ ತಮಗೆ ವಿಚ್ಛೇದನ ಆಗಿದ್ದ ಕುರಿತು ಹೇಳಿಕೊಂಡಿದ್ದರು. ತಮ್ಮ ಪತಿಗೆ ಎರಡನೇ ಸಂಬಂಧ ಇತ್ತು, ನನ್ನ ಜೊತೆಗಿದ್ದಾಗಲೇ ಅವರಿಗೆ ಮದುವೆ ಆಗಿ ಮಗು ಇತ್ತು ಎಂದು ಹೇಳಿದ್ದರು.
ಇದೇ ಕಾರಣಕ್ಕೆ ತಾವು ವಿಚ್ಛೇದನ ಮಾಡಿಕೊಂಡಿದ್ದಾಗಿ ಹೇಳಿಕೊಂಡಿದ್ದರು. ಆದರೆ ಇದೀಗ ಜಾಹ್ನವಿಯ ಮಾಜಿ ಪತಿ ಕಾರ್ತಿಕ್ ಅವರು ಜಾಹ್ನವಿ ಮಾಡಿರುವ ಆರೋಪಗಳನ್ನು ತಳ್ಳಿ ಹಾಕಿದ್ದು, ಜಾಹ್ನವಿ ನನ್ನ ತೇಜೋವಧೆ ಮಾಡುತ್ತಿರುವುದನ್ನು ಸಹಿಸುವುದಿಲ್ಲ ಎಂದಿದ್ದಾರೆ.

ಜಾಹ್ನವಿಯ ಮಾಜಿ ಪತಿ ಕಾರ್ತಿಕ್ ಮಾತ್ರವೇ ಅಲ್ಲದೆ ಕಾರ್ತಿಕ್ ಅವರ ಹಾಲಿ ಪತ್ನಿ ಸಹ ಜಾಹ್ನವಿ ಮಾಡಿರುವ ಆರೋಪಗಳ ಬಗ್ಗೆ ಗರಂ ಆಗಿದ್ದಾರೆ. ಜಾಹ್ನವಿ ಹಾಗೂ ಕಾರ್ತಿಕ್ ಮದುವೆ ಮುರಿಯಲು ತಾವು ಕಾರಣ ಅಲ್ಲ ಎಂದು ಕಾರ್ತಿಕ್ ಅವರ ಹಾಲಿ ಪತ್ನಿ ಹೇಳಿದ್ದಾರೆ. ಅಲ್ಲದೆ ಜಾಹ್ನವಿ ಸುಳ್ಳುಗಳನ್ನು ಹೇಳಿ ಸಿಂಪಥಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ.

ಸಂದರ್ಶನದಲ್ಲಿ ಮಾತನಾಡಿರುವ ಜಾಹ್ನವಿಯ ಮಾಜಿ ಪತಿ ಕಾರ್ತಿಕ್, ‘ಮದುವೆ ಆದ ಹೊಸತರಲ್ಲಿ ಎಲ್ಲವೂ ಚೆನ್ನಾಗಿತ್ತು, ಚಿತ್ರದುರ್ಗದಲ್ಲಿ ನಮ್ಮ ಉದ್ಯಮ ಇತ್ತು, ಬೆಂಗಳೂರಿನಲ್ಲಿ ನಾನು ಐಟಿ ಕೆಲಸದಲ್ಲಿದ್ದೆ. ಆದರೆ ಮದುವೆ ಆಗಿ ಕೆಲ ಸಮಯದ ಬಳಿಕ ನನ್ನ ತಾಯಿಯೊಟ್ಟಿಗೆ ಜಾಹ್ನವಿಗೆ ಹೊಂದಾಣಿಕೆ ಆಗದ ಕಾರಣ ಜಾಹ್ನವಿ ಬಲವಂತದಿಂದ ಬೇರೆ ಮನೆ ಮಾಡಿಸಿದರು. ಬಳಿಕ ಸ್ವಂತ ಮನೆ ಬೇಕೆಂದು ಪಟ್ಟು ಹಿಡಿದ ಕಾರಣ ನಾನು ಅಪಾರ್ಟ್ಮೆಂಟ್ ಒಂದನ್ನು ಬಾಡಿಗೆಗೆ ಪಡೆದುಕೊಂಡೆ’ ಎಂದಿದ್ದಾರೆ.

ಆದರೆ ನನ್ನ ಕೆಲಸ ಹೋಗಿ, ಊರಿನ ಉದ್ಯಮವೂ ಡಲ್ ಆದ ಬಳಿಕ ಜಾಹ್ನವಿ ವರ್ತನೆ ಬದಲಾಯ್ತು. ಜಾಹ್ನವಿ ಉದ್ಯೋಗಕ್ಕೆ ಹೋಗಿ ಕೆಲ ಕಾಲ ಮನೆಯ ಇಎಂಐ ಅನ್ನು ಸಹ ಕಟ್ಟಿದರು. ಆದರೆ ಇಡೀ ಮನೆಯ ಸಾಲ ಅವರೇ ತೀರಿಸಿದರು ಎಂಬುದು ಸುಳ್ಳು, 60 ಸಾವಿರ ಸಂಬಳದಲ್ಲಿ 1.50 ಕೋಟಿಯ ಫ್ಲ್ಯಾಟ್ ಖರೀದಿ ಮಾಡಲು ಸಾಧ್ಯವಾ? ಎಂದು ಕಾರ್ತಿಕ್ ಪ್ರಶ್ನೆ ಮಾಡಿದ್ದಾರೆ.

ಕುಡಿದು ಬಂದು ಜಾಹ್ನವಿಯ ಮೇಲೆ ಹಲ್ಲೆ ಮಾಡಿದ ವಿಷಯದ ಬಗ್ಗೆ ಮಾತನಾಡಿರುವ ಅವರು, ‘ಹೌದು, ಹಲ್ಲೆ ಮಾಡಿರುವುದು ನಿಜ. ನಾನು ಜೊತೆಗಿದ್ದಾಗಲೂ ಬೇರೊಬ್ಬ ಗಂಡಸಿನ ಜೊತೆಗೆ ಸಲುಗೆಯಿಂದ ಇರುವುದು, ಖಾಸಗಿ ಫೋಟೊಗಳನ್ನು ಹಂಚಿಕೊಳ್ಳುವುದು ನೋಡಿದಾಗ ನನಗೆ ಸಿಟ್ಟು ಬಂದು ಹಾಗೆ ಮಾಡಿದ್ದೇನೆ’ ಎಂದಿದ್ದಾರೆ ಕಾರ್ತಿಕ್.

ನನ್ನ ತಂದೆ, ತಾಯಿ ಮೊಮ್ಮಗನನ್ನು ನೋಡಲು ಬಂದಾಗ ಕನಿಷ್ಟ ಸೌಜನ್ಯವನ್ನೂ ಅವರು ತೋರಿಸಲಿಲ್ಲ. ವಿಚ್ಛೇದನ ಆಗಿ ವರ್ಷಗಳೇ ಆದರೂ ಸಹ ನನ್ನ ಬಗ್ಗೆ ಮಾಹಿತಿಗಳನ್ನು ಕಲೆ ಹಾಕಿ ಹೀಗೆ ರಿಯಾಲಿಟಿ ಶೋಗಳಲ್ಲಿ ಮಾತನಾಡುತ್ತಿರುವುದು ಗಮನಿಸಿದರೆ ಅವರದ್ದು ವಿಕೃತ ಮನಸ್ಸು ಎಂಬುದು ಅರ್ಥವಾಗುತ್ತದೆ. ಮಗನ ಶಿಕ್ಷಣಕ್ಕೆ ವರ್ಷಕ್ಕೆ ಇಂತಿಷ್ಟು ಹಣ ಕೊಡಬೇಕೆಂದು ನ್ಯಾಯಾಲಯ ಹೇಳಿದೆ. ಅದರಂತೆ ನಾನು ಅವರ ಖಾತೆಗೆ ಹಣ ಹಾಕುತ್ತಿದ್ದೇನೆ. ಎಷ್ಟೇ ಆಗಲಿ ಅವನು ನನ್ನ ಮಗ. ಆದರೆ ಜಾಹ್ನವಿ ತಮ್ಮ ಪಾಡಿಗೆ ತಾವು ಇದ್ದರೆ ಒಳ್ಳೆಯದು. ಹೀಗೆ ನನ್ನ ಬಗ್ಗೆ, ನನ್ನ ಕುಟುಂಬದ ಬಗ್ಗೆ ಇಲ್ಲ ಸಲ್ಲದ್ದು ಹೇಳಿದರೆ ನಮ್ಮ ಕುಟುಂಬಕ್ಕೆ ಸಮಸ್ಯೆ ಆಗುತ್ತದೆ’ ಎಂದಿದ್ದಾರೆ ಕಾರ್ತಿಕ್.

Bihar Assembly Election ನ.22ರ ಮೊದಲು ಬಿಹಾರ ವಿಧಾನಸಭಾ ಚುನಾವಣೆ: ಕೇಂದ್ರ ಚುನಾವಣಾ ಆಯೋಗ

TAGGED:Jahnavi's ex-husband is furious that she lied about the divorceTejovadhe will not tolerate it.
Share This Article
Facebook Twitter Copy Link Print
Previous Article Bihar Assembly Election ನ.22ರ ಮೊದಲು ಬಿಹಾರ ವಿಧಾನಸಭಾ ಚುನಾವಣೆ: ಕೇಂದ್ರ ಚುನಾವಣಾ ಆಯೋಗ
Next Article ಪೋಷಕರೇ, ನಿಮ್ಮ ಮಕ್ಕಳು ಕುಳ್ಳಗಿದ್ದಾರೆಯೇ.? ಹಾಗಾದ್ರೆ ಈ ತರಕಾರಿ ನೀಡಿ

Popular Posts

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

Shri Lakshmi Hayagreeva Mantra | ಶ್ರೀ ಲಕ್ಷ್ಮೀ ಹಯಗ್ರೀವ ಆರಾಧನೆ: ಏಕಾಗ್ರತೆ, ಜ್ಞಾಪಕಶಕ್ತಿ ಮತ್ತು ವಿದ್ಯಾಭ್ಯಾಸದ ಯಶಸ್ಸಿಗೆ ಆಧ್ಯಾತ್ಮಿಕ ಮಾರ್ಗ

2 Min Read

Eat These Fruits for Naturally Glowing Skin: ಗ್ಲೋಯಿಂಗ್ ಸ್ಕಿನ್‌ಗಾಗಿ ಈ ಹಣ್ಣುಗಳನ್ನು ತಿನ್ನಿ! ನೈಸರ್ಗಿಕ ಕಾಂತಿಯುತ ಚರ್ಮಕ್ಕೆ ಆರೋಗ್ಯಕರ ಆಹಾರ

1 Min Read

Personality Traits Based on the Day You Were Born ನೀವು ಹುಟ್ಟಿದ ವಾರದ ದಿನದ ಪ್ರಕಾರ ನಿಮ್ಮ ಸ್ವಭಾವ ಹೇಗಿರುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?