Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Tata Trust Crisis ಟಾಟಾ ಗ್ರೂಪ್‌ನಲ್ಲಿ ಬಿರುಕು: ಅಮಿತ್ ಶಾ & ನಿರ್ಮಲಾ ಸೀತಾರಾಮನ್ ಮಧ್ಯಸ್ಥಿಕೆ, ಏನಾಗ್ತಿದೆ ಟಾಟಾ ಸಾಮ್ರಾಜ್ಯದಲ್ಲಿ?
ದೇಶಪ್ರಮುಖ

Tata Trust Crisis ಟಾಟಾ ಗ್ರೂಪ್‌ನಲ್ಲಿ ಬಿರುಕು: ಅಮಿತ್ ಶಾ & ನಿರ್ಮಲಾ ಸೀತಾರಾಮನ್ ಮಧ್ಯಸ್ಥಿಕೆ, ಏನಾಗ್ತಿದೆ ಟಾಟಾ ಸಾಮ್ರಾಜ್ಯದಲ್ಲಿ?

Share
2 Min Read
SHARE

Newsics_Kannada      

 Subscribe and watch video

ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

ಭಾರತದ ಅತಿದೊಡ್ಡ ಉದ್ಯಮ ಸಂಸ್ಥೆ ಟಾಟಾ ಗ್ರೂಪ್‌ನೊಳಗೆ ಆಂತರಿಕ ಭಿನ್ನಮತದ ಬೆಂಕಿ ಹೊತ್ತಿಕೊಂಡಿದೆ. ರತನ್‌ ಟಾಟಾ ನಿಧನದ ಬಳಿಕ ಟಾಟಾ ಗ್ರೂಪ್‌ನಲ್ಲಿ ಎಲ್ಲವೂ ಸರಿಯಿಲ್ಲ. ಈ ಆಂತರಿಕ ಕಚ್ಚಾಟ, ದೇಶದ ಆರ್ಥಿಕತೆಯ ಮೇಲೆ ಪರಿಣಾಮ ಬೀರುವ ಆತಂಕವನ್ನು ಸೃಷ್ಟಿಸಿದೆ. ಈ ಪ್ರಕ್ಷುಬ್ಧತೆ ಪರಿಸ್ಥಿತಿ ತೀವ್ರವಾಗಿದೆಯೆಂದರೆ, ದೇಶದ ಇಬ್ಬರು ಅತ್ಯಂತ ಶಕ್ತಿಶಾಲಿ ವ್ಯಕ್ತಿಗಳಾದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಪ್ರತಿಸ್ಪರ್ಧಿ ಬಣಗಳ ನಡುವೆ ಮಧ್ಯಸ್ಥಿಕೆ ವಹಿಸಲು ಮುಂದಾಗಿದ್ದಾರೆ.

ಈ ವೇಳೆ ಟಾಟಾ ಗ್ರೂಪ್‌ನ ಲೀಡರ್‌ಗಳಿಗೆ ಮೋದಿ ಸರ್ಕಾರ ಬಿಗ್‌ ಎಚ್ಚರಿಕೆಯನ್ನು ನೀಡಿದೆ. ಸಮಸ್ಯೆ ಸೃಷ್ಟಿಸುವವರನ್ನು ಕಂಪನಿಯಿಂದ ಕಿತ್ತು ಬಿಸಾಡಿ ಎಂಬ ಫ್ರೀಡಂ ಅನ್ನು ಕೂಡ ಕೇಂದ್ರ ಸರ್ಕಾರ ಟಾಟಾ ಗ್ರೂಪ್‌ಗೆ ನೀಡಿದೆ.

 

ಸೆ.11ರಂದು 77 ವರ್ಷದ ಮಾಜಿ ರಕ್ಷಣಾ ಕಾರ್ಯದರ್ಶಿ ವಿಜಯ್‌ ಸಿಂಗ್‌ ಅವರನ್ನು ಟಾಟಾ ಸನ್ಸ್‌ನ ನಿರ್ದೇಶಕ ಮಂಡಳಿಗೆ ಮರುನೇಮಕ ಮಾಡುವ ವಿಚಾರದಲ್ಲಿ ನೊಯೆಲ್‌ ಟಾಟಾ ಮತ್ತು ಮಿಸ್ತ್ರಿಬಣದ ನಡುವೆ ತಿಕ್ಕಾಟ ಶುರುವಾಗಿದೆ. ಟ್ರಸ್ಟ್‌ ಮುಖ್ಯಸ್ಥ ನೊಯೆಲ್ ಟಾಟಾ ಹಾಗೂ ವೇಣು ಶ್ರೀನಿವಾಸನ್‌ ಅವರು ವಿಜಯ್‌ ಸಿಂಗ್‌ರನ್ನು ಮರುನೇಮಿಸುವ ಪ್ರಸ್ತಾಪ ಇಟ್ಟಿದ್ದು, ಮೆಹಲಿ ಮಿಸ್ತ್ರಿ ಸೇರಿ ಉಳಿದ ಮೂವರು ವಿರೋಧ ವ್ಯಕ್ತಪಡಿಸಿದರು. ಇದರಿಂದ ಬೇಸತ್ತ ವಿಜಯ್ ಸಿಂಗ್‌ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.ಟಾಟಾ ಟ್ರಸ್ಟ್‌ನ ಆಂತರಿಕ ಕಲಹದಲ್ಲಿ ಇದೀಗ ಕೇಂದ್ರ ಸರ್ಕಾರ ಮಧ್ಯಪ್ರವೇಶಿಸಿದೆ. ಆದಷ್ಟು ಶೀಘ್ರ ಈ ಭಿನ್ನಮತ ಬಗೆಹರಿಸುವಂತೆ ಸ್ಪಷ್ಟ ಸಂದೇಶ ರವಾನಿಸಿದೆ.

 

ಮಂಗಳವಾರ ಟಾಟಾ ಟ್ರಸ್ಟ್‌ನ ಮುಖ್ಯಸ್ಥ ನೊಯೆಲ್‌ ಟಾಟಾ ಮತ್ತು ಟಾಟಾ ಸನ್ಸ್‌ನ ಎನ್‌. ಚಂದ್ರಶೇಖರನ್‌, ಟಾಟಾ ಟ್ರಸ್ಟ್‌ನ ಉಪ ಮುಖ್ಯಸ್ಥ ವೇಣು ಶ್ರೀನಿವಾಸನ್‌, ಟ್ರಸ್ಟಿಗಳಾದ ಡೇರಿಯಸ್‌ ಖಂಬಾಟಾ ಅವರನ್ನು ಕರೆಸಿಕೊಂಡು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕೆಲಕಾಲ ಮಾತುಕತೆ ನಡೆಸಿದರು. ಈ ಸಭೆಯಲ್ಲಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಕೂಡ ಪಾಲ್ಗೊಂಡಿದ್ದರು.

ಟಾಟಾ ಕಂಪನಿಯು ದೇಶದ ಅತಿದೊಡ್ಡ ಕಾರ್ಪೊರೇಟ್‌ ಕಂಪನಿಯಾಗಿದ್ದು, ಐಟಿಯಿಂದ ಹಿಡಿದು ಅಡುಗೆ ಉಪ್ಪಿನ ವರೆಗೆ ಅನೇಕ ಉದ್ಯಮಗಳಲ್ಲಿ ತೊಡಗಿಸಿಕೊಂಡಿದೆ. ಟಾಟಾ ಗ್ರೂಪ್‌ ದೇಶದಲ್ಲಿ 38 ಲಕ್ಷ ಕೋಟಿ ರು. ಮೌಲ್ಯದ 400 ಕಂಪನಿಗಳನ್ನು ಮುನ್ನಡೆಸುತ್ತಿದೆ. ಈ ಗ್ರೂಪ್‌ನಲ್ಲಿನ ಅಸ್ಥಿರತೆ ದೇಶದ ಆರ್ಥಿಕತೆ ಮೇಲೂ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇದೀಗ ಮಧ್ಯಪ್ರವೇಶಿಸಿದೆ.

Share This Article
Facebook Twitter Copy Link Print
Previous Article ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಿಗೆ ಮಳೆ ಅಲರ್ಟ್
Next Article ಇಂದಿನಿಂದ ಬೆಂಗಳೂರಿನ ಈ ರಸ್ತೆಯಲ್ಲಿ 21 ದಿನ ವಾಹನ ಸಂಚಾರ ನಿರ್ಬಂಧ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?