newsics.com
ಬೆಂಗಳೂರು: ಭಾರಿ ಮಳೆಯಿಂದ ಮುಂಜಾಗ್ರತ ಕ್ರಮವಾಗಿ ಹಲವು ಜಿಲ್ಲೆಗಳಲ್ಲಿ ಅಂಗನವಾಡಿ ಸೇರಿದಂತೆ ಶಾಲಾ ಕಾಲೇಜುಗಳಿಗೆ ನಾಳೆ ಕೂಡ ರಜೆ ಘೋಷಣೆ ಮಾಡಲಾಗಿದೆ.
ಧಾರವಾಡ, ಬೆಳಗಾವಿ, ಕೊಡಗು, ಜಿಲ್ಲೆಗಳಲ್ಲಿ ರಜೆ ನೀಡಲಾಗಿದೆ. ವ್ಯಾಪಕ ಮಳೆಯ ಹಿನ್ನೆಲೆ ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆಗಳಿಗೆ ನಾಳೆ ರಜೆ ಘೋಷಣೆ ಮಾಡಿ ಧಾರವಾಡ, ಬೆಳಗಾವಿ, ಕೊಡಗು, ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ನಿನ್ನೆ ಜಿಲ್ಲೆಯ ಎಂಟು ತಾಲೂಕುಗಳಿಗೆ ರಜೆ ಘೋಷಣೆ ಮಾಡಿದ್ದರು. ನಾಳೆಯೂ ಹೆಚ್ಚಿನ ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ.