Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್
ಕರ್ನಾಟಕಕರ್ನಾಟಕ

ಡೆಂಗ್ಯೂ ಹಾಟ್ ಸ್ಪಾಟ್ ಆದ ಬೆಂಗಳೂರು : ಅಧಿಕಾರಿಗಳಿಗೆ ಆರೋಗ್ಯ ಸಚಿವರ ಖಡಕ್ ವಾರ್ನಿಂಗ್

Share
1 Min Read
SHARE

newsics.com

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದಲ್ಲಿ ಹೆಚ್ಚು ಡೆಂಗ್ಯೂ ಪ್ರಕರಣಗಳು (Dengue Fever) ಕಂಡುಬಂದಿರುವ 10 ಜಿಲ್ಲೆಗಳಿಗೆ ಆರೋಗ್ಯ ಇಲಾಖೆ ಉಪನಿರ್ದೇಶಕರು ತೆರಳಿ ಭೇಟಿ ನೀಡಿ, ಮೇಲ್ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಇಂದು ಸೂಚನೆ ನೀಡಿದ್ದಾರೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಇಂದು ವಿಡಿಯೊ ಕಾನ್ಫರೆನ್ಸ್ ಮೂಲಕ ರಾಜ್ಯದ ಜಿಲ್ಲಾಧಿಕಾರಿಗಳು ಹಾಗೂ ಸಿಇಒ ಗಳ ಜತೆ ಸಭೆ ನಡೆಸಿದ ಸಚಿವರು, ಮಳೆ, ಪ್ರವಾಹದ ನಡುವೆ ಡೆಂಗ್ಯೂ ನಿಯಂತ್ರಣದ ಬಗ್ಗೆ ಗಮನ ಕಡಿಮೆಯಾಗಬಾರದು ಎಂದು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ 37 ಡೆಂಗ್ಯೂ ಹಾಟ್‌ಸ್ಪಾಟ್‌ಗಳನ್ನು ಗುರುತಿಸಲಾಗಿದ್ದು, ಬಿಬಿಎಂಪಿ ಅಧಿಕಾರಿಗಳ ಸಹಯೋಗದೊಂದಿಗೆ ಹೆಚ್ಚಿನ ನಿಗಾ ವಹಿಸುವಂತೆ ಸಚಿವ ದಿನೇಶ್ ಗುಂಡೂರಾವ್, ಇದೇ ವೇಳೆ ಅಧಿಕಾರಿಗಳಿಗೆ ತಿಳಿಸಿದರು.

ಇಷ್ಟರೊಳಗೆ ಡೆಂಗ್ಯೂ ಪಾಸಿಟಿವ್ ಪ್ರಕರಣಗಳಲ್ಲಿ ಇಳಿಮುಖ ಕಂಡುಬರಬೇಕಿತ್ತು. ಆರೋಗ್ಯ ಇಲಾಖೆಯಿಂದ ಜಿಲ್ಲಾಡಳಿತಕ್ಕೆ ಎಲ್ಲ ರೀತಿಯ ಸಹಕಾರ ಒದಗಿಸಲಾಗುತ್ತಿದ್ದರೂ, ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕಡಿಮೆ ಆಗುತ್ತಿಲ್ಲ. ಪ್ರಕರಣಗಳು ವರದಿಯಾಗುತ್ತಿರುವುದನ್ನು ನೋಡಿದರೆ ಇನ್ನೂ ಎರಡು ತಿಂಗಳು ನಾವು ಅಲರ್ಟ್ ಆಗಿರಬೇಕು. ಹೀಗಾಗಿ ಜಿಲ್ಲಾಡಳಿತ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ಸಹಕಾರ ನೀಡಿ ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದಿದ್ದಾರೆ.

ಜನರಲ್ಲಿ ಡೆಂಗ್ಯೂ ಬಗ್ಗೆ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಆದರೆ ಡೆಂಗ್ಯೂ ಹತೋಟಿಗೆ ತರುವ ಕ್ರಮಗಳು ಸ್ಥಳದಲ್ಲಿ ಅನುಷ್ಠಾನಗೊಳ್ಳುವುದು ಅತಿ ಮುಖ್ಯವಾಗಿದೆ. ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆಯ ಲಾರ್ವಾ ನಾಶಪಡಿಸುವ ಕಾರ್ಯಕ್ರಮ ಅಭಿಯಾನದ ರೀತಿಯಲ್ಲಿ ನಡೆಯಬೇಕು ಎಂದು ಸಚಿವರು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.‌

ವಿಶೇಷವಾಗಿ ಆರೋಗ್ಯ ಇಲಾಖೆಯ ಉಪ ನಿರ್ದೇಶಕರ ಮಟ್ಟದ ಅಧಿಕಾರಿಗಳು ಡೆಂಗ್ಯೂ ಹೆಚ್ಚಿರುವ ಹಾಟ್‌ಸ್ಪಾಟ್‌ಗಳಿಗೆ ಕೇವಲ ಭೇಟಿ ಕೊಡುವುದಲ್ಲ. ಎರಡು ಮೂರು ದಿನಗಳವರೆಗೆ ಸ್ಥಳದಲ್ಲೇ ಇದ್ದು ಮಾನಿಟರ್ ಮಾಡಬೇಕು. ಸ್ಥಳದಲ್ಲಿ ಡೆಂಗ್ಯೂ ನಿಯಂತ್ರಣ ಕ್ರಮಗಳು ಅನುಷ್ಠಾನ ಆಗುತ್ತಿದೆಯೋ ಇಲ್ಲವೋ ಎಂಬುದನ್ನು ಪರಿಶೀಲಸಿ, ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಖಡಕ್ ಆಗಿ ತಿಳಿಸಿದ್ಣಾರೆ.

TAGGED:denguefeverhealthminister-
Share This Article
Facebook Twitter Copy Link Print
Previous Article ಟೀಂ ಇಂಡಿಯಾ ಜೆರ್ಸಿಯಲ್ಲಿ ಮಹತ್ವದ ಬದಲಾವಣೆ; ವಿಡಿಯೋ ನೋಡಿ
Next Article ವೇಶ್ಯಾವಾಟಿಕೆಗೆ ರಕ್ಷಣೆ ನೀಡುವಂತೆ ಕೋರ್ಟ್‌ಗೆ ವಕೀಲನಿಂದ ಅರ್ಜಿ! ಕೆರಳಿದ ಹೈಕೋರ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖCrimeಕರ್ನಾಟಕ

Crime Case ಘೋರ ದುರಂತ; ಹೆಂಡತಿ, ಇಬ್ಬರು ಮಕ್ಕಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ; ಡೆತ್‌ನೋಟ್ ಪತ್ತೆ

1 Min Read
ಪ್ರಮುಖCrimeಕರ್ನಾಟಕ

Footpath Eviction ಪುಂಡರ ದೌರ್ಜನ್ಯ; ಜಿಬಿಎ ಅಧಿಕಾರಿಗಳ ಮೇಲೆ ಮಾರಣಾಂತಿಕ ದಾಳಿ, ಮಹಿಳಾ ಅಧಿಕಾರಿಗೆ ಪೆಪ್ಪರ್ ಸ್ಪ್ರೇ

2 Min Read
ಪ್ರಮುಖಕರ್ನಾಟಕ

DK Shivakumar ಡಿ.ಕೆ. ಶಿವಕುಮಾರ್ ಸಂಪುಟ ರೇಸ್; ಸಚಿವ ಸ್ಥಾನಕ್ಕಾಗಿ ಕ್ಯೂ ನಿಂತ ಶಾಸಕರು! ಯಾರಿಗೆ ಸಿಗಲಿದೆ ಸ್ಥಾನ?

2 Min Read

Social Networks

Facebook-f Instagram Twitter
Welcome Back!

Sign in to your account

Lost your password?