Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ
ಕರ್ನಾಟಕಪ್ರಮುಖ

ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆ

Share
2 Min Read
SHARE

newsics.com

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಕೆ ಎಸ್ ಆರ್ ಟಿ ಸಿ ಗುಡ್ ನ್ಯೂಸ್ ನೀಡಿದೆ. ಬರೋಬ್ಬರಿ ಕೆ ಎಸ್ ಆರ್ ಟಿ ಸಿಯಿಂದ 2,500 ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಮಾಡಿದೆ.

ಈ ಕುರಿತಂತೆ ಕೆ ಎಸ್ ಆರ್ ಟಿ ಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 20.10.2025ರಂದು ನರಕ ಚತುರ್ದಶಿ, ದಿನಾಂಕ 22.10.2025ರಂದು ಬಲಿಪಾಡ್ಯಮಿ ಹಬ್ಬವಿರುವುದರಿಂದ ಕರಾರಸಾ ನಿಗಮವು, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ:17.10.2025 ರಿಂದ 20.10.2025 ರವರೆಗೆ ಬೆಂಗಳೂರಿನಿಂದ ಈ ಕೆಳಕಂಡ ಸ್ಥಳಗಳಿಗೆ 2500 ಹೆಚ್ಚುವರಿ ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿರುತ್ತದೆ.
ನಂತರ ರಾಜ್ಯದ ಮತ್ತು ಅಂತರರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ದಿನಾಂಕ:22.10.2025 ಹಾಗೂ 26.10.2025ರಂದು ವಿಶೇಷ ವಾಹನಗಳನ್ನು ಕಾರ್ಯಾಚರಣೆ ಮಾಡಲಾಗುವುದು ಎಂದಿದೆ.

• ಕೆಂಪೇಗೌಡ ಬಸ್ ನಿಲ್ದಾಣದಿಂದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್, ತಿರುಪತಿ, ವಿಜಯವಾಡ, ಹೈದರಾಬಾದ್ ಮುಂತಾದ ಸ್ಥಳಗಳಿಗೆ ವಿಶೇಷ ಕಾರ್ಯಾಚರಣೆ.
• ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಮಾರ್ಗದ ಕಡೆ ಕಾರ್ಯಾಚರಣೆ.
• ತಮಿಳುನಾಡು ಮತ್ತು ಕೇರಳ ಕಡೆಗೆ ಅಂದರೆ ಮಧುರೈ, ಕುಂಭಕೋಣಂ, ಚೆನ್ನೈ, ಕೊಯಮತ್ತೂರ್, ತಿರುಚಿ, ಪಾಲಕ್ಕಾಡ್, ತ್ರಿಶೂರ್, ಏರ್ನಾಕುಲಂ, ಕೋಯಿಕೋಡ್, ಕ್ಯಾಲಿಕಟ್ ಮುಂತಾದ ಸ್ಥಳಗಳಿಗೆ ಹೋಗುವ ಪ್ರತಿಷ್ಠಿತ ಸಾರಿಗೆಗಳನ್ನು ಶಾಂತಿನಗರದಲ್ಲಿನ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು.
• ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯವನ್ನು ಕಲ್ಪಿಸಲಾಗಿದೆ.
• ಪ್ರಯಾಣಿಕರು ಬಸ್ ನಿಲ್ದಾಣಗಳಿಗೆ ತೆರಳುವ ಮುನ್ನ ಮುಂಗಡ ಕಾಯ್ದಿರಿಸಲಾಗಿರುವ ಟಿಕೇಟುಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಕೋರಲಾಗಿದೆ.
• ಇ-ಟಿಕೇಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಮುಖಾಂತರ ಮಾಡಬಹುದಾಗಿದೆ.
• ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ಅಂತರರಾಜ್ಯದಲ್ಲಿ ಇರುವ ಬುಕಿಂಗ್ ಕೌಂಟರ್‌ಗಳ ಮೂಲಕ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.
• ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೇಟು ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ & ಬರುವ ಪ್ರಯಾಣದ ಟಿಕೇಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.
• ನೆರೆ ರಾಜ್ಯಗಳಾದ ತಮಿಳುನಾಡು, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ಮಹಾರಾಷ್ಟç ಹಾಗೂ ಪುದುಚೆರಿಯಲ್ಲಿ ಇರುವ ಪ್ರಮುಖ ನಗರಗಳಲ್ಲಿ ನಿಗಮದ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳು ಇದ್ದು, ಇವುಗಳ ಮೂಲಕ ಸಹ ಮುಂಗಡವಾಗಿ ಆಸನಗಳನ್ನು ನಿಗಮದ ಸಾರಿಗೆಗಳಿಗೆ ಕಾಯ್ದಿರಿಸಬಹುದಾಗಿದೆ.
• ಕಾರ್ಯಾಚರಣೆ ಮಾಡಲಾಗುವ ಹೆಚ್ಚುವರಿ ಸಾರಿಗೆಗಳು, ಅವುಗಳು ಹೊರಡುವ ಸ್ಥಳ ಹಾಗೂ ವೇಳಾ ವಿವರಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಅಂತರ್‌ಜಾಲ ವ್ಯವಸ್ಥೆಯಲ್ಲಿ ಹಾಗೂ ಕರಾರಸಾ ನಿಗಮದ ವೆಬ್‌ಸೈಟ್‌ನಲ್ಲಿ ಸಾರ್ವಜನಿಕ ಮಾಹಿತಿಗಾಗಿ ಒದಗಿಸಲಾಗಿದೆ ಹಾಗೂ ಸದರಿ ಹೆಚ್ಚುವರಿ ಸಾರಿಗೆಗಳಲ್ಲಿ ಸಂಚರಿಸುವ ಪ್ರಯಾಣಿಕರು ಕಾಯ್ದಿರಿಸುವ ಮುಂಗಡ ಚೀಟಿಗಳಲ್ಲೂ ಕೂಡ ವಾಹನ ಹೊರಡುವ ಸ್ಥಳದ ವಿವರ ನಮೂದಿಸಲಾಗಿದೆ.
• ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲ್ಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು.

ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?

TAGGED:500 additional special busesGood news for those heading home for Diwali: KSRTC to provide 2
Share This Article
Facebook Twitter Copy Link Print
Previous Article ಬ್ರೆಡ್ ತಿಂದ್ರೆ ಕ್ಯಾನ್ಸರ್ ಬರುತ್ತಾ?; ಈ ಬಗ್ಗೆ ಡಾಕ್ಟರ್ ಹೇಳಿದ್ದೇನು?
Next Article ರಾಜ್ಯದಲ್ಲೂ ಆರೆಸ್ಸೆಸ್‌ ಚಟುವಟಿಕೆಗೆ ನಿರ್ಬಂಧ ಬಹುತೇಕ ಖಚಿತ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು?

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read
ಕರ್ನಾಟಕದೇಶಪ್ರಮುಖಮನರಂಜನೆ

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read
ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Social Networks

Facebook-f Instagram Twitter
Welcome Back!

Sign in to your account

Lost your password?