Subscribe NewsicsKannada/YouTube
newsics.com
ಬೆಂಗಳೂರು : ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ.’RSS’ ನಿಷೇಧಕ್ಕೆ ಪತ್ರ ಬರೆದ ಬೆನ್ನಲ್ಲೇ ಸಚಿವ ಪ್ರಿಯಾಂಕ್ ಖರ್ಗೆಗೆ ಜೀವ ಬೆದರಿಕೆ ಕರೆ ಬಂದಿದೆ ಎನ್ನಲಾಗಿದೆ.
ಈ ಬಗ್ಗೆ ಸ್ವತಃ ಸಚಿವ ಪ್ರಿಯಾಂಕ್ ಅವರೇ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಟ್ವೀಟ್ ನಲ್ಲಿ ಏನಿದೆ..?
ಕಳೆದ ಎರಡು ದಿನಗಳಿಂದ ನನ್ನ ಫೋನ್ ರಿಂಗಣಿಸುವುದನ್ನು ನಿಲ್ಲಿಸಿಲ್ಲ. ಸರ್ಕಾರಿ ಶಾಲೆಗಳು, ಕಾಲೇಜುಗಳು ಮತ್ತು ಸಾರ್ವಜನಿಕ ಸಂಸ್ಥೆಗಳಲ್ಲಿ ಆರ್‌ಎಸ್‌ಎಸ್ ಚಟುವಟಿಕೆಗಳನ್ನು ಪ್ರಶ್ನಿಸುವ ಹಾಗೂ ತಡೆಯುವ ಧೈರ್ಯ ಮಾಡಿದ್ದರಿಂದ ನನ್ನ ಮತ್ತು ನನ್ನ ಕುಟುಂಬದ ವಿರುದ್ಧ ಬೆದರಿಕೆಗಳು, ಅತ್ಯಂತ ಕೀಳು ಪದಗಳ ನಿಂದನೆಗಳಿಂದ ತುಂಬಿದ ಕರೆಗಳು ಬರುತ್ತಲೇ ಇವೆ.
ಆದರೆ ನಾನು ಇದರಿಂದ ವಿಚಲಿತನಾಗುವುದಿಲ್ಲ ಅಥವಾ ನನಗೆ ಅಚ್ಚರಿಯೂ ಆಗಿಲ್ಲ. ಮಹಾತ್ಮ ಗಾಂಧಿ ಅಥವಾ ಬಾಬಾಸಾಹೇಬ್ ಅಂಬೇಡ್ಕರ್ ಅವರಂತಹ ಮಹಾನ್ ನಾಯಕರನ್ನೇ ಆರ್‌ಎಸ್‌ಎಸ್ ಬಿಟ್ಟಿಲ್ಲ, ಇನ್ನು ಅವರು ನನ್ನನ್ನು ಹೇಗೆ ಬಿಡುತ್ತಾರೆ?
ಬೆದರಿಕೆಗಳು ಮತ್ತು ವೈಯಕ್ತಿಕ ನಿಂದನೆಗಳಿಂದ ನನ್ನ ಬಾಯಿ ಮುಚ್ಚಿಸಬಹುದು ಎಂದು ಅವರು ಭಾವಿಸಿದ್ದರೆ, ಅದು ಅವರ ಕಲ್ಪನೆ ಮಾತ್ರ. ಇದಿನ್ನೂ ಆರಂಭವಷ್ಟೇ.
ಇದು ಬುದ್ಧ, ಬಸವಣ್ಣ ಮತ್ತು ಬಾಬಾಸಾಹೇಬ್ ಅವರ ತತ್ವಗಳ ಮೇಲೆ ಸಮಾಜವನ್ನು ನಿರ್ಮಿಸುವ ಕಾಲ. ಸಮಾನತೆ, ವಿವೇಚನೆ ಮತ್ತು ಕರುಣೆಯಲ್ಲಿ ಬೇರೂರಿರುವ ಸಮಾಜ ಹಾಗೂ ಈ ರಾಷ್ಟ್ರವನ್ನು ಅತ್ಯಂತ ಅಪಾಯಕಾರಿ “viRuSS” ಗಳಿಂದ ಶುದ್ಧೀಕರಿಸುವ ಸಮಯ ಇದಾಗಿದೆ.
ಬಿಹಾರ ಚುನಾವಣೆಗೆ ಬಿಜೆಪಿ ಮೊದಲ ಪಟ್ಟಿ ಬಿಡುಗಡೆ, 71 ಅಭ್ಯರ್ಥಿಗಳ ಹೆಸರು ಘೋಷಣೆ