Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕಾಂತಾರ ಚಾಪ್ಟರ್​ 1 ಕಲೆಕ್ಷನ್‌ನಲ್ಲಿ ಭಾರೀ ಕುಸಿತ! ಜಾಗತಿಕ ಕಲೆಕ್ಷನ್ ಎಷ್ಟು?
ಕರ್ನಾಟಕಮನರಂಜನೆ

ಕಾಂತಾರ ಚಾಪ್ಟರ್​ 1 ಕಲೆಕ್ಷನ್‌ನಲ್ಲಿ ಭಾರೀ ಕುಸಿತ! ಜಾಗತಿಕ ಕಲೆಕ್ಷನ್ ಎಷ್ಟು?

Share
2 Min Read
SHARE

Newsics_Kannada 

 Subscribe and watch video

 ನ್ಯೂಸಿಕ್ಸ್ ಕನ್ನಡ

ಬನ್ನಿ ನಮ್ ಸಂಗಡ

newsics.com

 

ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ರಿಷಬ್​ ಶೆಟ್ಟಿ ಬರೆದು, ನಿರ್ದೇಶಿಸಿ, ನಟಿಸಿದ ‘ಕಾಂತಾರ ಚಾಪ್ಟರ್​ 1’ ಕಳೆದ ಗುರುವಾರ, ಅಕ್ಟೋಬರ್​​ 2ರಂದು ಬಹಳ ಅದ್ಧೂರಿಯಾಗಿ ಚಿತ್ರಮಂದಿರ ಪ್ರವೇಶಿಸಿತು. ಪೀರಿಯಾಡಿಕಲ್​ ಜಾನಪದ ಸಾಹಸ ಥ್ರಿಲ್ಲರ್​​ ಉತ್ತಮ ಪ್ರದರ್ಶನ ಮುಂದುವರಿಸಿದ್ದು, ಕೇವಲ 6 ದಿನಗಳಲ್ಲಿ ಮೂಲ ಕಾಂತಾರ ಚಿತ್ರದ ಜೀವಮಾನದ ಗಳಿಕೆಯನ್ನು ಮೀರಿಸಿದೆ.

ಅಲ್ಲದೇ, ಸಾರ್ವಕಾಲಿಕ ಎರಡನೇ ಅತಿ ಹೆಚ್ಚು ಕಲೆಕ್ಷನ್​​ ಮಾಡಿದ ಕನ್ನಡ ಚಿತ್ರವಾಗಿ ಹೊರಹೊಮ್ಮುವ ಮೂಲಕ ‘ಕಾಂತಾರ ಚಾಪ್ಟರ್​ 1’ ಅದ್ಭುತ ಮೈಲಿಗಲ್ಲನ್ನು ಸಾಧಿಸಿದೆ. ಈವರೆಗೆ ಅತಿ ಹೆಚ್ಚು ಕಲೆಕ್ಷನ್ ಮಾಡಿದ ಕನ್ನಡ ಸಿನಿಮಾವಾಗಿ ಮೊದಲನೇ ಸ್ಥಾನದಲ್ಲಿ ರಾಕಿಂಗ್​ ಸ್ಟಾರ್​ ಯಶ್​ ಅವರ ‘ಕೆಜಿಎಫ್​ ಚಾಪ್ಟರ್ 2’ ಚಿತ್ರವಿದೆ.

ರಿಷಬ್ ಶೆಟ್ಟಿಯ ನಟನೆ-ನಿರ್ದೇಶನದ ‘ಕಾಂತಾರ ಚಾಪ್ಟರ್ 1’ ಸಿನಿಮಾ  ಬಾಕ್ಸ್ ಆಫೀಸ್‌ನಲ್ಲಿ ಉತ್ತಮ ಪ್ರದರ್ಶನ ಮುಂದುವರಿಸಿದೆ. ಆದರೆ, ಅಚ್ಚರಿ ಎನ್ನುವಂತೆ ಮೊನ್ನೆ ಸೋಮವಾರ ಕಲೆಕ್ಷನ್‌ನಲ್ಲಿ ಮೊದಲ ದೊಡ್ಡ ಕುಸಿತ ಕಂಡಿದೆ. ಆದರೂ ಕೂಡ ಈ ಸಿನಿಮಾ 12 ದಿನಗಳಲ್ಲಿ ವಿಶ್ವಾದ್ಯಂತ ಭರ್ಜರಿ ಯಶಸ್ಸು ಗಳಿಸಿದೆ. ಹಲವು ಹಳೆಯ ದಾಖಲೆಗಳನ್ನು ಕಾಂತಾರ-1 ಸಿನಿಮಾ ಪುಡಿಗಟ್ಟಿದೆ.

ಕಾಂತಾರಕ್ಕಿಂತ ದೊಡ್ಡ ಕ್ಯಾನ್ವಾಸ್‌ನಲ್ಲಿ ತಯಾರಾಗುತ್ತಿರುವ ಪ್ರೀಕ್ವೆಲ್ ಎಂಬ ಕಾರಣಕ್ಕೆ ‘ಕಾಂತಾರ ಚಾಪ್ಟರ್ 1’ ಘೋಷಣೆಯಾದಾಗಿನಿಂದಲೇ ಪ್ರೇಕ್ಷಕರ ಗಮನ ಸೆಳೆದಿತ್ತು. ಬಹುತೇಕ ಪ್ರೇಕ್ಷಕರ ನಿರೀಕ್ಷೆಗಳನ್ನು ಉಳಿಸಿಕೊಂಡಿದ್ದರಿಂದ, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಆರಂಭ ಪಡೆದುಕೊಂಡಿತು. ಈಗ ಎರಡನೇ ವಾರ ಮುಗಿಯುತ್ತಾ ಬಂದರೂ, ಉತ್ತಮ ಪ್ರದರ್ಶನವನ್ನು ಮುಂದುವರಿಸಿದೆ. ಇದೀಗ 12 ದಿನಗಳ ಕಲೆಕ್ಷನ್ ವರದಿ ಹೊರಬಿದ್ದಿದೆ.

 

ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಗಳಿಸುತ್ತಿದ್ದರೂ, ರಿಲೀಸ್ ಆದ ನಂತರ ಸೋಮವಾರದ ಕಲೆಕ್ಷನ್‌ನಲ್ಲಿ ಸಿನಿಮಾ ಅತಿ ದೊಡ್ಡ ಕುಸಿತವನ್ನು ಕಂಡಿದೆ. ಸೋಮವಾರದ ಕಲೆಕ್ಷನ್‌ನಲ್ಲಿ 64 ಪ್ರತಿಶತದಷ್ಟು ಇಳಿಕೆಯಾಗಿದೆ. ಭಾನುವಾರ ಭಾರತದಿಂದ 39.75 ಕೋಟಿ ನೆಟ್ ಕಲೆಕ್ಷನ್ ಮಾಡಿದ್ದ ಸಿನಿಮಾ, ಸೋಮವಾರ ಕೇವಲ 13.50 ಕೋಟಿಗೆ ಇಳಿಯಿತು.

 

ಎರಡನೇ ವಾರಾಂತ್ಯದಲ್ಲಿ ಗಳಿಸಿದ 146 ಕೋಟಿ ಸೇರಿ, 11 ದಿನಗಳಲ್ಲಿ ವಿಶ್ವಾದ್ಯಂತ ಬಾಕ್ಸ್ ಆಫೀಸ್‌ನಿಂದ 655 ಕೋಟಿ ಗಳಿಸಿದೆ ಎಂದು ನಿರ್ಮಾಪಕರಾದ ಹೊಂಬಾಳೆ ಫಿಲ್ಮ್ಸ್ ತಿಳಿಸಿತ್ತು. 12 ದಿನಗಳಲ್ಲಿ ಇದು 675 ಕೋಟಿಯ ಸಮೀಪ ತಲುಪಿರಬಹುದು. ಆದರೆ, ಟ್ರ್ಯಾಕರ್‌ಗಳ ಪ್ರಕಾರ, ಚಿತ್ರದ ಜಾಗತಿಕ ಗ್ರಾಸ್ ಕಲೆಕ್ಷನ್ 650 ಕೋಟಿ ಅಥವಾ ಅದಕ್ಕಿಂತ ಕಡಿಮೆ ಎಂದು ಅಂದಾಜಿಸಲಾಗಿದೆ.

TAGGED:#kanthara #film #realase #collection #hombale #rishabshetty
Share This Article
Facebook Twitter Copy Link Print
Previous Article ಜಾತಿ ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದ ಸುಧಾ, ನಾರಾಯಣ ಮೂರ್ತಿ ದಂಪತಿ
Next Article ವಿಶ್ವದಾದ್ಯಂತ YouTube ಡೌನ್ : ಬಳಕೆದಾರರ ಪರದಾಟ

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read
ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ಕರ್ನಾಟಕಪ್ರಮುಖ

ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ಯುವಕನ ಕೊಂದು, ಶವ ಸುಟ್ಟು ಹಾಕಿದ ದಂಪತಿ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?