Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಚಾಮರಾಜನಗರದಲ್ಲಿ ಗುಡುಗು ಮತ್ತು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು,ಕೊಡಗು, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಕೋಲಾರ, ಯಾದಗಿರಿ, ಕಲಬುರಗಿ, ರಾಯಚೂರು, ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.