Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಬೆಂಗಳೂರು : ರಾಜ್ಯದಲ್ಲಿ ನೈರುತ್ಯ ಮಾನ್ಸೂನ್ ಚುರುಕುಗೊಂಡಿದ್ದು, ಇಂದು- ನಾಳೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದಾರೆ. 24 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.