Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ
ಕರ್ನಾಟಕಪ್ರಮುಖ

ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

Share
1 Min Read
SHARE

Subscribe NewsicsKannada/YouTube

newsics.com

ಬೆಂಗಳೂರು: ನಗರದ ದಕ್ಷಿಣ ಪೊಲೀಸ್ ಉಪ ವಿಭಾಗದ ಕಾಲೇಜೊಂದರಲ್ಲಿ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಆರೋಪದ ಅಡಿ ವಿದ್ಯಾರ್ಥಿಯನ್ನು ಹನುಮಂತನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಬಸವನಗುಡಿಯ ಎಂಜಿನಿಯರಿಂಗ್ ಕಾಲೇಜೊಂದರ ಐದನೇ ಸೆಮಿಸ್ಟರ್‌ ವಿದ್ಯಾರ್ಥಿ ಜೀವನ್ ಗೌಡ (21) ಬಂಧಿತ ಆರೋಪಿ.

ಆರೋಪಿಯನ್ನು ನ್ಯಾಯಾಲಯದ ಎದುರು ಹಾಜರು ಪಡಿಸಲಾಗಿದ್ದು, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಪರಪ್ಪನ ಅಗ್ರಹಾರ ಜೈಲಿಗೆ ಆರೋಪಿಯನ್ನು ಕಳುಹಿಸಲಾಗಿದೆ. ಏಳನೇ ಸೆಮಿಸ್ಟರ್ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಕ್ಟೋಬರ್‌ 10ರಂದು ಘಟನೆ ನಡೆದಿದೆ. ಅಕ್ಟೋಬರ್ 15ರಂದು ನೀಡಿದ ದೂರು ಆಧರಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆಯಿಂದ ವಿದ್ಯಾರ್ಥಿನಿ ಆಘಾತಕ್ಕೆ ಒಳಗಾಗಿದ್ದರು.‌ ಚೇತರಿಸಿಕೊಂಡ ಬಳಿಕ ತಮ್ಮ ಪೋಷಕರಿಗೆ ಮಾಹಿತಿ ನೀಡಿದ್ದರು. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲು‌ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ನಡೆದ ದಿನದಂದು ವಿದ್ಯಾರ್ಥಿನಿ ಬೆಳಗ್ಗೆ 8.55ರ ಸುಮಾರಿಗೆ‌ ಕಾಲೇಜಿಗೆ ತೆರಳಿದ್ದರು. ಆ ಸಂದರ್ಭದಲ್ಲಿ ಆರೋಪಿ, ವಿದ್ಯಾರ್ಥಿನಿ ಜತೆಗೆ ಮಾತನಾಡಬೇಕು ಎಂದು ಹೇಳಿದ್ದ. ಅದಾದ ಮೇಲೆ ಊಟದ ವಿರಾಮದಲ್ಲಿ ಪದೇ ಪದೇ ವಿಚಾರಿಸಲು ತೆರಳಿದ್ದ ಸಂದರ್ಭದಲ್ಲಿ, ಏಳನೇ ಬ್ಲಾಕ್‌ಗೆ ಬರುವಂತೆ ತಿಳಿಸಿದ್ದ. ಅಲ್ಲಿಗೆ ಹೋದಾಗ ಬಲವಂತದಿಂದ ಚುಂಬಿಸಲು ಪ್ರಯತ್ನಿಸಿದ್ದ.

ಆರೋಪಿಯಿಂದ ತಪ್ಪಿಸಿಕೊಂಡು ಲಿಫ್ಟ್ ಹತ್ತಿ ಆರನೇ ಮಹಡಿಗೆ ವಿದ್ಯಾರ್ಥಿನಿ ತೆರಳಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಬಳಿಕ ಪುರುಷರ ಶೌಚಾಲಯಕ್ಕೆ ವಿದ್ಯಾರ್ಥಿನಿಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಘಟನೆಯು‌ ಅಂದು ಮಧ್ಯಾಹ್ನ 1.30ರಿಂದ 1.50ರ ನಡುವೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ಸ್ಥಳದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಮಾಡಲಾಗಿತ್ತೇ ಎಂಬುದನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಚಿಕನ್ ಪ್ರಿಯರೇ ಗಮನಿಸಿ : ಕೋಳಿ ಮಾಂಸದ ಈ ಭಾಗವನ್ನು ತಿನ್ನಲೇಬೇಡಿ!

TAGGED:Engineering student arrested for raping female student in college toilet
Share This Article
Facebook Twitter Copy Link Print
Previous Article ಗುಜರಾತ್‌ ನೂತನ ಉಪಮುಖ್ಯಮತ್ರಿಯಾಗಿ ಹರ್ಷ ಸಾಂಘ್ವಿ ಪ್ರಮಾಣ ವಚನ ಸ್ವೀಕಾರ
Next Article ಪಟಾಕಿ ಸಿಡಿಸುವಾಗ ಸುಟ್ಟ ಗಾಯಗಳಾದರೆ ಈ ಮನೆಮದ್ದುಗಳನ್ನು ಹಚ್ಚಿ

Popular Posts

Shivajinagara Footpath Issue | ಶಿವಾಜಿನಗರ ಒತ್ತುವರಿ ತೆರವು ವೇಳೆ ಅಧಿಕಾರಿಗಳ ಮೇಲೆ ಹಲ್ಲೆ: ಬಂಧಿತರಿಂದ ಪೊಲೀಸರ ಮುಂದೆ ಕ್ಷಮೆಯಾಚನೆ

2 Min Read

Sharad Pawar Met Modi | ಶರದ್ ಪವಾರ್–ಸುಪ್ರಿಯಾ ಸುಳೆ ಪ್ರಧಾನಿ ಮೋದಿ ಭೇಟಿ

2 Min Read

Today Gold Rate in Bangalore| ಚಿನ್ನ ಮತ್ತಷ್ಟು ದುಬಾರಿ, ಬೆಳ್ಳಿ ಬೆಲೆಯಲ್ಲೂ ಏರಿಕೆ

2 Min Read

BCCI News Rules | ದೇಶೀಯ ಕ್ರಿಕೆಟ್‌ನಲ್ಲಿ ಬಿಸಿಸಿಐನ 10 ಹೊಸ ಕಠಿಣ ನಿಯಮಗಳು

2 Min Read

You Might Also Like

ಪಂಚಾಂಗಈ ದಿನಜ್ಯೋತಿಷ್ಯದಿನ ಭವಿಷ್ಯಪ್ರಮುಖ

Astrology ಇಂದು ದ್ವಿದ್ವಾದಶ ದೃಷ್ಟಿಯೋಗ, ಸಾಧ್ಯಯೋಗ, ಶುಭಯೋಗ: ಈ ರಾಶಿ ಜನರಿಗೆ ಧನ ಲಾಭ

4 Min Read
ಕರ್ನಾಟಕಪ್ರಮುಖ

Add35 Government Schools in Uttara Kannada Report Zero Admissions ಉತ್ತರ ಕನ್ನಡ: 35 ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ title

1 Min Read
ಕರ್ನಾಟಕದೇಶಪ್ರಮುಖ

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read
ದೇಶಪ್ರಮುಖ

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

Social Networks

Facebook-f Instagram Twitter
Welcome Back!

Sign in to your account

Lost your password?