Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ
ಕರ್ನಾಟಕಪ್ರಮುಖ

ತಲಕಾವೇರಿ ಬ್ರಹ್ಮಕುಂಡಿಕೆಯಲ್ಲಿ ಆವಿರ್ಭವಿಸಿದ ಮಾತೆ ಕಾವೇರಿ

Share
2 Min Read
SHARE

Subscribe NewsicsKannada/YouTube

newsics.com

ಮಡಿಕೇರಿ: ಬ್ರಹ್ಮಗಿರಿ ತಪ್ಪಲಿನಲ್ಲಿರುವ ಪವಿತ್ರ ತೀರ್ಥಕ್ಷೇತ್ರ ತಲಕಾವೇರಿಯ ಬ್ರಹ್ಮಕುಂಡಿಕೆಯಲ್ಲಿ ಶುಕ್ರವಾರ ಮಧ್ಯಾಹ್ನ 1.44 ಸಲ್ಲುವ ಮಕರ ಲಗ್ನದಲ್ಲಿ ಮಾತೆ ಕಾವೇರಿಯು ತೀರ್ಥರೂಪಿಣಿಯಾಗಿ ಆವೀರ್ಭವಿಸುವ ಮೂಲಕ ಸಹಸ್ರಾರು ಭಕ್ತರನ್ನು ಪುಳಕಿತರನ್ನಾಗಿಸಿದಳು.

ಸೂರ್ಯನು ತುಲಾ ರಾಶಿಯನ್ನು ಪ್ರವೇಶಿಸುವ ತುಲಾ ಸಂಕ್ರಮಣದಂದು ಮಧ್ಯಾಹ್ನ 1.44ರ ನಿಗದಿತ ಸಮಯಕ್ಕೆ ತಾಯಿ ಕಾವೇರಿ ಆವೀರ್ಭವಿಸುವುದರೊಂದಿಗೆ ಭಕ್ತ ಜನರನ್ನು ಹರಸಿದಳು.

ಈ ಬಾರಿ ಹಗಲು ವೇಳೆಯಲ್ಲಿ ತೀರ್ಥೋದ್ಭವವಾಗುತ್ತಿರುವ ಹಿನ್ನೆಲೆಯಲ್ಲಿ ಈ ಅಪೂರ್ವ ಘಟನೆಯನ್ನು ಕಣ್ತುಂಬಿಕೊಳ್ಳಲು ಬೆಳಗಿನಿಂದಲೇ ತಲಕಾವೇರಿಯತ್ತ ಅಸಂಖ್ಯಾತ ಭಕ್ತಾದಿಗಳು ಆಗಮಿಸುತ್ತಿದ್ದರು.

ಭಾಗಮಂಡಲದಲ್ಲಿ ಪಿಂಡಪ್ರದಾನ ಮುಗಿಸಿ ಭಗಂಡೇಶ್ವರ ಸನ್ನಿಧಿಯಲ್ಲಿ ಪೂಜಾ ವಿಧಿಗಳನ್ನು ಪೂರೈಸಿ ತಲಕಾವೇರಿಯತ್ತ ಸಾಗುತ್ತಿದ್ದ ದೃಶ್ಯ ಗೋಚರಿಸಿತು.

ಭಕ್ತಾದಿಗಳ ಅನುಕೂಲಕ್ಕಾಗಿ ಭಾಗಮಂಡಲದಿಂದ ತಲಕಾವೇರಿಗೆ 25 ಬಸ್’ಗಳನ್ನು ನಿಯೋಜಿಸಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿತ್ತು.
ತಲಕಾವೇರಿ ಕ್ಷೇತ್ರದಲ್ಲಿ ಅರ್ಚಕ ಪ್ರಶಾಂತ ಆಚಾರ್ ನೇತೃತ್ವದಲ್ಲಿ‌ 15ಕ್ಕೂ ಅಧಿಕ ಅರ್ಚಕರಿಂದ ಶುಕ್ರವಾರ ಮುಂಜಾನೆಯಿಂದಲೇ ಮಹಾ ಸಂಕಲ್ಪ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜಾ ವಿಧಿ ವಿಧಾನಗಳು ಆರಂಭಗೊಂಡವು.

ಸಾಂಸ್ಕೃತಿಕ ವೇದಿಕೆಯಲ್ಲಿ ಭಜನೆ, ಭಕ್ತಿಗೀತೆಗಳ ಕಾರ್ಯಕ್ರಮವನ್ನು ಕೊಡವ ಅಕಾಡೆಮಿಯ ಅಧ್ಯಕ್ಷ ಮಹೇಶ್ ನಾಚಯ್ಯ ಉದ್ಘಾಟಿಸಿದರು. ಅರೆಭಾಷೆ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವೊಜಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ ಕಾಮತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಮತ್ತಿತರರು ಈ ಸಂದರ್ಭ ಉಪಸ್ಥಿತರಿದ್ದರು. ಇದೇ ಸಂದರ್ಭ ಕೊಡವ ಸಾಂಪ್ರದಾಯಿಕ ದುಡಿ ಕೊಟ್ಟುಪಾಟ್, ಬಾಳೆಲೆಯ ವತ್ಸಲಾ ನಾರಾಯಣ‌ ಅವರ ಕಾವೇರಿ ಕಲಾ ತಂಡದಿಂದ ಭಜನೆ ಹಾಗೂ ಭಕ್ತಿ ಗೀತೆಗಳ ಕಾರ್ಯಕ್ರಮ ಜರುಗಿತು.
ಮಧ್ಯಾಹ್ನ ಅರ್ಚಕ ಸಮೂಹದಿಂದ ಕಾವೇರಿ ಮಾತೆಗೆ ಸಾಂಪ್ರದಾಯಿಕ ಪೂಜೆ ನೆರವೇರುತ್ತಿದ್ದಂತೆ, ಅರ್ಚಕರ ಮಂತ್ರಘೋಷ ಹಾಗೂ ನೆರೆದಿದ್ದ ಸಹಸ್ರಾರು ಭಕ್ತ ಜನರ ‘ಜೈ ಜೈ ಮಾತಾ ಕಾವೇರಿ ಮಾತಾ, ಉಕ್ಕಿ ಬಾ ಉಕ್ಕಿ ಬಾ ಕಾವೇರಮ್ಮ ಉಕ್ಕಿ ಬಾ’ ಎಂಬ ಜಯಘೋಷಗಳ ನಡುವೆ ಬ್ರಹ್ಮಕುಂಡಿಕೆಯಲ್ಲಿ ಕಾವೇರಿಯು ತೀರ್ಥರೂಪಿಣಿಯಾಗಿ ಗೋಚರಿಸುತ್ತಿದ್ದಂತೆ ಕ್ಷೇತ್ರದಲ್ಲಿ ಸೇರಿದ್ದ ಸಹಸ್ರಾರು ಭಕ್ತರು ಭಾವಪರವಶರಾದರು.

ತೀರ್ಥೋದ್ಭವವಾಗುತ್ತಿದ್ದಂತೆ ಪೊಲೀಸರು ನಿರ್ಮಿಸಿದ್ದ ತಡೆಯನ್ನು ಭೇದಿಸಿ ಭಕ್ತಾದಿಗಳು ತೀರ್ಥಕ್ಕಾಗಿ ಮುಗಿಬಿದ್ದರು. ಅರ್ಚಕರು ಪವಿತ್ರ ತೀರ್ಥನ್ನು ಭಕ್ತಾದಿಗಳ ಮೇಲೆ ಪ್ರೋಕ್ಷಣೆ ಮಾಡಿದರು. ತೀರ್ಥ ಪಡೆದ ಭಕ್ತಜನರು ಪುಳಕಿತರಾದರು.
ಡಿಕೆಶಿ- ಸಚಿವ ರೆಡ್ಡಿ ಗೈರು: ತೀರ್ಥೋದ್ಭವದ ಸಂದರ್ಭ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮುಜರಾಯಿ‌ ಸಚಿವ ರಾಮಲಿಂಗಾ ರೆಡ್ಡಿ ಆಗಮಿಸಬೇಕಿತ್ತಾದರೂ, ಬೆಂಗಳೂರಿನ ಹವಾಮಾನ ಹದಗೆಟ್ಟಿದ್ದರಿಂದ ಹೆಲಿಕಾಪ್ಟರ್ ಟೇಕ್ ಆಫ್ ಆಗದೆ ಅವರುಗಳು ಗೈರಾದರು.

ಕೊಡಗು-ಮೈಸೂರು ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಭಾಗಮಂಡಲದಿಂದ ತಲಕಾವೇರಿವರೆಗೆ ಪಾದಯಾತ್ರೆಯಲ್ಲಿ ಸಾಗಿ ಕಾವೇರಿ ತೀರ್ಥೋದ್ಭವಕ್ಕೆ ಸಾಕ್ಷಿಯಾದರು.

ಬೆಂಗಳೂರು ಕಾಲೇಜಿನ ಶೌಚಾಲಯದಲ್ಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಎಂಜಿನಿಯರಿಂಗ್ ವಿದ್ಯಾರ್ಥಿ ಬಂಧನ

ಗುಜರಾತ್‌ ನೂತನ ಉಪಮುಖ್ಯಮತ್ರಿಯಾಗಿ ಹರ್ಷ ಸಾಂಘ್ವಿ ಪ್ರಮಾಣ ವಚನ ಸ್ವೀಕಾರ

TAGGED:Mother Kaveriwho appeared in the Brahmakundika of Talakaveri
Share This Article
Facebook Twitter Copy Link Print
Previous Article Reverse Walking: ರಿವರ್ಸ್ ವಾಕಿಂಗ್ ಮಾಡಿದ್ದೀರಾ? ಈ ರೀತಿ ನಡೆಯುವುದರಿಂದ ಸಿಗುತ್ತೆ ಸಖತ್ ಪ್ರಯೋಜನ
Next Article ನಿಮ್ಮ ದಿನ ಚೆನ್ನಾಗಿರಬೇಕೆಂದರೆ ಬೆಳಿಗ್ಗೆ ಎದ್ದ ತಕ್ಷಣ ಈ ರೀತಿ ಮಾಡಿ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?