Newsics_Kannada
Subscribe and watch video
ನ್ಯೂಸಿಕ್ಸ್ ಕನ್ನಡ
ಬನ್ನಿ ನಮ್ ಸಂಗಡ
newsics.com
ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕೆಲವು ಸ್ಥಳಗಳಲ್ಲಿ ವರುಣ ಅಬ್ಬರಿಸುವ ಸಾಧ್ಯತೆ ಇದೆ. ಅಲ್ಲದೇ 24 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಅಕ್ಟೋಬರ್ 18 ರವರೆಗೆ ಬೆಂಗಳೂರಿನಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆ ನೀಡಿರುವ ಭಾರತ ಹವಾಮಾನ ಇಲಾಖೆ (ಐಎಂಡಿ) ಯೆಲ್ಲೋ ಅಲರ್ಟ್ ನೀಡಿದೆ. ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ಭಾನುವಾರದವರೆಗೆ ಪ್ರತಿದಿನ ಒಂದು ಅಥವಾ ಎರಡು ಬಾರಿ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ಗದಗ, ವಿಜಯನಗರ, ಧಾರವಾಡ, ಹಾವೇರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ತುಮಕೂರು, ಕೊಡಗು, ಮಂಡ್ಯ, ಮೈಸೂರು, ಚಾಮರಾಜನಗರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.