Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ದರೋಡೆ ಮಾಡಿ ತಪ್ಪಿಸಿಕೊಳ್ಳಲು ಹಲ್ಲೆ ಮಾಡಿದ ರೌಡಿಶೀಟರ್ ಪೊಲೀಸರ ಗುಂಡಿಗೆ ಬಲಿ
ಕರ್ನಾಟಕಪ್ರಮುಖ

ದರೋಡೆ ಮಾಡಿ ತಪ್ಪಿಸಿಕೊಳ್ಳಲು ಹಲ್ಲೆ ಮಾಡಿದ ರೌಡಿಶೀಟರ್ ಪೊಲೀಸರ ಗುಂಡಿಗೆ ಬಲಿ

Share
1 Min Read
SHARE

Subscribe NewsicsKannada/YouTube

newsics.com

ವಿಜಯಪುರ: ದರೋಡೆ ಮಾಡಿ ಪರಾರಿಯಾಗಲು ಯತ್ನಿಸಿ, ಬಂಧಿಸಲು ಹೋದ ಪೊಲೀಸರ ಮೇಲೆ ಹಲ್ಲೆಗೆ ಮುಂದಾದ ರೌಡಿಶೀಟರ್ ಪೊಲೀಸರ ಗುಂಡೇಟಿಗೆ ಜೀವತೆತ್ತ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ರಾಂಪುರ ಗ್ರಾಮದ ಹೊರ ಭಾಗದಲ್ಲಿ ನಡೆದಿದೆ.

ಆಲಮೇಲ ತಾಲೂಕಿನ ದೇವಣಗಾಂವ ಗ್ರಾಮದ ಯುನೂಸ್ ಇಕ್ಲಾಸ್ ಪಟೇಲ್ (35) ಮೃತಪಟ್ಟ ರೌಡಿಶೀಟರ್.

ನಟೋರಿಯಸ್ ಹಂತಕನಾಗಿದ್ದ ಯುನೂಸ್ ಪಟೇಲ್, ನಗರದಲ್ಲಿ ಶುಕ್ರವಾರ ಓರ್ವನಿಗೆ ಚಾಕೂ ತೋರಿಸಿ 25 ಸಾವಿರ ಹಣ ದರೋಡೆ ಮಾಡಿ, ಆತನ ಸ್ಕೂಟರ್ ಕಿತ್ತುಕೊಂಡು ಪರಾರಿಯಾಗಿದ್ದ. ಈ ಸಂಬಂಧ ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿ ಯುನೂಸ್ ತನ್ನ ಸ್ವಗ್ರಾಮ ಆಲಮೇಲ ತಾಲೂಕಿನ ದೇವಣಗಾಂವ ಕಡೆಗೆ ತೆರಳುತ್ತಿರುವ ಮಾಹಿತಿ ಅರಿತ ಪೊಲೀಸರು, ಸಿಂದಗಿ ತಾಲೂಕಿನ ರಾಂಪುರ್ ಬಳಿ ಆರೋಪಿ ಯುನೂಸ್ ನನ್ನು ಬಂಧಿಸಲು ಮುಂದಾಗಿದ್ದಾರೆ.

ಈ ವೇಳೆ ಆರೋಪಿ ಚಾಕುವಿನಿಂದ ಇಬ್ಬರು ಪೊಲೀಸ್ ಕಾನ್ಸಸ್ಟೇಬಲ್ ಹಾಗೂ ಇನ್ಸಪೆಕ್ಟರ್ ಮೇಲೆ ಹಲ್ಲೆಗೆ ಯತ್ನಿಸಿದ್ದಾನೆ. ಇದೇ ಸಂದರ್ಭ ಆಯತಪ್ಪಿ ಬಿದ್ದ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ, ಗಾಳಿಯಲ್ಲಿ ಗುಂಡು‌ ಹಾರಿಸಿ ಎಚ್ಚರಿಕೆ ನೀಡಿದ್ದಾರೆ, ಆದರೂ ಶರಣಾಗದಿದ್ದರಿಂದ ಇನ್ಸಪೆಕ್ಟರ್ ಪ್ರದೀಪ್ ತಳಕೇರಿ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ.

ಅಸ್ವಸ್ಥಗೊಂಡ ಆರೋಪಿಯನ್ನು ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ನಂತರ ಜಿಲ್ಲಾ ಆಸ್ಪತ್ರೆಗೆ ರವಾನಿಸಿದ್ದು, ಆರೋಪಿ ಯುನೂಸ್ ಮೃತಪಟ್ಟಿದ್ದಾಗಿ ಜಿಲ್ಲಾಸ್ಪತ್ರೆಯಿಂದ ಮಾಹಿತಿ ಲಭ್ಯವಾಗಿದೆ‌.

ಮೃತ ಆರೋಪಿ ಯುನೂಸ್ ಮೇಲೆ ಎರಡು ಕೊಲೆ ಪ್ರಕರಣ, ಒಂದು ಕೊಲೆಗೆ ಯತ್ನ, ಸೇರಿದಂತೆ 12 ಪ್ರಕರಣಗಳಿವೆ. ಈ‌ ಕುರಿತು ತನಿಖೆ ನಡೆಸಲಾಗುತ್ತದೆ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ನೀಡಿದ್ದಾರೆ.

TAGGED:Rowdysheeter who attempted to escape after robbery shot dead by police
Share This Article
Facebook Twitter Copy Link Print
Previous Article ಮಗಳ ಅಶ್ಲೀಲ ವಿಡಿಯೋ ವೈರಲ್: ಕಾಂಗ್ರೆಸ್ ಮುಖಂಡನ ವಿರುದ್ಧ ದೂರು ನೀಡಿದ ತಂದೆ
Next Article Bamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!

Popular Posts

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

You Might Also Like

ಕರ್ನಾಟಕಪ್ರಮುಖ

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read
ಕರ್ನಾಟಕಪ್ರಮುಖ

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read
ಕರ್ನಾಟಕಪ್ರಮುಖಮನರಂಜನೆ

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read
ಕರ್ನಾಟಕಪ್ರಮುಖ

ಇಬ್ಬರು ಪುಟ್ಟ ಮಕ್ಕಳನ್ನು ನೇಣು ಬಿಗಿದು ಹತ್ಯೆಗೈದು ತಾಯಿ ಆತ್ಮಹತ್ಯೆಗೆ ಯತ್ನ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?