Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅಪಘಾತ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕೆ 7 ಲಕ್ಷ ರೂ. ಪರಿಹಾರ ಕಡಿತ: ಹೈಕೋರ್ಟ್ ಆದೇಶ
ಕರ್ನಾಟಕ

ಅಪಘಾತ ಪ್ರಕರಣದಲ್ಲಿ ಹೆಲ್ಮೆಟ್ ಧರಿಸದಿದ್ದಕ್ಕೆ 7 ಲಕ್ಷ ರೂ. ಪರಿಹಾರ ಕಡಿತ: ಹೈಕೋರ್ಟ್ ಆದೇಶ

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಅಪಘಾತ ಪ್ರಕರಣದಲ್ಲಿ ಸಾವನ್ನಪ್ಪಿದ ಬೈಕ್ ಸವಾರನೊಬ್ಬ ಹೆಲ್ಮೆಟ್ ಧರಿಸದ ಕಾರಣ ಪರಿಗಣಿಸಿ ಪರಿಹಾರ ಮೊತ್ತದಲ್ಲಿ 7.50 ಲಕ್ಷ ರೂಪಾಯಿ ಕಡಿತಗೊಳಿಸಿ ಹೈಕೋರ್ಟ್ ಆದೇಶಿಸಿದೆ.

 

ಹೆಲ್ಮೆಟ್ ಧರಿಸದೆ ಇರುವುದು ಬೈಕ್ ಸವಾರನ ನಿರ್ಲಕ್ಷ್ಯವಾಗಿದೆ ಎಂದು ತೀರ್ಮಾನಿಸಿದ ಹೈಕೋರ್ಟ್ ನಿಗದಿಪಡಿಸಿದ 19,64,400 ಪರಿಹಾರದಲ್ಲಿ ನಿರ್ಲಕ್ಷ್ಯದ ಭಾಗವಾಗಿ ಶೇಕಡ 40ರಷ್ಟು ಹಣ ಅಂದರೆ 7,85,760 ರೂ. ಕಡಿತಗೊಳಿಸಿದೆ. ಅಪಘಾತದಿಂದಾಗಿ 2019 ರಲ್ಲಿ ಸಾವನ್ನಪ್ಪಿದ್ದ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಅವಿನಾಶ್(23) ಕುಟುಂಬದವರು 18 ಲಕ್ಷ ರೂಪಾಯಿ ಪರಿಹಾರ ನಿಗದಿಪಡಿಸಿ ಮೋಟಾರು ವಾಹನ ಅಪಘಾತ ಪರಿಹಾರ ಕ್ಲೇಮ್ ನ್ಯಾಯಾಧಿಕರಣ ಆದೇಶಿಸಿತ್ತು.

 

ಈ ಪರಿಹಾರ ಮೊತ್ತ ಹೆಚ್ಚಾಗಿದೆ ಎಂದು ಆಕ್ಷೇಪಿಸಿ ಅಪಘಾತಕ್ಕೆ ಕಾರಣವಾಗಿದ್ದ ಟ್ರ್ಯಾಕ್ಟರ್ ಗೆ ವಿಮಾ ಪಾಲಿಸಿ ನೀಡಿದ್ದ ವಿಮಾ ಕಂಪನಿ ಹೈಕೋರ್ಟ್ ಗೆ ಮೇಲ್ಮನೆ ಸಲ್ಲಿಸಿತ್ತು. ಈ ಮೇಲ್ಮನವಿಯನ್ನು ನ್ಯಾಯಮೂರ್ತಿ ಡಿ.ಕೆ. ಸಿಂಗ್ ನೇತೃತ್ವದ ವಿಭಾಗೀಯ ಪೀಠ ಭಾಗಶಃ ಪುರಸ್ಕರಿಸಿದ್ದು, ಪರಿಹಾರ ಮೊತ್ತ ಕಡಿತಗೊಳಿಸಿ ಆದೇಶಿಸಿದೆ.

 

ಅಪಘಾತ ಸಂಭವಿಸಿದ ವೇಳೆ ದ್ವಿಚಕ್ರ ವಾಹನ ಸವಾರನಾಗಿದ್ದ ಮೃತ ಅವಿನಾಶ್ ಹೆಲ್ಮೆಟ್ ಧರಿಸಿರಲಿಲ್ಲ. ವೇಗದಿಂದ ಮತ್ತು ನಿರ್ಲಕ್ಷ್ಯದಿಂದ ಬಂದು ಟ್ರ್ಯಾಕ್ಟರ್ ಟ್ರೈಲರ್ ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಅಪಘಾತದಲ್ಲಿ ಆತನ ನಿರ್ಲಕ್ಷ್ಯ ಪ್ರಮಾಣ ಶೇಕಡ 40ರಷ್ಟಿದೆ. ಟ್ರಾಕ್ಟರ್ ಚಾಲಕನ ನಿರ್ಲಕ್ಷ್ಯ ಶೇಕಡ 60ರಷ್ಟಿದೆ ಎಂದು ನ್ಯಾಯ ಪೀಠ ತೀರ್ಮಾನಿಸಿದೆ.

 

ಅವಿನಾಶ್ ಮೃತಪಟ್ಟ ಸಂದರ್ಭದಲ್ಲಿನ ವಯಸ್ಸು, ಪಡೆಯುತ್ತಿದ್ದ ಸಂಬಳ, ಕುಟುಂಬದವರು ಅನುಭವಿಸಿದ ಅವಲಂಬನೆ ನಷ್ಟ, ನೋವು, ಅಂತ್ಯಕ್ರಿಯೆ ಖರ್ಚು, ಆತ ಭವಿಷ್ಯದಲ್ಲಿ ಗಳಿಸಬಹುದಾಗಿದ್ದ ಸಂಭಾವ್ಯ ಆದಾಯ ಲೆಕ್ಕಹಾಕಿ 19,64,400 ರೂಪಾಯಿ ಪರಿಹಾರ ಪಡೆಯಲು ಅವಿನಾಶ್ ಕುಟುಂಬದವರು ಅರ್ಹರಾಗಿದ್ದಾರೆ. ಆದರೆ ಹೆಲ್ಮೆಟ್ ಧರಿಸದಿದ್ದಕ್ಕೆ ಶೇಕಡ 40ರಷ್ಟು ನಿರ್ಲಕ್ಷ್ಯದ ಭಾಗವಾಗಿ ನಿಗದಿಯಾದ ಪರಿಹಾರ ಮೊತ್ತದಲ್ಲಿ ಅಂದರೆ 7.85 ಲಕ್ಷ ರೂ. ಕಡಿತಗೊಳಿಸಲಾಗಿದೆ. ಜೊತೆಗೆ ಉಳಿದ 11.78 ಲಕ್ಷ ರೂ. ರೂಗಳನ್ನು ವಾರ್ಷಿಕ ಶೇ. 6ರಷ್ಟು ಬಡ್ಡಿ ದರದೊಂದಿಗೆ ಆರು ವಾರದಲ್ಲಿ ಕುಟುಂಬದವರಿಗೆ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.

 

 

TAGGED:#HighCourt #orders #reduction #compensation #helmet #accidentcase
Share This Article
Facebook Twitter Copy Link Print
Previous Article ಹಾಂಗ್ ಕಾಂಗ್ ರನ್ ವೇಯಿಂದ ಸಮುದ್ರಕ್ಕೆ ಜಾರಿದ ಟರ್ಕಿಶ್ ಸರಕು ವಿಮಾನ; ಇಬ್ಬರು ಸಾವು
Next Article ಆರೋಗ್ಯದ ನೆಪ ಮುಂದಿಟ್ಟು ಕ್ಯಾನ್ಸರ್ ಕಾರಕ ಎಂದು ಅಡಕೆ ನಿಷೇಧಿಸಲು ವಿಶ್ವ ಆರೋಗ್ಯ ಸಂಸ್ಥೆ ಕರೆ

Popular Posts

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

ಪ್ರತಿಭಟನೆ ವೇಳೆ CJP ನಾಯಕ ‘ಅಭಿಜಿತ್ ದೀಪ್ಕೆ’ಗೆ ಕಪಾಳ ಮೋಕ್ಷ ; ವೈರಲ್ ವಿಡಿಯೋ ನೋಡಿ

1 Min Read

ಹೆಂಡತಿ ಇನ್ನೊಬ್ಬನ ಜೊತೆ ಹಾಸಿಗೆ ಹಂಚಿಕೊಂಡಿದ್ದು ನೋಡಿ ಗಂಡ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read
ಕರ್ನಾಟಕಪ್ರಮುಖ

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read
ಕರ್ನಾಟಕದೇಶಪ್ರಮುಖ

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Social Networks

Facebook-f Instagram Twitter
Welcome Back!

Sign in to your account

Lost your password?