Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲತಾಲೂಕಿನ ಶಿವಗಂಗೆಯಲ್ಲಿರುವ ಶೃಂಗೇರಿ ಶಾಖಾಮಠದ ಪುರುಷೋತ್ತಮ ಭಾರತೀ ಸ್ವಾಮೀಜಿ (75) ಇಂದು ವಿಧಿವಶರಾಗಿದ್ದಾರೆ.
ಬಹು ಅಂಗಾಗ ವೈಫಲ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ. ಇಂದು ಮಧ್ಯಾಹ್ನ 2 ಗಂಟೆಗೆ ಅವರ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ ಎಂದು ಮೂಲಗಳು ತಿಳಿಸಿದೆ.
ಪುರುಷೋತ್ತಮ ಭಾರತೀ ಸ್ವಾಮೀಜಿ ಅವರು ಶೃಂಗೇರಿ ಮಠದ ಉತ್ತರಾಧಿಕಾರಿಯಾಗಿ ನೇಮಕಗೊಂಡವರು. ಅವರನ್ನು ಶೃಂಗೇರಿ ಮಠದ ಭಾರತೀ ತೀರ್ಥ ಸ್ವಾಮೀಜಿ ಅವರು ತಮ್ಮ ಉತ್ತರಾಧಿಕಾರಿಯಾಗಿ ನೇಮಿಸಿದರು.