Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ರಕ್ಷಿತಾರ ಉಡುಗೆ, ಆಕೆ ಇರುವ ರೀತಿ ಇದನ್ನೆಲ್ಲ ಉಲ್ಲೇಖಿಸಿ ‘ಶಿ ಈಸ್ ಎ ಎಸ್’ ಎಂದು ಬಿಗ್ಬಾಸ್ ಸ್ಪರ್ಧಿ ಅಶ್ವಿನಿ ಹೇಳಿದ್ದರು. ವೀಕೆಂಡ್ ಎಪಿಸೋಡ್ನಲ್ಲಿ ಸುದೀಪ್ ಸಹ ಅಶ್ವಿನಿ ಅವರ ಈ ಪದ ಬಳಕೆಯನ್ನು ಖಂಡಿಸಿದ್ದರು. ಅಶ್ವಿನಿ ಯಾವ ಅರ್ಥದಲ್ಲಿ ‘ಎಸ್’ ಎಂದಿದ್ದರು ಎಂಬುದು ಸ್ಪಷ್ಟವಿಲ್ಲ. ಇದೀಗ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.
ರಕ್ಷಿತಾ ಶೆಟ್ಟಿ ಜೊತೆ ಜಗಳದ ಸಂದರ್ಭದಲ್ಲಿ ಜಾತಿ ನಿಂದನೆಗೆ ಒಳಗಾಗುವ ಪದ ಬಳಸಿದ್ದಾರೆ. ಇದರಿಂದಾಗಿ ಪೊಲೀಸ್ ವಿಚಾರಣೆಗಾಗಿ ಅವರು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಬರಬೇಕಾದ ಪರಿಸ್ಥಿತಿ ಇದೆ.
ರಕ್ಷಿತಾ ಶೆಟ್ಟಿ ಜೊತೆ ಜಗಳ ಆಡುವ ಸಂದರ್ಭದಲ್ಲಿ ‘ಅವಳು ಎಸ್. ನಾನು ಆ ಕ್ಯಾಟಗರಿ ಅಲ್ಲ’ ಎಂದು ಅಶ್ವಿನಿ ಹೇಳಿದ್ದರು. ಇದು ಜಾತಿ ನಿಂದನೆ ಪದ ಆಗಿದೆ. ಅವರು ಯಾವ ಅರ್ಥದಲ್ಲಿ ಇದನ್ನು ಹೇಳಿದರು ಎಂಬ ಪ್ರಶ್ನೆ ಮೂಡಿದೆ. ಈ ಪ್ರಕರಣದಲ್ಲಿ ಅಶ್ವಿನಿ ವಿಚಾರಣೆ ಎದುರಿಸಬೇಕಾಗಿ ಬರಹುದು.
ಅಶ್ವಿನಿ ಅವರನ್ನು ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ಆಗೋದು ಅನುಮಾನ ಎಂದು ಹೇಳಲಾಗುತ್ತಿದೆ. ಅವರನ್ನು ಬಿಗ್ ಬಾಸ್ ಮನೆಯಿಂದ ಹೊರಕ್ಕೆ ಕರೆತಂದು ಪೊಲೀಸ್ ವಿಚಾರಣೆಗೆ ಅನುವು ಮಾಡಿಕೊಡಬಹುದು. ಆ ಬಳಿಕ ಅವರನ್ನು ಮರಳಿ ದೊಡ್ಮನೆಗೆ ಕಳುಹಿಸಬಹುದು. ಇಲ್ಲವೇ ಬಿಗ್ ಬಾಸ್ ಮನೆಯಲ್ಲೇ ಅಶ್ವಿನಿ ಗೌಡ ಅವರು ಕ್ಷಮೆ ಕೇಳಿ ಈ ಪ್ರಕರಣಕ್ಕೆ ಅಂತ್ಯ ಹಾಡಬಹುದು. ಈ ಬಗ್ಗೆ ಕಲರ್ಸ್ ವಾಹಿನಿ ಯಾವ ರೀತಿಯ ನಿರ್ಧಾರ ತೆಗೆದುಕೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.