Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಹಲವು ತಿಂಗಳುಗಳಿಂದ ನಡೆಯುತ್ತಿರುವ ಧರ್ಮಸ್ಥಳ ಬುರುಡೆ ಕೇಸ್ನಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ ನಡೆದಿದೆ. ಷಡ್ಯಂತ್ರದ ವಿಚಾರಣೆಗೆ ಮಹೇಶ್ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಸೇರಿ ನಾಲ್ವರಿಗೆ ಎಸ್ಐಟಿ ನೋಟಿಸ್ ನೀಡಿದ್ದು, ತನಿಖೆಗೆ ಮುಂದಾಗಿದೆ. ತನಿಖಾಧಿಕಾರಿಯು ನೋಟಿಸ್‌ನಲ್ಲಿ ಪ್ರಕರಣದ ಮಹತ್ವಪೂರ್ಣ ಅಂಶಗಳನ್ನು ಉಲ್ಲೇಖಿಸಿ, ತನಿಖೆಗೆ ಸಹಕರಿಸದಿದ್ದರೆ ಕ್ರಮ ಕೈಗೊಳ್ಳುವುದಾಗಿಯೂ ಸಹ ಉಲ್ಲೇಖಿಸಿದ್ದಾರೆ.
ಅಕ್ಟೋಬರ್ 27ರಂದು ಬೆಳಿಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಎಸ್ ಐಟಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ಜಯಂತ್, ವಿಠಲಗೌಡ ಅವರಿಗೆ ಎಸ್ ಐಟಿ ನೋಟಿಸ್ ನೀಡಿದೆ.
ವಿಚಾರಣೆಗೆ ಹಾಜರಾಗದಿದ್ದರೆ ಬಂಧಿಸುವುದಾಗಿ ಎಚ್ಚರಿಕೆ ನೀಡಲಾಗಿದೆ. ಇನ್ನೂ ಹಲವು ಅಂಶಗಳನ್ನು ನೋಟಿಸ್ ನಲ್ಲಿ ಉಲ್ಲೇಖಿಸಲಾಗಿದೆ.