Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೀದರ್ : ಅಕ್ರಮ ಸಂಬಂಧದ ಶಂಕೆ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮೂಲದ ಯುವಕನೊಬ್ಬನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಭೀಕರ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ನಾಗನಪಲ್ಲಿ ಗ್ರಾಮದಲ್ಲಿ ನಡೆದಿದೆ.
ಮಹಾರಾಷ್ಟ್ರದ ನಾಂದೇಡ್ ಜಿಲ್ಲೆ ಗೌಣಗಾಂವ್ ಗ್ರಾಮದ ನಿವಾಸಿ ವಿಷ್ಣು (27) ಮೃತ ಯುವಕ. ವಿಷ್ಣು ಕಳೆದ ಒಂದು ವರ್ಷದಿಂದ ನಾಗನಪಲ್ಲಿ ಗ್ರಾಮದ ವಿವಾಹಿತ ಮಹಿಳೆ ಪೂಜಾ ಎಂಬುವವರೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಅಕ್ಟೋಬರ್ 21ರಂದು ವಿಷ್ಣು ತನ್ನ ಇಬ್ಬರು ಸ್ನೇಹಿತರೊಂದಿಗೆ ಮಹಿಳೆಯ ಮನೆಗೆ ಬಂದಿದ್ದ ವೇಳೆ, ಆಕೆಯ ಕುಟುಂಬಸ್ಥರಿಂದ ಆಕ್ಷೇಪ ವ್ಯಕ್ತವಾಗಿದೆ. ಈ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದು, ಮಹಿಳೆಯ ತಂದೆ ಅಶೋಕ್ ಮತ್ತು ಸಹೋದರ ಗಜಾನನ ಸೇರಿ ವಿಷ್ಣುವಿನ ಕೈ-ಕಾಲುಗಳನ್ನು ಕಟ್ಟಿ ದೊಣ್ಣೆಗಳಿಂದ ಮನಬಂದಂತೆ ಬರ್ಬರ ಹಲ್ಲೆ ನಡೆಸಿದ್ದಾರೆ. ಯುವಕನನ್ನು ಕಂಬಕ್ಕೆ ಕಟ್ಟಿ ಈ ಕೃತ್ಯ ಎಸಗಲಾಗಿದೆ.