Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com
ಬೆಂಗಳೂರು: ಮೊಂತಾ ಚಂಡಮಾರುತದ ಎಫೆಕ್ಟ್ ಹಿನ್ನಲೆ ರಾಜ್ಯಾದ್ಯಂತ ನಾಳೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ.
ಕರಾವಳಿ ಭಾಗದಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆ ಇದ್ದರೂ ಕಳೆದ ದಿನಗಳಿಗೆ ಹೋಲಿಸಿದರೆ ಮಳೆಯ ಪ್ರಮಾಣ ಕಡಿಮೆ ಇರಲಿದೆ.
ರಾಜ್ಯದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ನಾಳೆಯೂ ಮಳೆ ಮುಂದುವರಿಯಲಿದೆ. ಮಂಗಳೂರು ನಗರದಲ್ಲಿ ಸಾಧಾರಾಣ ಮಳೆಯಾಗಲಿದ್ದು, ಜಿಲ್ಲೆಯ ಉಳಿದೆಡೆ ಉತ್ತಮ ಮಳೆಯ ನಿರೀಕ್ಷೆ ಇದೆ.
ಪ್ರೇಯಸಿಯೊಂದಿಗೆ ಲಾಡ್ಜ್ನಲ್ಲಿದ್ದಾಗ ಪತ್ನಿ ಕೈಗೆ ಸಿಕ್ಕಿಬಿದ್ದ ಪತಿ: ಮುಂದೇನಾಯ್ತು?