Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಚಿಕ್ಕಮಗಳೂರು: 25 ವರ್ಷದ ಸರ್ಕಾರಿ ಶಾಲೆ ಶಿಕ್ಷಕಿಯೊಬ್ಬರನ್ನು ಮರಕ್ಕೆ ಕಟ್ಟಿ, ವಿವಸ್ತ್ರಗೊಳಿಸಿ ದುಷ್ಕರ್ಮಿಗಳು ಹಲ್ಲೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.
ಶಾಲೆ ಮುಗಿಸಿ ಮನೆಗೆ ವಾಪಸ್ ಆಗುವಾಗ ಶಿಕ್ಷಕಿ ಮೇಲೆ ಹಲ್ಲೆ ನಡೆಸಲಾಗಿದೆ. ಮರಕ್ಕೆ ಕಟ್ಟಿ ಹಾಕಿ ವಿವಸ್ತಗೊಳಿಸಿದ ದುಷ್ಕರ್ಮಿಗಳು ಹಲ್ಲೆ ಮಾಡಿದ್ದಾರೆ. ಕೂಗಾಟ ಕೇಳಿ ಸ್ಥಳಕ್ಕೆ ಬಂದ ಮನೆಯವರು ರಕ್ಷಣೆ ಮಾಡಿದ್ದಾರೆ, ಮಾರಣಾಂತಿಕ ಹಲ್ಲೆಗೊಳಗಾದ ಶಿಕ್ಷಕಿಗೆ ಕೊಪ್ಪ ಆಸ್ಪತ್ರೆಯಲ್ಲಿ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಮೀಪದ ಗ್ರಾಮದ ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಗಳ ಬಂಧನಕ್ಕೆ 3 ಪೊಲೀಸ್ ತಂಡಗಳನ್ನು ರಚಿಸಲಾಗಿದೆ.