Subscribe ನ್ಯೂಸಿಕ್ಸ್ ಕನ್ನಡ
NewsicsKannada/ YouTube
newsics.com
ಹಲವು ತಿಂಗಳುಗಳಿಂದ ನಡೆಯುತ್ತಿರುವ ವ್ಯಾಪಾರ ಉದ್ವಿಗ್ನತೆಯ ನಂತರ ವಿಶ್ವದ ಎರಡು ದೊಡ್ಡ ಆರ್ಥಿಕ ರಾಷ್ಟ್ರಗಳ ನಡುವಿನ ಸಂಬಂಧವನ್ನು ಸ್ಥಿರಗೊಳಿಸುವ ಪ್ರಯತ್ನದಲ್ಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇಂದು ಗುರುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಭೇಟಿ ಮಾಡಿದ್ದಾರೆ.
ಅಮೆರಿಕ ಅಧ್ಯಕ್ಷರಾಗಿ ಎರಡನೇ ಬಾರಿ ಅಧಿಕಾರ ವಹಿಸಿಕೊಂಡ ನಂತರ ಟ್ರಂಪ್ ಅವರು ಹಲವು ದೇಶಗಳ ಮೇಲೆ ಸುಂಕ ಹೇರಿಕೆಯನ್ನು ನವೀಕರಿಸಿದ್ದು, ರಫ್ತಿನ ಮೇಲಿನ ಪ್ರತೀಕಾರದ ನಿರ್ಬಂಧಗಳು ಚೀನಾದೊಂದಿಗೆ ಮಾತುಕತೆಯ ತುರ್ತು ಪರಿಸ್ಥಿತಿಯನ್ನು ಹೆಚ್ಚಿಸಿತ್ತು. ಇದೀಗ ಚೀನಾ ಮೇಲೆ ಅಮೆರಿಕ ವಿಧಿಸುತ್ತಿರುವ ಶೇ. 57ರಷ್ಟು ಟ್ಯಾರಿಫ್ ಅನ್ನು ಶೇ. 47ಕ್ಕೆ ಇಳಿಸಲಾಗುವುದು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಸೌತ್ ಕೊರಿಯಾದ ಬುಸನ್ ನಗರದಲ್ಲಿ ನಡೆಯುತ್ತಿರುವ ಎಪಿಇಸಿ ಶೃಂಗಸಭೆಗೆ ಮುನ್ನ ಚೀನಾ ಮುಖ್ಯಸ್ಥ ಶಿ ಜಿನ್ಪಿಂಗ್ ಅವರನ್ನು ಡೊನಾಲ್ಡ್ ಟ್ರಂಪ್ ಭೇಟಿ ಮಾಡಿ ಟ್ರೇಡ್ ಡೀಲ್ ಮಾತುಕತೆ ಅಂತಿಮಗೊಳಿಸಿರುವುದು ತಿಳಿದುಬಂದಿದೆ. ಈ ಭೇಟಿ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡೊನಾಲ್ಡ್ ಟ್ರಂಪ್, ಚೀನಾ ಮೇಲಿನ ಟ್ಯಾರಿಫ್ ಅನ್ನು ಶೇ. 10ರಷ್ಟು ಇಳಿಸುತ್ತಿರುವ ವಿಚಾರವನ್ನು ಬಹಿರಂಗಪಡಿಸಿದ್ದಾರೆ.
https://www.newsics.com/2025/10/30/metro-train-services-resume-on-purple-line/