Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Namma Metro ಪ್ರಯಾಣಿಕರಿಗೆ ಡಬಲ್ ಗುಡ್ ನ್ಯೂಸ್
ಕರ್ನಾಟಕಪ್ರಮುಖ

Namma Metro ಪ್ರಯಾಣಿಕರಿಗೆ ಡಬಲ್ ಗುಡ್ ನ್ಯೂಸ್

Share
2 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ನಮ್ಮ ಮೆಟ್ರೋ ಬಗ್ಗೆ ಹೊಸ ಅಫ್‌ಡೇಟ್‌ ಹೊರಬಿದ್ದಿದ್ದು, ಮೆಟ್ರೋ ಪ್ರಯಾಣಿಕರಿಗೆ ಭರ್ಜರಿ ಗುಡ್‌ ನ್ಯೂಸ್‌ ಸಿಕ್ಕಿದೆ.

ಮೆಟ್ರೋ ಹಳದಿ ಮಾರ್ಗದಲ್ಲಿ ಸಂಚಾರ ಮಾಡುವವರಿಗೆ ಬಿಎಂಆರ್‌ಸಿಎಲ್ ಡಬಲ್‌ ಗುಡ್‌ ನ್ಯೂಸ್‌ ನೀಡಿದೆ.

ಕನ್ನಡ ರಾಜ್ಯೋತ್ಸವದಂದು (ನವೆಂಬರ್‌ 1) ಮೆಟ್ರೋದ ಯೆಲ್ಲೋ ಲೈನ್‌ಗೆ ಹೊಸದಾಗಿ 5ನೇ ರೈಲು ಸೇರ್ಪಡೆ ಆಗುತ್ತಿರುವುದಾಗಿ ಅಧಿಕೃತವಾಗಿ BMRCL ಇದೀಗ ಟ್ವೀಟ್‌ ಮೂಲಕ ತಿಳಿಸಿದೆ.

ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌ ಕನ್ನಡ ರಾಜ್ಯೋತ್ಸವದ ಜತೆ ಕನ್ನಡಿಗರಿಗೆ ಸಿಹಿ ಸುದ್ದಿ ನೀಡಿದ್ದು, ನಮ್ಮ ಮೆಟ್ರೋದ ಹಳದಿ ಮಾರ್ಗಕ್ಕೆ ಹೊಸದಾಗಿ 5ನೇ ರೈಲು ಸಂಚಾರ ಮಾಡಲಿದೆ. ಇಷ್ಟು ದಿನದವರೆಗೆ ಕೇವಲ 4 ರೈಲುಗಳು ಸಂಚರಿಸುತ್ತಿದ್ದವು.

ಆರ್‌ವಿ ರಸ್ತೆಯಿಂದ ಬೊಮ್ಮಸಂದ್ರವನ್ನ ಸಂಪರ್ಕಿಸುವ ಈ ಹಳದಿ ಮಾರ್ಗದಲ್ಲಿ ಕಡಿಮೆ ರೈಲು ಸಂಚಾರದಿಂದ ಜನರು ಕೊಂಚ ಸಮಸ್ಯೆ ಎದುರಿಸುತ್ತಿದ್ದರು. ಇದರಿಂದಾಗಿ ಪ್ರಯಾಣಿಕರು ಹೆಚ್ಚು ಸಮಯ ಸಹ ಕಾಯಬೇಕಿತ್ತು.

ಆದರೆ ಇದೀಗ 5ನೇ ರೈಲು ಸಂಚಾರ ಆರಂಭದಿಂದ ಪ್ರಯಾಣಿಕರಿಗೆ ಮತ್ತಷ್ಟು ಅನುಕೂಲವಾಗಲಿದೆ.

ಈ ವಿಚಾರವಾಗಿ X ಖಾತೆಯ ಮೂಲಕ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಷನ್‌ ಲಿಮಿಟೆಡ್‌, ಕನ್ನಡ ರಾಜ್ಯೋತ್ಸವದ 70ನೇ ವರ್ಷದ ಆಚರಣೆಯ ಸಂದರ್ಭದಲ್ಲಿ BMRCL 1ನೇ ನವೆಂಬರ್‌ 2025ರಿಂದ ಹಳದಿ ಮಾರ್ಗದಲ್ಲಿ 5ನೇ ಮೆಟ್ರೋ ರೈಲನ್ನು ವಾಣಿಜ್ಯ ಸೇವೆಗೆ ಒಳಪಡಿಸುತ್ತಿದೆ. ಈ ಹೊಸ ರೈಲಿನ ಚಾಲನೆಯಿಂದ, ಹಳದಿ ಮಾರ್ಗದಲ್ಲಿ ಪೀಕ್ ಅವಧಿಯಲ್ಲಿ ರೈಲುಗಳ ಆವರ್ತನವು ಪ್ರತಿ 15 ನಿಮಿಷಕ್ಕೊಮ್ಮೆ ರೈಲುಗಳು ಸಂಚರಿಸುತ್ತವೆ. (ಪ್ರಸಕ್ತ 19 ನಿಮಿಷಗಳ ಅಂತರದ ಬದಲಾಗಿ). ಇದರಿಂದ ಪ್ರಯಾಣಿಕರಿಗೆ ಕಡಿಮೆ ಅವಧಿಯಲ್ಲಿ ಸುಗಮ ಮತ್ತು ನಿರಂತರ ಸೇವೆ ನೀಡಲು ಸಹಾಯಕವಾಗಲಿದೆ.

ಈ ಬದಲಾವಣೆ ಎಲ್ಲಾ ದಿನಗಳಿಗೆ ಅನ್ವಯವಾಗುತ್ತದೆ. ಆ‌ರ್‌ವಿ ರಸ್ತೆ ಮತ್ತು ಬೊಮ್ಮಸಂದ್ರ ಟರ್ಮಿನಲ್ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಸುಧಾರಿತ ಮೆಟ್ರೋ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ BMRCL ವಿನಂತಿಸಿಕೊಂಡಿದೆ.

ಯೆಲ್ಲೋ ಲೈನ್‌‌ನಲ್ಲಿ RV ರಸ್ತೆ ಮತ್ತು ಬೊಮ್ಮಸಂದ್ರ ನಿಲ್ದಾಣಗಳಿಂದ ಹೊರಡುವ ಮೊದಲ ಹಾಗೂ ಕೊನೆಯ ರೈಲುಗಳ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಈ ಮಾರ್ಗದಲ್ಲಿ ಕೊನೆಯ ರೈಲು ರಾತ್ರಿ 11 ಗಂಟೆಗೆ ಸಂಚಾರ ಮಾಡಲಿದೆ.

https://x.com/OfficialBMRCL/status/1984171545187737738

ನಮಗೂ ಮುಟ್ಟಿನ ರಜೆ ಬೇಕು: ಕಾಲೇಜು ವಿದ್ಯಾರ್ಥಿನಿಯರ ಆಗ್ರಹ

ನ.3ಕ್ಕೆ ನಟ ದರ್ಶನ್, ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರಾಗಲು ಸೂಚನೆ

ತಡವಾಗಿ ಬಂದ ವಿವಿ ಮಹಿಳಾ ಸಿಬ್ಬಂದಿಯನ್ನು ಬೆತ್ತಲಾಗಿಸಿ ಮುಟ್ಟು ಪರೀಕ್ಷಿಸಿದ ಮೇಲ್ವಿಚಾರಕ!

TAGGED:Double good news for Namma Metro passengers
Share This Article
Facebook Twitter Copy Link Print
Previous Article Elephant attack ಆನೆ ದಾಳಿಗೆ ಇಬ್ಬರು ಬಲಿ, ತಹಸೀಲ್ದಾರ್ ಜೀಪ್‌ ತಡೆದು ಸ್ಥಳೀಯರ ಆಕ್ರೋಶ
Next Article ASTRO ನಿಮ್ಮ ಮೊಬೈಲ್ ನಂಬರ್‌ನಲ್ಲಿ ಈ‌ ಸಂಖ್ಯೆಗಳಿದ್ದರೆ ಭಾರೀ ಅಶುಭ, ಯಾವ್ಯಾವ ನಂಬರ್ ಡೇಂಜರ್?

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?