Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > 6 ರಾಜ್ಯಪಾಲರ ನೇಮಕ, ಮೂವರ ವರ್ಗ, ಕರ್ನಾಟಕದ ಸಿ.ಹೆಚ್. ವಿಜಯಶಂಕರ್‌ಗೆ ಮೇಘಾಲಯ ಗವರ್ನರ್ ಹುದ್ದೆ
ದೇಶಪ್ರಮುಖ

6 ರಾಜ್ಯಪಾಲರ ನೇಮಕ, ಮೂವರ ವರ್ಗ, ಕರ್ನಾಟಕದ ಸಿ.ಹೆಚ್. ವಿಜಯಶಂಕರ್‌ಗೆ ಮೇಘಾಲಯ ಗವರ್ನರ್ ಹುದ್ದೆ

Share
1 Min Read
SHARE

newsics.com
ನವದೆಹಲಿ: ಕರ್ನಾಟಕದ ಹಿರಿಯ ಬಿಜೆಪಿ ನಾಯಕ ಸಿ.ಎಚ್‌. ವಿಜಯಶಂಕರ್‌ ಅವರಿಗೆ ರಾಜ್ಯಪಾಲರ ಹುದ್ದೆ ನೀಡಲಾಗಿದೆ. ಅವರನ್ನು ಮೇಘಾಲಯದ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆರು ಹಿರಿಯ ನಾಯಕರನ್ನು ರಾಜ್ಯಪಾಲರನ್ನಾಗಿ ನೇಮಿಸಿದ್ದು, ಕನ್ನಡಿಗ ಸಿ.ಎಚ್.ವಿಜಯಶಂಕರ್‌ ಅವರಿಗೆ ಅವಕಾಶ ದೊರೆತಿದೆ.

ತ್ರಿಪುರಾದ ಮಾಜಿ ಸಿಎಂ ಜಿಷ್ಣು ದೇವ್ ವರ್ಮಾ, ಮಹಾರಾಷ್ಟ್ರದ ಮಾಜಿ ಸ್ಪೀಕರ್ ಹರಿಭಾವು ಬಾಗಡೆ, ಕೇಂದ್ರ ಮಾಜಿ ಸಚಿವ ಸಂತೋಷ್ ಗಂಗ್ವಾರ್ ಮತ್ತು ಬಿಜೆಪಿಯ ಹಿರಿಯ ನಾಯಕರಾದ ಒಪಿ ಮಾಥುರ್ ಅವರನ್ನು ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನಿಕಟವರ್ತಿಯಾಗಿರುವ ಗುಜರಾತ್‌ನ ಮಾಜಿ ಮುಖ್ಯ ಕಾರ್ಯದರ್ಶಿ ಕೆ. ಕೈಲಾಸನಾಥನ್ ಅವರನ್ನು ಪುದುಚೇರಿಯ ಲೆಫ್ಟಿನೆಂಟ್ ಗವರ್ನರ್ ಆಗಿ ನಿಯೋಜಿಸಿ ಆದೇಶ ಹೊರಡಿಸಲಾಗಿದೆ.
ಪಂಜಾಬ್‌ನಲ್ಲಿ ಭಗವಂತ್ ಮಾನ್ ನೇತೃತ್ವದ ಎಎಪಿ ಸರ್ಕಾರದೊಂದಿಗಿನ ಭಿನ್ನಾಭಿಪ್ರಾಯದ ಕಾರಣಕ್ಕೆ ತೀವ್ರ ಚರ್ಚೆಯಲ್ಲಿದ್ದ ಬನ್ವಾರಿಲಾಲ್ ಪುರೋಹಿತ್‌ ಅವರ ಸ್ಥಾನಕ್ಕೆ ಅಸ್ಸಾಂನ ರಾಜ್ಯಪಾಲ ಗುಲಾಬ್ ಚಂದ್ ಕಟಾರಿಯಾ ಅವರನ್ನು ನೇಮಿಸಲಾಗಿದೆ.

ಜಾರ್ಖಂಡ್ ಗವರ್ನರ್ ಸಿ.ಪಿ. ರಾಧಾಕೃಷ್ಣನ್ ಅವರನ್ನು ಮಹಾರಾಷ್ಟ್ರಕ್ಕೆ ವರ್ಗಾವಣೆ ಮಾಡಲಾಗಿದೆ.
ಸಿಕ್ಕಿಂ ಗವರ್ನರ್ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರನ್ನು ಅಸ್ಸಾಂನ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಜತೆಗೆ ಮಣಿಪುರ ರಾಜ್ಯಪಾಲರ ಹೆಚ್ಚುವರಿ ಜವಾಬ್ದಾರಿಯನ್ನು ಸಹ ವಹಿಸಲಾಗಿದೆ
ಕಳೆದ ಲೋಕಸಭೆ ಚುನಾವಣೆ ವೇಳೆ ತೆಲಂಗಾಣ ರಾಜ್ಯಪಾಲರಾಗಿದ್ದ ತಮಿಳುಸೆಲ್ವಿ ರಾಜೀನಾಮೆ ನೀಡಿದ್ದರು. ಅಲ್ಲದೇ ಕೆಲವು ರಾಜ್ಯಪಾಲರ ಹುದ್ದೆಗಳು ಖಾಲಿ ಇದ್ದವು. ಹೆಚ್ಚುವರಿಯಾಗಿ ಕೆಲವರು ಕಾರ್ಯಭಾರ ವಹಿಸಿಕೊಂಡಿದ್ದರು.

ಬಿಜೆಪಿಯಲ್ಲಿಯೇ ಹಲವು ವರ್ಷಗಳಿಂದ ಇರುವ ಹಿರಿಯ ನಾಯಕರಿಗೆ ಹೊಸ ಜವಾಬ್ದಾರಿಯನ್ನು ವಹಿಸಲಾಗಿದೆ.
ಕೆಲವು ವರ್ಷಗಳಿಂ ರಾಜ್ಯಪಾಲರಾಗಿದ್ದ ಕೆಲವರನ್ನು ಕೈಬಿಡಲಾಗಿದ್ದು, ಮತ್ತೆ ಕೆಲವರ ರಾಜ್ಯಗಳ ರಾಜ್ಯಪಾಲರನ್ನು ಬದಲಾವಣೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಗುರುತಿಸಿಕೊಂಡವರು, ಬಿಜೆಪಿಯಲ್ಲಿ ಹಿರಿತನ ಹೊಂದಿರುವವರಿಗೆ ಅವಕಾಶ ನೀಡಲಾಗಿದೆ.

ದಿನ ಭವಿಷ್ಯ 28-07-2024 ಭಾನುವಾರ- ಕರ್ಕಾಟಕ- ಹಣಕಾಸಿನಲ್ಲಿ ಏರುಪೇರು, ಧನುಸ್ಸು- ಆದಾಯಕ್ಕಿಂತ ಖರ್ಚು ಹೆಚ್ಚು, ‌ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?

ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ವೀಕ್ಷಿಸಿ ತಂಗಿ‌ ಮೇಲೆಯೇ ಅತ್ಯಾಚಾರವೆಸಗಿ ಹತ್ಯೆಗೈದ ಅಪ್ರಾಪ್ತ!

ಮದುವೆಯಾಗಿ ವರ್ಷವಾದ್ರೂ ತನ್ನನ್ನು ಮುಟ್ಟದ ಐಆರ್‌ಎಸ್ ಅಧಿಕಾರಿ ಗಂಡನ ವಿರುದ್ಧ ಮಹಿಳೆ ದೂರು!

ಕಾಂಡೋಮ್ ಈತನ ಜೀವನವನ್ನೇ ಬದಲಿಸಿತು!

TAGGED:Appointment of 6 governorspost of Meghalaya Governor to Vijayashankar of Karnatakatransfer of 3
Share This Article
Facebook Twitter Copy Link Print
Previous Article ದಿನ ಭವಿಷ್ಯ 28-07-2024 ಭಾನುವಾರ- ಕರ್ಕಾಟಕ- ಹಣಕಾಸಿನಲ್ಲಿ ಏರುಪೇರು, ಧನುಸ್ಸು- ಆದಾಯಕ್ಕಿಂತ ಖರ್ಚು ಹೆಚ್ಚು, ‌ಇಂದಿನ ನಿಮ್ಮ ರಾಶಿ ಭವಿಷ್ಯದಲ್ಲೇನಿದೆ?
Next Article ವಾರ ಭವಿಷ್ಯ 28-07-2024 — 03-08-2024 ಮಿಥುನ- ಅಶುಭ ಫಲ ಅಧಿಕ, ಮಕರ- ಶಿವನಿಗೆ ಬಿಲ್ವಾರ್ಚನೆ ಮಾಡಿ, ಈ ವಾರದಲ್ಲಿ ನಿಮ್ಮ ಭವಿಷ್ಯ ಹೇಗಿದೆ?

Popular Posts

Ravana’s statue ಮಂಡ್ಯ, ಮೈಸೂರು ಭಾಗದಲ್ಲಿ 35 ರಾವಣನ ವಿಗ್ರಹ ಪತ್ತೆ!

1 Min Read

UPI revolution ಇಂಟರ್ನೆಟ್ ಇಲ್ಲದಿದ್ದರೂ ಯುಪಿಐ ಪಾವತಿ! ಕ್ರಾಂತಿಕಾರಕ ಬದಲಾವಣೆಗೆ ಸಿದ್ಧತೆ

4 Min Read

CM D K Shivakumar Pressmeet | ಮತ್ತೆ ಮುಂದೂಡಿದ ಕರ್ನಾಟಕ ಸಚಿವ ಸಂಪುಟ ವಿಸ್ತರಣೆ

2 Min Read

Daily Horoscope Today | ಇಂದಿನ ರಾಶಿ ಭವಿಷ್ಯ – 12 ರಾಶಿಗಳ ಸಂಪೂರ್ಣ ಫಲ ಭವಿಷ್ಯ

2 Min Read

You Might Also Like

ಪ್ರಮುಖದೇಶ

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read
ಪ್ರಮುಖದೇಶ

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read
ಪ್ರಮುಖಕರ್ನಾಟಕ

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read
ಪ್ರಮುಖದೇಶಮನರಂಜನೆ

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?