Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub
newsics.com
ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ವಿಚ್ಛೇದನ ಕೇಳಿದ ಪತ್ನಿಯ ಖಾಸಗಿ ಫೋಟೋಗಳನ್ನು ಪತಿಯೇ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್‌ಲೋಡ್ ಮಾಡಿರುವ ಘಟನೆ ಬೆಂಗಳೂರಿನ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಸದ್ಯ ಆರೋಪಿ ಗೋವಿಂದರಾಜು (27) ಎಂಬಾತನನ್ನು ಅಮೃತಹಳ್ಳಿ ಠಾಣೆ ಪೊಲೀಸರು ಬಂಧಿಸಿದ್ದಾರೆ.ಆರೋಪಿ ಗೋವಿಂದರಾಜು ಹಾಗೂ ಮಹಿಳೆ ಬೆಂಗಳೂರಿನ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಾಗ ಪರಸ್ಪರ ಪರಿಚಯವಾಗಿದ್ದರು. ನಂತರ 2024ರಲ್ಲಿ ವಿವಾಹವಾಗಿದ್ದರು. ನಂತರದಲ್ಲಿ ಆನ್ಲೈನ್ ಬೆಟ್ಟಿಂಗ್ ಹಾಗೂ ಕುಡಿತದ ದಾಸನಾಗಿದ್ದ ಗೋವಿಂದರಾಜು ಅದರಲ್ಲೇ ಹಣ ಕಳೆದುಕೊಳ್ಳುತ್ತಿದ್ದ. ಅಲ್ಲದೆ, ಪತ್ನಿ ದುಡಿದು ತಂದ ಹಣವನ್ನೂ ಆನ್ಲೈನ್ ಬೆಟ್ಟಿಂಗ್, ಕುಡಿತಕ್ಕೆ ಬಳಸುತ್ತಿದ್ದ. ಇದರಿಂದಾಗಿ ದಂಪತಿ ಮಧ್ಯೆ ನಿತ್ಯ ಜಗಳವಾಗುತ್ತಿತ್ತು.
ಕುಡಿತದ ಚಟದಿಂದ ಹಣ ಕಳೆದುಕೊಂಡು ಮನೆಗೆ ಬರುವ ಗೋವಿಂದರಾಜು ನಿತ್ಯ ಹೆಂಡತಿ ಮೇಲೆ ಹಲ್ಲೆ ಮಾಡುತ್ತಿದ್ದ. ಗಂಡನ ದೌರ್ಜನ್ಯದಿಂದ ಬೇಸತ್ತ ಮಹಿಳೆ ಬೆಂಗಳೂರು ತೊರೆದು ಆಂಧ್ರ ಪ್ರದೇಶದಲ್ಲಿರುವ ತವರು ಮನೆಗೆ ತೆರಳಿದ್ದರು.
ಪತಿಯ ಕಾಟದಿಂದ ಬೇಸತ್ತು ತವರಿಗೆ ಹೋದ ಮಹಿಳೆ ಗೋವಿಂದರಾಜು ಬಳಿ ವಿಚ್ಛೇದನ ಕೇಳಿದ್ದಳು. ಇದರಿಂದಾಗಿ ಆಕೆಗೆ ಅಲ್ಲಿಯೂ ನೆಮ್ಮದಿ ಇರಲ್ಲದಂತಾಗಿತ್ತು. ವಿಚ್ಛೇದನ ಕೇಳಿದ್ದರಿಂದ ಸಿಟ್ಟಾಗಿ ಪತ್ನಿಗೆ ಕರೆ ಮಾಡಿದ್ದ ಗೋವಿಂದರಾಜು, ಖಾಸಗಿ ಫೋಟೋಗಳು ಮತ್ತು ವಿಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಪೇಯಿಂಗ್ ಗೆಸ್ಟ್ಗೂ ತೆರಳಿ ಮಹಿಳೆಗೆ ಕಾಟ ಕೊಡುತ್ತಿದ್ದ ಆರೋಪಿ, ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಕೊಲೆ ಮಾಡುವುದಾಗಿಯೂ ಸಂತ್ರಸ್ತೆಗೆ ಬೆದರಿಕೆ ಹಾಕಿದ್ದ ಎಂದು ಪೊಲೀಸ್ ಮೂಲಗಳು ತಿಳಿಸಿವೆ.