newsics.com
ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ದುರ್ಬಲವಾಗಿತ್ತು. ಕರಾವಳಿ ಬಹುತೇಕ ಕಡೆಗಳಲ್ಲಿ ಮಳೆಯಾಗಿದೆ.ನಾಳೆಯೂ ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗುವ ನಿರೀಕ್ಷೆ ಇದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯೊಂದಿಗೆ ನಿರಂತರ ಗಾಳಿಯ ವೇಗ 30-40 ಕಿ.ಮೀ ಬೀಸುವ ಸಾಧ್ಯತೆ ಇದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿಯ ಬಹುತೇಕ ಕಡೆಗಳಲ್ಲಿ ಗಾಳಿ ಸಹಿತ ಲಘುವಾಗಿ ಮಧ್ಯಮ ಮಳೆಯಾಗಲಿದೆ. ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.
ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಹಗುರ ಮಳೆಯಾಗುವ ಸಾಧ್ಯತೆ ಇದೆ. ನಿರಂತರ ಗಾಳಿಯ ವೇಗವು 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 27 ಮತ್ತು 21 ಡಿ.ಸೆ ಇರಲಿದೆ.
ಇಂದು ಯಲ್ಲಾಪುರ, ಸಿದ್ದಾಪುರ, ಬೆಳಗಾವಿ ಪಿಟಿಒ, ಕಮ್ಮರಡಿ 3 ಸೆಂ.ಮೀ, ಮಂಕಿ, ಗೇರ್ಸೊಪ್ಪ, ಕಾರವಾರ ವೀಕ್ಷಣಾಲಯ, ಬನವಾಸಿಯಲ್ಲಿ 2 ಸೆಂ.ಮೀ ಮಳೆಯಾಗಿದೆ. ಸಿದ್ದಾಪುರ, ಗೋಕರ್ಣ, ಧರ್ಮಸ್ಥಳ, ಬೆಳ್ತಂಗಡಿ, ಹಳಿಯಾಳ, ಉಪ್ಪಿನಂಗಡಿ, ಔರಾದ್ , ಬೆಳಗಾವಿ ವಿಮಾನ ನಿಲ್ದಾಣ ವೀಕ್ಷಣಾಲಯ, ಸೋಮವಾರಪೇಟೆ, ಶೃಂಗೇರಿ ಎಚ್‌ಎಂಎಸ್, ಲಿಂಗನಮಕ್ಕಿ ಎಚ್‌ಎಂಎಸ್‌ನಲ್ಲಿ 1 ಸೆಂ.ಮೀ ಮಳೆಯಾಗಿದೆ.