Subscribe ನ್ಯೂಸಿಕ್ಸ್ ಕನ್ನಡ NewsicsKannada/YouTub
newsics.com
ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗುವುದಾಗಿ ತಿಳಿಸಿದ್ದು ಮುಂದಿನ ಚುನಾವಣೆಯಲ್ಲಿ ಪುತ್ರನಿಗೆ ಆಶೀರ್ವಾದ ಮಾಡುವಂತೆ ಮನವಿ ಮಾಡಿದ್ದಾರೆ.
ಭದ್ರಾವತಿ ತಾಲೂಕಿನ ಕೂಡ್ಲಿಗೆರೆ ಗ್ರಾಮದಲ್ಲಿ ನಡೆದ ಗ್ಯಾರಂಟಿ ಫಲಾನುಭವಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕರು, ಇದೇ ನನ್ನ ಕೊನೆಯ ಚುನಾವಣೆ. ಇಷ್ಟು ವರ್ಷ ನೀವು ನಿಮ್ಮ ಸಹೋದರ ಎಂದು ತಿಳಿದು ನನಗೆ ಆಶೀರ್ವಾದ ಮಾಡಿದಂತೆ, ಮುಂದಿನ ಚುನಾವಣೆಯಲ್ಲಿ ನನ್ನ ಮಗ ಗಣೇಶ್ ಅವರಿಗೆ ನಿಮ್ಮ ಬೆಂಬಲ ಮತ್ತು ಆಶೀರ್ವಾದ ಇರಲಿ ಎಂದರು.
ಶಾಸಕ ಸಂಗಮೇಶ್ವರ್ ಪುತ್ರ ಗಣೇಶ್ ಪ್ರಸ್ತುತ ಭದ್ರಾವತಿ ಪಂಚ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಬಿ.ಕೆ.ಸಂಗಮೇಶ್ ಅವರು ನಾಲ್ಕು ಬಾರಿ ಶಾಸಕರಾಗಿದ್ದು ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದಾರೆ.