newsics.com
ಬೆಂಗಳೂರು: ಜೆಡಿಎಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.
ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ.
ಬಟ್ಟೆಯಿಂದ ಮೂಗನ್ನು ಒರೆಸಿಕೊಂಡರೂ ರಕ್ತಸ್ರಾವ ನಿಲ್ಲದ ಹಿನ್ನೆಲೆಯಲ್ಲಿ ಅವರನ್ನು ಪುತ್ರ ನಿಖಿಲ್ ಕುಮಾರಸ್ವಾಮಿ ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು.
ಸಂಸದ ಡಾ.ಸಿ.ಎನ್.ಮಂಜುನಾಥ್ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್ ಇದೆ, ನಿತ್ಯ ಶುಗರ್ ಲೆವೆಲ್ ಚೆಕ್ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.