Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಉತ್ತರ ಕನ್ನಡ : ಕಟ್ಟಡ ಕಾಮಗಾರಿಯ ವೇಳೆ ತಾತ್ಕಾಲಿಕ ಲಿಫ್ಟ್ ಕುಸಿದು, ಇಬ್ಬರು ಕಾರ್ಮಿಕರು ಸಾವನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ ನಡೆದಿದೆ.
ಮುರುಡೇಶ್ವರ ಬಸ್ತಿಯ ಪ್ರಭಾಕರ್ ಮುತಪ್ಪ ಶೆಟ್ಟಿ (48), ಕುಂದಾಪುರ ತಾಲೂಕಿನ ಗೋಳಿಹೊಳೆಯ ಬಾಬಣ್ಣ ಪೂಜಾರಿ (45) ಮೃತ ದುರ್ದೈವಿಗಳು ಎಂದು ತಿಳಿದು ಬಂದಿದೆ. ಕಾಮತ್ ಯಾತ್ರಿ ನಿವಾಸದ ಮಾಲೀಕ ವೆಂಕಟದಾಸ ಕಾಮತ್ ಅವರ ಹೊಸ ಕಟ್ಟಡ ಕಾಮಗಾರಿಯ ಮಿನಿ ಲಿಫ್ಟ್ ದುರಸ್ತಿ ಕಾರ್ಯ ನಡೆಯುತ್ತಿತ್ತು. ಕಟ್ಟಡದ ಮೇಲ್ಮಹಡಿಗಳಿಗೆ ವಸ್ತುಗಳನ್ನು ಸಾಗಿಸಲು ತಾತ್ಕಾಲಿಕ ಲಿಫ್ಟ್ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಲಿಫ್ಟ್‌ನ ಸೇಫ್ಟಿ ಲಾಕ್ ಹಾಳಾಗಿ ಕೇಬಲ್ ಕಟ್ಟಾದ ಪರಿಣಾಮ ಲಿಫ್ಟ್ ಕೆಳಕ್ಕೆ ಬಿದ್ದು ಇಬ್ಬರು ಕಾರ್ಮಿಕರು ಸಾವನಪ್ಪಿದ್ದಾರೆ.
ಗಾಯಾಳುಗಳನ್ನು ತಕ್ಷಣ ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಮಣಿಪಾಲ ಕಸ್ತೂರಬಾ ಆಸ್ಪತ್ರೆಗೆ ವರ್ಗಾಯಿಸಲಾಯಿತು ಆದ್ರೆ, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಮುರುಡೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಿನಿ ಲಿಫ್ಟ್ ತಯಾರಿಕಾ ಸಂಸ್ಥೆ ಹಾಗೂ ಕಟ್ಟಡ ಮಾಲೀಕ ವೆಂಕಟದಾಸ ಕಾಮತ್ ವಿರುದ್ಧ ಮೃತ ಪ್ರಭಾಕರ್ ಶೆಟ್ಟಿಯ ಪುತ್ರ ಶ್ರವಣ ಶೆಟ್ಟಿಯಿಂದ ದೂರು ದಾಖಲಿಸಿದ್ದಾರೆ. ಇನ್ನು ಮುರುಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಜಮೀನಿನಲ್ಲಿ ಉಳುಮೆ ಮಾಡುತ್ತಿದ್ದ ರೈತ ಹುಲಿಗೆ ಬಲಿ: ರೊಚ್ಚಿಗೆದ್ದ ಜನರಿಂದ ಆರ್‌ಎಫ್‌ಒ ಮೇಲೆ ಹಲ್ಲೆ, ಸಫಾರಿ ಬಂದ್