Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ
ದೇಶಪ್ರಮುಖ

Death toll rises ದೆಹಲಿ‌ ಕಾರು ಸ್ಫೋಟ: ಮತ್ತೆ ಮೂವರ ಸಾವು, ಮೃತರ ಸಂಖ್ಯೆ 12ಕ್ಕೇರಿಕೆ, ಎಲ್ಲೆಡೆ ಕಟ್ಟೆಚ್ಚರ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ನವದೆಹಲಿ: ಕೆಂಪು ಕೋಟೆ ಬಳಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, ಗಾಯಗೊಂಡಿದ್ದ ಮೂವರು ಮಂಗಳವಾರ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಸಂಜೆ ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿಯ ಟ್ರಾಫಿಕ್ ಸಿಗ್ನಲ್‌ನಲ್ಲಿ ನಿಧಾನವಾಗಿ ಚಲಿಸುತ್ತಿದ್ದ ಕಾರೊಂದರಲ್ಲಿ ಪ್ರಬಲವಾದ ಸ್ಫೋಟ ಸಂಭವಿಸಿ ದುರಂತ ಸಂಭವಿಸಿದೆ. ನಿನ್ನೆ ರಾತ್ರಿಯವರೆಗೆ, ಸ್ಫೋಟದಲ್ಲಿ ಒಂಬತ್ತು ಜನರು ಮೃತಪಟ್ಟು 20 ಜನರು ಗಾಯಗೊಂಡಿದ್ದರು.

ಮಂಗಳವಾರ ಇನ್ನೂ ಮೂವರು ಮೃತಪಟ್ಟು, ಸಾವಿನ ಸಂಖ್ಯೆ 12ಕ್ಕೆ ತಲುಪಿದೆ. ಮಾರಕ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮಂಗಳವಾರ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ಕಾಯ್ದೆಯಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದಾರೆ.

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ಫರಿದಾಬಾದ್‌ನಲ್ಲಿರುವ ಕಾಶ್ಮೀರಿ ವೈದ್ಯರೊಬ್ಬರ ಎರಡು ಬಾಡಿಗೆ ಕೊಠಡಿಗಳಿಂದ 2,900 ಕೆಜಿ ಸ್ಫೋಟಕಗಳು ಮತ್ತು ದಹನಕಾರಿ ವಸ್ತುಗಳು ಪತ್ತೆಯಾಗಿದ್ದು, ಜಿಲ್ಲೆಯ ಕೆಲವು ಭಾಗಗಳಲ್ಲಿ ವ್ಯಾಪಕವಾದ ತನಿಖೆ ಮತ್ತು ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

ಕಾಶ್ಮೀರಿ ವೈದ್ಯರು ಕಳೆದ ಮೂರುವರೆ ವರ್ಷಗಳಿಂದ ವಾಸಿಸುತ್ತಿದ್ದ ಅಲ್ ಫಲಾಹ್ ವಿಶ್ವವಿದ್ಯಾಲಯದಲ್ಲಿ ಒಂದು ತಂಡ ಮೊಕ್ಕಾಂ ಹೂಡಿದ್ದು, ಇಲ್ಲಿನ ವಿಶ್ವವಿದ್ಯಾಲಯದ ಸಿಬ್ಬಂದಿ ಮತ್ತು ವೈದ್ಯರನ್ನು ವಿಚಾರಣೆ ನಡೆಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೆಂಪುಕೋಟೆ ಬಳಿ ಕಾರು ಸ್ಫೋಟ ಪ್ರಕರಣ – ವೈದ್ಯ ಉಮರ್‌ನ ತಾಯಿ, ಇಬ್ಬರು ಸಹೋದರರು ಸೇರಿ 13 ಮಂದಿ ವಶಕ್ಕೆ

ಶಾಲೆಯ ಶೌಚಾಲಯದಲ್ಲಿ ಪಟಾಕಿ ಹೊಡೆದ ವಿದ್ಯಾರ್ಥಿಗಳು – ಬಾಂಬ್ ಅಂತ ಬೆಚ್ಚಿಬಿದ್ದ ಸ್ಥಳೀಯರು.!

TAGGED:death toll rises to 12Delhi car blast: Three more deadhigh alert everywhere
Share This Article
Facebook Twitter Copy Link Print
Previous Article ಬಿಕಿನಿ ಧರಿಸಿ ಗಂಗಾ ನದಿಯಲ್ಲಿ ಸ್ನಾನ ಮಾಡಿದ ವಿದೇಶಿ ಮಹಿಳೆ -ವೈರಲ್ ವಿಡಿಯೋ ನೋಡಿ
Next Article ದೆಹಲಿ ನಿಗೂಢ ಸ್ಫೋಟದ ಹಿಂದೆ ಯಾರಿದ್ದಾರೋ ಅವರನ್ನು ಸುಮ್ಮನೆ ಬಿಡುವುದಿಲ್ಲ- ಪ್ರಧಾನಿ ಮೋದಿ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?