Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐ ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ ಹೈಕೋರ್ಟ್ ಇಂದು ಆದೇಶ ಹೊರಡಿಸಿದೆ.
ಬುರುಡೆ ಗ್ಯಾಂಗ್ ಶಾಕ್ ಎದುರಾಗಿದ್ದು, ಎಸ್ ಐ ಟಿ ತನಿಖೆಗೆ ನೀಡಿದ್ದ ತಡೆಯಾಜ್ಞೆಯನ್ನ ಹೈಕೋರ್ಟ್ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಇದರಿಂದ ಗಿರೀಶ್ ಮಟ್ಟಣ್ಣನವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ ಜಯಂತ್ ಹಾಗೂ ವಿಠ್ಠಲಗೌಡಗೆ ಮತ್ತೆ ತನಿಖೆಯ ಬಿಸಿ ಮುಟ್ಟಲಿದೆ.
ಈ ಹಿಂದೆ ಎಫ್‌ಐಆರ್ ರದ್ದುಗೊಳಿಸುವಂತೆ ನಾಲ್ವರು ಹೈಕೋರ್ಟ್ ಮೆಟ್ಟಿಲೇರಿದ್ದರು. ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ತಡೆಯಾಜ್ಞೆ ತೆರವುಗೊಳಿಸಿದ್ದು ಕಾರ್ಯಕರ್ತರಿಗೆ ಯಾವುದೇ ಕಿರುಕುಳವಾಗದಂತೆ ನೋಡಿಕೊಳ್ಳುವಂತೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡಕ್ಕೆ (SIT) ನಿರ್ದೇಶನ ನೀಡಿದರು. ಭಾರತೀಯ ನಾಗರಿಕ ಸುರಕ್ಷಾ ಸಂಹಿತ (BNNS) ಸೆಕ್ಷನ್ 35(3)ರ ಅಡಿಯಲ್ಲಿ ಕಾರ್ಯಕರ್ತರಾದ ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟಣ್ಣವರ್, ವಿಠಲ ಗೌಡ ಮತ್ತು ಜಯಂತ್ ಟಿ ಅವರಿಗೆ SIT ಈ ಹಿಂದೆ ನೋಟಿಸ್ ಜಾರಿ ನೀಡಿತ್ತು.
ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ಪೀಠ ತೆರವುಗೊಳಿಸಿದೆ.