Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಕೇಸ್ ಪ್ರಕರಣದಲ್ಲಿ ನೀಡಲಾದ ಸಮನ್ಸ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಈ ಮೂಲಕ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಗ್ ಶಾಕ್ ನೀಡಿದೆ.
ಗುರುವಾರ ಬಿಎಸ್ ಯಡಿಯೂರಪ್ಪ ಅವರು ಪೋಕ್ಸೋ ಕೇಸ್ ನಲ್ಲಿ ನೀಡಲಾಗಿದ್ದ ಸಮನ್ಸ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ನ್ಯಾಯಪೀಠವು ನಡೆಸಿತು.
ನ್ಯಾಯಾಧೀಶರು ತ್ವರಿತ ನ್ಯಾಯಾಲಯದ ಸಮನ್ಸ್ ರದ್ದುಪಡಿಸಲು ನಿರಾಕರಿಸಿದರು.
ಅಂದಹಾಗೇ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ 17 ವರ್ಷದ ಪುತ್ರಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರೋದಾಗಿ ಆರೋಪಿಸಿ ಮಹಿಳೆಯೊಬ್ಬರು ದೂರು ನೀಡಿದ್ದರು. ಈ ದೂರು ಆಧರಿಸಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಪೋಕ್ಸೋ ಕೇಸ್ ದಾಖಲಾಗಿತ್ತು.
Relationship ಹೆಚ್ಚುತ್ತಿದೆ ಏರ್‌ಪೋರ್ಟ್ ಡಿವೋರ್ಸ್! ಹೀಗಂದ್ರೇನು? ಏನಿದರ ವಿಶೇಷತೆ?
ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಹಿಂದೆ ಸರಿದರೆ ಶ್ರೀಲಂಕಾ ಆಟಗಾರರಿಗೆ 2 ವರ್ಷ ಬ್ಯಾನ್