Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಳಗಾವಿ : 28 ಕೃಷ್ಣಮೃಗಗಳು ಏಕಾಏಕಿ ನಿಗೂಡ ವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿಯ ಕಿತ್ತೂರು ಚನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ. ಇದೀಗ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ ಹೊರಡಿಸಿದ್ದಾರೆ.
ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ಮೊನ್ನೆ 8 ಜಿಂಕೆಗಳು ಸಾವನ್ನಪ್ಪಿದ್ದವು. ಇಂದು ಬೆಳಗ್ಗೆ ಮತ್ತೆ 20 ಜಿಂಕೆಗಳು ಸಾವನ್ನಪ್ಪಿವೆ.
ಜಿಂಕೆಗಳು ಅಸಹಜವಾಗಿ ಮೃತಪಟ್ಟಿರುವ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಅರಣ್ಯ,ಸಚಿವ ಈಶ್ವರ ಬಿ. ಖಂಡ್ರೆ ಅವರು ತನಿಖೆಗೆ ಆದೇಶ ನೀಡಿದ್ದಾರೆ. ಪ್ರಾಥಮಿಕ ವರದಿಗಳ ಪ್ರಕಾರ ಈ ಜಿಂಕೆಗಳು ಸಾಂಕ್ರಾಮಿಕ ಕಾಯಿಲೆಯಿಂದ ಮೃತಪಟ್ಟಿರುವುದಾಗಿ ವರದಿಯಾಗಿದ್ದು, ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಸಚಿವರು ಸೂಚಿಸಿದ್ದಾರೆ.