Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > Saalumarada Thimmakka’s funeral ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ
ಕರ್ನಾಟಕಪ್ರಮುಖ

Saalumarada Thimmakka’s funeral ಸರ್ಕಾರಿ ಗೌರವದೊಂದಿಗೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಬೆಂಗಳೂರು: ಸಾವಿರಾರು ಸಸಿಗಳನ್ನು ನೆಟ್ಟು, ಮಕ್ಕಳಂತೆ ಪೋಷಿಸಿ, ಜಗತ್ತಿಗೆ ಪರಿಸರ ಪ್ರೇಮದ ಪಾಠ ಹೇಳಿದ ಪದ್ಮಶ್ರೀ ಪುರಸ್ಕೃತೆ, ‘ವೃಕ್ಷಮಾತೆ’ ಸಾಲುಮರದ ತಿಮ್ಮಕ್ಕ (114) ಅವರು ಶನಿವಾರ ಪಂಚಭೂತಗಳಲ್ಲಿ ಲೀನವಾದರು.

ಬೆಂಗಳೂರಿನ ಜ್ಞಾನಭಾರತಿ ಬಳಿಯ ಕಲಾಗ್ರಾಮ ಆವರಣದಲ್ಲಿ, ನೂರಾರು ಅಭಿಮಾನಿಗಳು, ಗಣ್ಯರು ಮತ್ತು ಕುಟುಂಬಸ್ಥರ ನೋವಿನ ನಡುವೆ, ಸಕಲ ಸರ್ಕಾರಿ ಗೌರವಗಳೊಂದಿಗೆ ಅವರ ಅಂತ್ಯಕ್ರಿಯೆ ನೆರವೇರಿತು.

ಶುಕ್ರವಾರ (ನ.14) ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ವಯೋಸಹಜ ಕಾಯಿಲೆಯಿಂದ ನಿಧನರಾದ ತಿಮ್ಮಕ್ಕನವರ ಪಾರ್ಥಿವ ಶರೀರವನ್ನು, ಶನಿವಾರ ಬೆಳಗ್ಗೆ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕಾಗಿ ಇರಿಸಲಾಗಿತ್ತು.

ವಿಪಕ್ಷ ನಾಯಕ ಆರ್. ಅಶೋಕ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಗಣ್ಯರು, ಕಲಾವಿದರು ಮತ್ತು ಸಾವಿರಾರು ಸಾರ್ವಜನಿಕರು ಆಗಮಿಸಿ, ಹಸಿರು ತಾಯಿಗೆ ಅಂತಿಮ ನಮನ ಸಲ್ಲಿಸಿದರು.

ಅಂತಿಮ ದರ್ಶನಕ್ಕೂ ಮುನ್ನ, ಅವರ ಪಾರ್ಥಿವ ಶರೀರವನ್ನು ರಾಮನಗರ ಜಿಲ್ಲೆಯ ಮಾಗಡಿ ತಾಲೂಕಿನ ಹುಲಿಕಲ್ ಗ್ರಾಮ ಹಾಗೂ ಹಾಸನ ಜಿಲ್ಲೆಯ ಬೇಲೂರಿಗೆ ಕೊಂಡೊಯ್ದು, ಅಲ್ಲಿನ ಜನರಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು. ನಂತರ, ಬೆಳಗ್ಗೆ 8 ಗಂಟೆಯ ವೇಳೆಗೆ ಪಾರ್ಥಿವ ಶರೀರವನ್ನು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರಕ್ಕೆ ತರಲಾಯಿತು.

ಮಧ್ಯಾಹ್ನದ ಬಳಿಕ, ಮಲ್ಲತಹಳ್ಳಿಯಲ್ಲಿರುವ ಕಲಾಗ್ರಾಮಕ್ಕೆ ಪಾರ್ಥಿವ ಶರೀರವನ್ನು ಕೊಂಡೊಯ್ಯಲಾಯಿತು. ಅಲ್ಲಿ, ಗೃಹ ಸಚಿವ ಡಾ. ಜಿ. ಪರಮೇಶ್ವರ್ ಮತ್ತು ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಸರ್ಕಾರದ ಪರವಾಗಿ ಅಂತಿಮ ಗೌರವ ಸಲ್ಲಿಸಿದರು.

ಪೊಲೀಸರು ಮೂರು ಸುತ್ತು ಕುಶಾಲತೋಪು ಹಾರಿಸುವ ಮೂಲಕ ‘ವೃಕ್ಷಮಾತೆ’ಗೆ ಗೌರವ ವಂದನೆ ಸಲ್ಲಿಸಿದರು. ನಂತರ, ಅವರ ಕುಟುಂಬಸ್ಥರು ಧಾರ್ಮಿಕ ವಿಧಿವಿಧಾನಗಳನ್ನು ಪೂರೈಸಿ, ಅಂತ್ಯಕ್ರಿಯೆ ನೆರವೇರಿಸಿದರು.

Shubman Gill hospitalized ಶುಭಮನ್ ಗಿಲ್‌ಗೆ ಕುತ್ತಿಗೆ ನೋವು: ಆಸ್ಪತ್ರೆಗೆ ದಾಖಲು

TAGGED:Saalumarada Thimmakka's funeral with state honors
Share This Article
Facebook Twitter Copy Link Print
Previous Article Shubman Gill hospitalized ಶುಭಮನ್ ಗಿಲ್‌ಗೆ ಕುತ್ತಿಗೆ ನೋವು: ಆಸ್ಪತ್ರೆಗೆ ದಾಖಲು
Next Article ASTRO | ಇಂದು ತ್ರಿಗ್ರಾಹಿ,‌ ಆದಿತ್ಯ ಮಂಗಳ ಯೋಗ: ಈ ಐದು ರಾಶಿಗಳ ಜನರಿಗೆ ಭಾರೀ ಅದೃಷ್ಟ

Popular Posts

ಯೂಟ್ಯೂಬ್ ವ್ಲಾಗ್ಸ್‌, ರೀಲ್ಸ್, ಬ್ರ್ಯಾಂಡ್ ಪ್ರಮೋಟ್ ಮಾಡುವ ಸೋನುಗೆ ಬರುವ ಆದಾಯ ಎಷ್ಟು?; ಟ್ರೋಲರ್ಸ್ ಗಳಿಗೆ ಮುಟ್ಟಿ ನೋಡಿಕೊಳ್ಳುವಂತೆ ತಿರುಗೇಟು ಕೊಟ್ಟ ಸೋನು ಶ್ರೀನಿವಾಸ್ ಗೌಡ

2 Min Read

Voter ID ಗ್ಯಾರಂಟಿ ಯೋಜನೆಗಳ ಲಾಭ ಪಡೆಯಲು ವೋಟರ್ ಐಡಿ ಕಡ್ಡಾಯ ಎಂದ ಸಿಎಂ ಡಿಕೆ

2 Min Read

ಗೃಹಲಕ್ಷ್ಮಿ ಯೋಜನೆಯಲ್ಲಿ ಏನೆಲ್ಲಾ ಚೇಂಜ್ ಆಗ್ತಿದೆ; ಅರ್ಜಿ ಸಲ್ಲಿಸಲು ಏನು ಮಾಡ್ಬೇಕು?

2 Min Read

Rain shortage ಈ ಬಾರಿ ರಾಜ್ಯದಲ್ಲಿ ಮುಂಗಾರು ಮಳೆ ಶೇ.21 ಕೊರತೆ!

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read
ಪ್ರಮುಖದೇಶಮನರಂಜನೆ

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read
ಪಂಚಾಂಗಈ ದಿನದಿನ ಭವಿಷ್ಯಪ್ರಮುಖ

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read
ಕರ್ನಾಟಕದೇಶಪ್ರಮುಖ

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Social Networks

Facebook-f Instagram Twitter
Welcome Back!

Sign in to your account

Lost your password?