Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube
newsics.com
ಬೆಂಗಳೂರು: ರಾಜ್ಯದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ.
ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಚಾಮರಾಜನಗರ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಒಂದೆರಡು ಕಡೆ ಲಘು ಮಳೆಯಾಗುವ ಸಾಧ್ಯತೆ ಇದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ. ಕರಾವಳಿಯಲ್ಲೂ ಸಧ್ಯಕ್ಕೆ ವರುಣಾರ್ಭಟ ನಿಂತಿದ್ದು, ಮಳೆಯ ಸಾಧ್ಯತೆ ಕಡಿಮೆಯಿದೆ. ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿಯೂ ಉಳಿದ ಭಾಗಗಳಂತೆ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.