Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಅತಿ ದೊಡ್ಡ ಡಿಜಿಟಲ್ ಅರೆಸ್ಟ್! 31.83 ಕೋಟಿ ಕಳೆದುಕೊಂಡ ಬೆಂಗಳೂರು ಟೆಕ್ಕಿ!
ಕರ್ನಾಟಕಪ್ರಮುಖ

ಅತಿ ದೊಡ್ಡ ಡಿಜಿಟಲ್ ಅರೆಸ್ಟ್! 31.83 ಕೋಟಿ ಕಳೆದುಕೊಂಡ ಬೆಂಗಳೂರು ಟೆಕ್ಕಿ!

Share
3 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTube

newsics.com

ಡಿಜಿಟಲ್‌ ಅರೆಸ್ಟ್‌ ಎಂಬ ಆನ್‌ಲೈನ್‌ ವಂಚನೆ ಪ್ರತಿನಿತ್ಯ ವರದಿಯಾಗುತ್ತಿದೆ. ಆನ್‌ಲೈನ್‌ ವಂಚಕರು ತಾವು ಪೊಲೀಸ್‌ ಅಧಿಕಾರಿಗಳು, ಸಿಬಿಐ ಏಜೆಂಟ್‌, ತೆರಿಗೆ ಅಧಿಕಾರಿಗಳೆಂಬ ಸೋಗಿನಲ್ಲಿ ಕರೆ ಮಾಡಿ ವಂಚನೆ ಮಾಡುತ್ತಾರೆ. ಸಾಕಷ್ಟು ಜನರು ಇಂತಹ ಕರೆಗಳಿಗೆ ಭಯಗೊಂಡು ತಕ್ಷಣ ವಂಚಕರು ಹೇಳಿದ್ದಷ್ಟು ಹಣ ಪಾವತಿ ಮಾಡಿದ್ದಾರೆ.

ಕರೆ ಸ್ವೀಕರಿಸಿದವರನ್ನು ಫೋನ್‌ ಕಟ್‌ ಮಾಡಲು ಬಿಡದಂತೆ ಎಂಗೇಜ್‌ ಮಾಡುತ್ತಾ, ವಿವಿಧ ಅಧಿಕಾರಿಗಳ ಹೆಸರಿನಲ್ಲಿ ನಾನಾ ಕರೆ ಮಾಡುತ್ತಾ. ಇವರು ಭಯಗೊಳಿಸುವುದುಂಟು. ಕರ್ನಾಟಕದಲ್ಲಿ ಪ್ರತಿನಿತ್ಯ ಇಂತಹ ಘಟನೆ ವರದಿಯಾಗುತ್ತಿದೆ. ಇದೀಗ ಕರ್ನಾಟಕದಲ್ಲೇ ಅತಿದೊಡ್ಡ ಡಿಜಿಟಲ್ ಅರೆಸ್ಟ್ ಪ್ರಕರಣ ಇದಾಗಿದ್ದು, ಬೆಂಗಳೂರು ಮಹಿಳಾ ಟೆಕ್ಕಿಯೊಬ್ಬರು ಬರೋಬ್ಬರಿ 31.83 ಕೋಟಿ ರೂ. ಕಳೆದುಕೊಂಡಿದ್ದಾರೆ.

ಇಂದಿರಾನಗರದ ನಿವಾಸಿ, 57 ವರ್ಷ ವಯಸ್ಸಿನ ಮಹಿಳಾ ಟೆಕ್ಕಿಯನ್ನು ಸೈಬರ್ ಅಪರಾಧಿಗಳು ಆರು ತಿಂಗಳಿಗೂ ಹೆಚ್ಚು ಕಾಲ ನಿರಂತರ ಕಣ್ಗಾವಲಿನಲ್ಲಿರಿಸಿದ್ದರು. ಅಲ್ಲದೆ, ಹಣ ದೋಚಿ ನಂತರ ಹಠಾತ್ತನೆ ಸಂಪರ್ಕ ಕಡಿತಗೊಳಿಸಿದ್ದರು ಎಂದು ಹಿರಿಯ ಸೈಬರ್ ಅಪರಾಧ ತನಿಖಾಧಿಕಾರಿಯೊಬ್ಬರ ಹೇಳಿಕೆ ಉಲ್ಲೇಖಿಸಿ ‘ಡೆಕ್ಕನ್ ಹೆರಾಲ್ಡ್’ ವರದಿ ಮಾಡಿದೆ.

2024 ರ ಸೆಪ್ಟೆಂಬರ್ 15 ರಂದು ಮಹಿಳೆಗೆ ಕೊರಿಯರ್ ಸೇವೆಯಾದ ಡಿಎಚ್​ಎಲ್​ನಿಂದ ಬಂದವನೆಂದು ಹೇಳಿಕೊಂಡ ವ್ಯಕ್ತಿಯೊಬ್ಬ ಕರೆ ಮಾಡಿದ್ದಾನೆ. ಆಕೆಯ ಹೆಸರಿನಲ್ಲಿ ಮೂರು ಕ್ರೆಡಿಟ್ ಕಾರ್ಡ್‌ಗಳು, ನಾಲ್ಕು ಪಾಸ್‌ಪೋರ್ಟ್‌ಗಳು ಮತ್ತು ನಿಷೇಧಿತ MDMA ಮಾದಕ ದ್ರವ್ಯಗಳನ್ನು ಒಳಗೊಂಡಿರುವ ಒಂದು ಪ್ಯಾಕೇಜ್ ಮುಂಬೈನ ಅಂಧೇರಿಯಲ್ಲಿರುವ ಡಿಎಚ್​ಎಲ್​ ಕೇಂದ್ರಕ್ಕೆ ಬಂದಿದೆ ಎಂದು ಹೇಳಿದ್ದಾನೆ. ಆದರೆ, ತಾನು ಬೆಂಗಳೂರಿನಲ್ಲಿ ವಾಸಿಸುತ್ತಿದ್ದು, ಕೊರಿಯರ್ ಜೊತೆ ಯಾವುದೇ ಸಂಪರ್ಕವಿಲ್ಲ ಎಂದು ಆಕೆ ಹೇಳಿದ್ದಾಳೆ. ಆಗ, ಫೋನ್ ಸಂಖ್ಯೆ ಪ್ಯಾಕೇಜ್‌ಗೆ ಲಿಂಕ್ ಆಗಿರುವುದರಿಂದ ಇದು ಸೈಬರ್ ಅಪರಾಧವಾಗಿರಬಹುದು ಎಂದು ಕರೆ ಮಾಡಿದವ ಹೇಳಿಕೊಂಡಿದ್ದಾನೆ. ಈ ವಿಷಯದ ಬಗ್ಗೆ ಸೈಬರ್ ಅಪರಾಧ ಸೆಲ್​ಗೆ ದೂರು ನೀಡುವಂತೆ ಆಕೆಯನ್ನು ಕೇಳಿಕೊಂಡಿದ್ದಾನೆ. ಆಕೆ ಪ್ರತಿಕ್ರಿಯಿಸುವ ಮೊದಲು, ಕರೆಯನ್ನು ಸಿಬಿಐ ಅಧಿಕಾರಿಯ ಸೋಗಿನಲ್ಲಿರುವ ವ್ಯಕ್ತಿಗೆ ವರ್ಗಾಯಿಸಲಾಗಿತ್ತು.

ನಂತರ, ಮಹಿಳೆಯ ಗುರುತನ್ನು ದುರುಪಯೋಗಪಡಿಸಿಕೊಂಡ ಸೈಬರ್ ವಂಚಕರು ಆಕೆಯ ಮೇಲೆ ನಿಗಾ ಇಡುತ್ತಿದ್ದಾರೆ ಎಂದು ಹೇಳಿ, ಸ್ಥಳೀಯ ಪೊಲೀಸರನ್ನು ಸಂಪರ್ಕಿಸದಂತೆ ಅಥವಾ ಕಾನೂನು ಸಹಾಯ ಪಡೆಯದಂತೆ ಆಕೆಗೆ ಎಚ್ಚರಿಕೆ ನೀಡಿದ್ದಾರೆ. ಆಕೆಗೆ ಮಾಹಿತಿ ನೀಡಿದರೆ ಆಕೆಯ ಕುಟುಂಬವನ್ನು ಪ್ರಕರಣದಲ್ಲಿ ಸಿಲುಕಿಸುವುದಾಗಿಯೂ ಅವರು ಬೆದರಿಕೆ ಹಾಕಿದ್ದರು ಎಂದು ವರದಿ ಉಲ್ಲೇಖಿಸಿದೆ. ಹೀಗಾಗಿ ಭಯದಿಂದ ಮತ್ತು ತನ್ನ ಮಗನ ಮದುವೆ ಸಮೀಪಿಸುತ್ತಿದ್ದರಿಂದ ಹೆದರಿದ್ದ ಸಂತ್ರಸ್ತೆ ವಂಚಕರು ಹೇಳಿದ ರೀತಿಯಲ್ಲೇ ನಡೆದುಕೊಂಡಿದ್ದರು.

ಅದಾದ ನಂತರ ಕೆಲವು ದಿನಗಳ ಬಳಿಕ ಸ್ಕೈಪ್ ವಿಡಿಯೋ ಕರೆಯ ಮೂಲಕ ಸಂತ್ರಸ್ತೆಯನ್ನು ‘ಗೃಹಬಂಧನ’ಕ್ಕೆ ಒಳಪಡಿಸಲಾಯಿತು. ನಂತರ, ಸಿಬಿಐ ಅಧಿಕಾರಿ ಪ್ರದೀಪ್ ಸಿಂಗ್ ಎಂದು ಹೇಳಿಕೊಂಡ ವ್ಯಕ್ತಿಯೊಬ್ಬ ರಾಹುಲ್ ಯಾದವ್ ಎಂಬ ಇನ್ನೊಬ್ಬ ವ್ಯಕ್ತಿಗೆ ಒಂದು ವಾರದ ಕಾಲ ಆಕೆಯನ್ನು ಮೇಲ್ವಿಚಾರಣೆ ಮಾಡಲು ನಿಯೋಜಿಸಿದ. ಈ ಸಮಯದಲ್ಲಿ, ಸಂತ್ರಸ್ತೆ ವರ್ಕ್ ಫ್ರಂ ಹೋಮ್​ನಲ್ಲಿದ್ದರು.

 

2024 ರ ಸೆಪ್ಟೆಂಬರ್ 23ರಂದು, ಆರ್‌ಬಿಐನ ಹಣಕಾಸು ಗುಪ್ತಚರ ಘಟಕ (ಎಫ್‌ಐಯು)ಕ್ಕೆ ಆಸ್ತಿಗಳನ್ನು ಘೋಷಿಸುವಂತೆ ಮಹಿಳೆಗೆ ಪ್ರದೀಪ್ ಸಿಂಗ್ ಸೂಚಿಸಿದ್ದ. ಅದರಂತೆ ಮಹಿಳೆ ನಡೆದುಕೊಂಡಿದ್ದರು. ನಂತರ ವಂಚಕರು ಹಂತಹಂತವಾಗಿ ಹಣ ವಸೂಲಿ ಮಾಡಿದ್ದರು.

ಹಿರಿಯ ಪೊಲೀಸ್ ಅಧಿಕಾರಿಯೊಬ್ಬರ ಪ್ರಕಾರ, ವಂಚಕರ ಸೂಚನೆಯಂತೆ ಮಹಿಳೆಯು ತಮ್ಮ ಸ್ಥಿರ ಠೇವಣಿಗಳನ್ನು ಹೊರತುಪಡಿಸಿ, ಉಳಿದಿದ್ದ ಉಳಿತಾಯದ ₹31.83 ಕೋಟಿ ಹಣವನ್ನು 187 ವಹಿವಾಟುಗಳಲ್ಲಿ ಸೈಬರ್ ಕಳ್ಳರ ಖಾತೆಗೆ ವರ್ಗಾಯಿಸಿದ್ದಾರೆ. 2025ರ ಫೆಬ್ರವರಿ ಒಳಗೆ ಪರಿಶೀಲನೆ ಮಾಡಿ ಹಣವನ್ನು ಹಿಂದಿರುಗಿಸುವುದಾಗಿ ನಕಲಿ ಅಧಿಕಾರಿಗಳು ಭರವಸೆ ನೀಡಿದ್ದರು ಮತ್ತು ‘ಕ್ಲಿಯರೆನ್ಸ್ ಸರ್ಟಿಫಿಕೇಟ್’ ಕೂಡ ನೀಡಿದ್ದರು.

 

ಹಣ ಮರಳಿ ನೀಡಲು ವಂಚಕರು ಸತತವಾಗಿ ನೆಪ ಹೇಳಲು ಆರಂಭಿಸಿದಾಗ ಸಂತ್ರಸ್ತೆಗೆ ಅನುಮಾನ ಬಂದು, 2025ರ ನವೆಂಬರ್ 14 ರಂದು ಬೆಂಗಳೂರು ಪೂರ್ವ ಸೈಬರ್ ಕ್ರೈಮ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

TAGGED:#digital #arrest #Bangalore #techie #cybercrime
Share This Article
Facebook Twitter Copy Link Print
Previous Article ಬಸ್ ಡೀಸೆಲ್ ಟ್ಯಾಂಕರ್‌ಗೆ ಡಿಕ್ಕಿ : 42 ಭಾರತೀಯ ಉಮ್ರಾ ಯಾತ್ರಿಕರು ಸಾವು
Next Article ಬಿಹಾರದಲ್ಲಿ NDA ಸರ್ಕಾರ ರಚನೆಗೆ ಮುಹೂರ್ತ ಫಿಕ್ಸ್

Popular Posts

ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಫೇಸ್ 3 ಯೋಜನೆ : 3,627 ಮರಗಳ ಮಾರಣಹೋಮಕ್ಕೆ ಶೀಘ್ರವೇ ಮುಹೂರ್ತ ಫಿಕ್ಸ್.!

1 Min Read

ಕರಾವಳಿ – ಮಲೆನಾಡು ಪ್ರವಾಸೋದ್ಯಮ ಬ್ರಾಂಡ್‌ ಅಂಬಾಸಿಡರ್‌ ಆಗಿ ರಿಷಬ್‌ ಶೆಟ್ಟಿ ನೇಮಕ

2 Min Read

ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಭಾಗಕ್ಕೆ ಮರದ ತುಂಡು ತುಂಬಿ ವಿಕೃತಿ

2 Min Read

ಇಂದಿರಾ ಗಾಂಧಿ ಎಂಬ ಪದಕ್ಕೆ ಟರ್ಕಿಶ್ ಭಾಷೆಯಲ್ಲಿ ಅರ್ಥವೇನು?

2 Min Read

You Might Also Like

ಕರ್ನಾಟಕಪ್ರಮುಖ

Effect of Cross Voting ಶಿಸ್ತಿನ ಪಕ್ಷ ಎಂದೇ ಖ್ಯಾತಿ ಪಡೆದಿರುವ ಬಿಜೆಪಿಯಲ್ಲಿ ಏನಾಗಿದೆ?

2 Min Read
ಪ್ರಮುಖಮನರಂಜನೆ

ನಟಿ ಸಮಂತಾ ಪ್ರೆಗ್ನೆಂಟ್?;ಬೇಬಿ ಬಂಪ್ ಮುಚ್ಚಿಡಲು ಆಕೆ ಸೀರೆಯಲ್ಲೇ ಕ್ಯಾಮರಾ ಮುಂದೆ ಬಂದಿದ್ರಾ?

2 Min Read
ಪ್ರಮುಖಕರ್ನಾಟಕ

ಗೃಹಲಕ್ಷ್ಮಿ ಹಣ ದುರುಪಯೋಗ ತಡೆಗೆ 11 ಸೂಚನೆಗಳ ಜಾರಿ!

3 Min Read
ಕರ್ನಾಟಕಪ್ರಮುಖ

Guarantee Schemes ಸುಳ್ಳು ಹೇಳಿ ಗ್ಯಾರಂಟಿ ತಗೊಂಡ್ರೆ ಇವ್ರು ಮನೆ ಮನೆಗೂ ಬರ್ತಾರಂತೆ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?