Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ; ಪತ್ರದಲ್ಲೇನಿದೆ?
ಕರ್ನಾಟಕಪ್ರಮುಖ

ಪ್ರಧಾನಿಗೆ ಪತ್ರ ಬರೆದ 8 ನೇ ತರಗತಿ ಬಾಲಕ; ಪತ್ರದಲ್ಲೇನಿದೆ?

Share
1 Min Read
SHARE

Subscribe ನ್ಯೂಸಿಕ್ಸ್ ಕನ್ನಡ NewsicsKannada/YouTubenewsics.com

ಹಲವು ವರ್ಷಗಳಿಂದ ಗ್ರಾಮದಲ್ಲಿ ಮೂಲಸೌಕರ್ಯಗಳಿಲ್ಲದೆ ಒದ್ದಾಡುತ್ತಿದ್ದಾರೆ. ಈ ಸಮಸ್ಯೆಯನ್ನು ನಗರಸಭೆಯ ಗಮನಕ್ಕೆ ತಂದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಈ ಕುರಿತು ಗದಗನ ಬೆಟಗೇರಿ ಗ್ರಾಮದ 8 ನೇ ತರಗತಿಯ ವಿದ್ಯಾರ್ಥಿಯೋರ್ವ ಪ್ರಧಾನಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದ್ದಾನೆ.

ಹದಗೆಟ್ಟ ರಸ್ತೆ, ಚರಂಡಿಯ ಅವ್ಯವಸ್ಥೆ ಸೇರಿದಂತೆ ಬೆಟಗೇರಿಯ ಜನರು ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಮಳೆಗಾಲದಲ್ಲಿ ಕೆಸರು ಗದ್ದೆಯಂತಾಗುವ ರಸ್ತೆಯಲ್ಲಿ ಗ್ರಾಮಸ್ಥರಿಗೆ ಓಡಾಡಲು ಕಷ್ಟವಾಗುತ್ತಿದೆ. ದಿನನಿತ್ಯ ಮನೆಯ ಮುಂದೆ ಆಟವಾಡುವದೂ ಕಷ್ಟವಾಗಿದೆ ಎಂದು ಮಕ್ಕಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಳೆದ 20 ವರ್ಷಗಳಿಂದ ಇದೇ ವ್ಯವಸ್ಥೆಯಲ್ಲಿರುವ ಗ್ರಾಮಸ್ಥರು ನರಕಯಾತನೆ ಅನುಭವಿಸುತ್ತಿದ್ದಾರೆ. ಇದನ್ನು ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೆ ಬದಲಾವಣೆ ಕಾಣದಾಗಿದೆ. ಈ ಎಲ್ಲಾ ಅವ್ಯವಸ್ಥೆಯಿಂದ ನೊಂದ ಬಾಲಕ ಸಾಯಿರಾಮ್, ಪ್ರಧಾನಿಗೆ ಪತ್ರ ಬರೆದಿದ್ದಾನೆ.

ತಾನು ಸೇಂಟ್ ಜಾನ್ಸ್ ಶಾಲೆಯಲ್ಲಿ 8 ನೇ ತರಗತಿಯಲ್ಲಿ ಓದುತ್ತಿದ್ದು, ತನ್ನ ಮನೆಯ ಮುಂದಿನ ರಸ್ತೆ ಹಾಗೂ ಓಣಿಯ ರಸ್ತೆ ಹದಗೆಟ್ಟಿದೆ ಎಂದು ತನ್ನ ಪತ್ರದಲ್ಲಿ ಬರೆದುಕೊಂಡಿರುವ ಬಾಲಕ, ಪರಿಹಾರ ಒದಗಿಸುವಂತೆ ಮೋದಿಯವರಲ್ಲಿ ವಿನಂತಿಸಿಕೊಂಡಿದ್ದಾನೆ. ನಮ್ಮ ಮನೆಯ ಮುಂದಿನ ರಸ್ತೆಯಲ್ಲಿ ಕೆಸರು ತುಂಬಿದೆ. ನಾನೇ ಹಲವು ಬಾರಿ ಕೆಸರಲ್ಲಿ ಬಿದ್ದಿದ್ದೇನೆ ಎಂದು ತನ್ನ ಗೋಳು ಹೇಳಿಕೊಂಡಿದ್ದಾನೆ. ಅಷ್ಟೇ ಅಲ್ಲದೆ ಕುಡಿಯುವ ನೀರೂ ಸರಿಯಾದ ಸಮಯಕ್ಕೆ ಬರುವುದಿಲ್ಲ,ನಮಗೆ ಕಷ್ಟವಾಗುತ್ತಿದೆ. ಹೀಗಾಗಿ ರಸ್ತೆ ಹಾಗೂ ಕುಡಿಯುವ ನೀರಿನ ವ್ಯವಸ್ಥೆಯನ್ನು ಸರಿಪಡಿಸಿ ಎಂದು ತನ್ನ ಪತ್ರದಲ್ಲಿ ವಿನಂತಿಸಿಕೊಂಡಿದ್ದಾನೆ. ಬಾಲಕ ಮೋದಿಗೆ ಪತ್ರ ಬರೆದಿರುವುದರಿಂದ ಬಡಾವಣೆಯ ಜನರು ಆನಂದದಲ್ಲಿದ್ದು, ಪ್ರಧಾನಿಯಿಂದ ಸ್ಪಂದನೆ ಸಿಗುವ ಭರವಸೆಯಲ್ಲಿದ್ದಾರೆ.

ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?

TAGGED:8th grade boy writes letter to Prime Minister; what is in the letter?
Share This Article
Facebook Twitter Copy Link Print
Previous Article ಡೇಟಿಂಗ್ ಆ್ಯಪ್ ನಲ್ಲಿ ಡಿಂಗ್ ಡಿಂಗ್ ಮಾಡಿ ಸಿಕ್ಕಿಬಿದ್ದ ಜೋಡಿ; ಹಣದ ದುರಾಸೆಗೆ ಈ ಟೆಕ್ಕಿಗಳು ಮಾಡಿದ್ದೇನು?
Next Article ಮೇಕಪ್‌ ಇಲ್ಲದೆ ಮುಖ ಸುಂದರವಾಗಿ ಕಾಣಿಸಲು ಜಸ್ಟ್ ಈ ರೀತಿ ಮಾಡಿ

Popular Posts

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಸ್ಮೃತಿ ಮಂದಾನಗೆ ಸಾಟಿಯಿಲ್ಲ! ಪುರುಷ-ಮಹಿಳಾ ಕ್ರಿಕೆಟ್‌ನಲ್ಲಿ ಯಾರೂ ಮಾಡದ ವಿಶ್ವ ದಾಖಲೆ

2 Min Read

ಪರಿಷತ್ ಚುನಾವಣೆ ಮೂಲಕ ಬಿಜೆಪಿ ವರಿಷ್ಠರಿಗೆ ಡಿಕೆ ಶಿವಕುಮಾರ್ ಸಾರಿದ್ದೇನು?

3 Min Read

ಟಿ20 ವಿಶ್ವಕಪ್‌ ಟೂರ್ನಿಯಿಂದ ಕನ್ನಡತಿ ಶ್ರೇಯಾಂಕಾ ಪಾಟೀಲ್ ಔಟ್‌

3 Min Read

ಚಿನ್ನದ ಬೆಲೆ ಭಾರಿ ಇಳಿಕೆ: ಇಂದಿನ ಗೋಲ್ಡ್ ರೇಟ್ ಎಷ್ಟು?

1 Min Read

You Might Also Like

ಪ್ರಮುಖ

‘ಟೆಲಿಗ್ರಾಂ’ ನಿಷೇಧಿಸಿದ ಸರ್ಕಾರದ ಆದೇಶ ಎತ್ತಿಹಿಡಿದ ದೆಹಲಿ ಹೈಕೋರ್ಟ್!

2 Min Read
ಪ್ರಮುಖಮನರಂಜನೆ

ಟ್ರಾನ್ಸ್‌ಜೆಂಡರ್ ಎಂದ ನೆಟ್ಟಿಗರಿಗೆ ಖುಷ್ಬೂ ಸುಂದರ್ ಮಗಳು ಆನಂದಿತಾ ತಿರುಗೇಟು

2 Min Read
ಪ್ರಮುಖ

ಬಿಜೆಪಿ ನಾಯಕನ ಜೀವಂತ ಸುಟ್ಟ ದುರ್ಷ್ಕರ್ಮಿಗಳು, ಕಾರು ಟ್ರಾಪ್ ಮಾಡಿ ಕೃತ್ಯ

2 Min Read
ಪ್ರಮುಖಮನರಂಜನೆ

ಗುಟ್ಕಾ ಜಗಿಯುತ್ತಲೇ ಯೋಗ ಮಾಡಿದ್ರಾ ನಟ ಕಿಶನ್? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?